ಸೋಮವಾರ, 24 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT

ದಕ್ಷಿಣ ಶಿಕ್ಷಕರ ಕ್ಷೇತ್ರ: 5 ಕೇಂದ್ರಗಳಲ್ಲಿ ಮತದಾನಕ್ಕೆ ಸಿದ್ಧತೆ

ಜಿಲ್ಲೆಯಲ್ಲಿ 2,181 ಮತದಾರರು, ಬೆಳಿಗ್ಗೆ 8ರಿಂದ ಸಂಜೆ 4ರವರೆಗೆ ಹಕ್ಕು ಚಲಾವಣೆಗೆ ಅವಕಾಶ
Published 2 ಜೂನ್ 2024, 15:54 IST
Last Updated 2 ಜೂನ್ 2024, 15:54 IST
ಅಕ್ಷರ ಗಾತ್ರ

ಚಾಮರಾಜನಗರ: ವಿಧಾನ ಪರಿಷತ್‌ನ ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ಸೋಮವಾರ (ಜೂನ್‌ 3) ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯವರೆಗೆ ಮತದಾನ ನಡೆಯಲಿದ್ದು, ಜಿಲ್ಲೆಯಲ್ಲಿ ಐದು ಮತಗಟ್ಟೆಗಳನ್ನು ಸ್ಥಾಪಿಸಿಲಾಗಿದೆ. ಮತದಾನಕ್ಕೆ ಜಿಲ್ಲಾಡಳಿತ ಎಲ್ಲ ಸಿದ್ಧತೆಗಳನ್ನೂ ಮಾಡಿದೆ. 

ಸಿದ್ಧತೆಗಳ ಬಗ್ಗೆ ಭಾನುವಾರ ಮಾಹಿತಿ ನೀಡಿದ ಜಿಲ್ಲಾಚುನಾವಣಾಧಿಕಾರಿ, ಜಿಲ್ಲಾಧಿಕಾರಿ ಸಿ.ಟಿ.ಶಿಲ್ಪಾನಾಗ್‌, ‘11 ಅಭ್ಯರ್ಥಿಗಳು ಕಣದಲ್ಲಿದ್ದು, ಮತದಾನಕ್ಕೆ ಮತಪತ್ರಗಳನ್ನು ಬಳಸಲಾಗುತ್ತಿದೆ’ ಎಂದರು.  

ಗುಂಡ್ಲುಪೇಟೆಯ ತಾಲ್ಲೂಕು ಆಡಳಿತ ಸೌಧ ಕೊಠಡಿ ಸಂಖ್ಯೆ 17, ಚಾಮರಾಜನಗರದ ತಾಲ್ಲೂಕು ಆಡಳಿತ ಸೌಧದ ನೆಲಮಹಡಿಯಲ್ಲಿರುವ ಮೀಟಿಂಗ್ ಹಾಲ್, ಯಳಂದೂರು ತಾಲ್ಲೂಕು ಆಡಳಿತ ಸೌಧದ ನೆಲಮಹಡಿಯಲ್ಲಿರುವ ಕೊಠಡಿ ಸಂಖ್ಯೆ 1ರ ಮೀಟಿಂಗ್ ಹಾಲ್, ಕೊಳ್ಳೇಗಾಲದ ತಾಲ್ಲೂಕು ಆಡಳಿತ ಸೌಧದ ನೆಲಮಹಡಿಯಲ್ಲಿರುವ ಕೇಸ್ವಾನ್ ಕೊಠಡಿ ಸಂಖ್ಯೆ 2 ಮತ್ತು ಹನೂರು ತಾಲ್ಲೂಕಿಗೆ ಸಂಬಂಧಪಟ್ಟಂತೆ ಪಶು ವೈದ್ಯಕೀಯ ಆಸ್ಪತ್ರೆ ಸಭಾಂಗಣದಲ್ಲಿ ಮತಗಟ್ಟೆಗಳನ್ನು ತೆರೆಯಲಾಗಿದೆ. 

2,181 ಮತದಾರರು: ಜಿಲ್ಲೆಯಲ್ಲಿ ಒಟ್ಟು 2,181 ಮಂದಿ ಮತದಾರರು ಇದ್ದಾರೆ. ಗುಂಡ್ಲುಪೇಟೆ ತಾಲ್ಲೂಕಿನಲ್ಲಿ 306 ಪುರುಷರು, 97 ಮಹಿಳೆಯರು ಸೇರಿದಂತೆ 403, ಚಾಮರಾಜನಗರ 384 ಪುರುಷರು, 219 ಮಹಿಳೆಯರು ಸೇರಿ 603, ಯಳಂದೂರಿನಲ್ಲಿ 148 ಪುರುಷರು, 54 ಮಹಿಳೆಯರು ಸೇರಿ 202, ಕೊಳ್ಳೇಗಾಲದಲ್ಲಿ 417 ಪುರುಷರು, 307 ಮಹಿಳೆಯರು ಸೇರಿ 724 ಮತ್ತು ಹನೂರು ತಾಲ್ಲೂಕಿನಲ್ಲಿ 193 ಪುರುಷರು, 56 ಮಹಿಳೆಯರು ಸೇರಿದಂತೆ ಒಟ್ಟು 249 ಮತದಾರರಿದ್ದಾರೆ.

ಮಸ್ಟರಿಂಗ್ ಕಾರ್ಯ: ನಗರದ ಜೆ.ಎಚ್‌.ಪಟೇಲ್‌ ಸಭಾಂಗಣದಲ್ಲಿ ಭಾನುವಾರ ಮಸ್ಟರಿಂಗ್‌ ಕಾರ್ಯ ನಡೆಯಿತು. ಚುನಾವಣೆಗೆ ನಿಯೋಜಿತಗೊಂಡ ಅಧಿಕಾರಿಗಳು ಮತ್ತು ಸಿಬ್ಬಂದಿ ಚುನಾವಣಾ ಪರಿಕರಗಳೊಂದಿಗೆ ತಮಗೆ ನಿಗದಿಪಡಿಸಲಾದ ಮತಗಟ್ಟೆಗಳಿಗೆ ತೆರಳಿದರು. 

ಜಿಲ್ಲಾಧಿಕಾರಿ ಶಿಲ್ಪಾ ನಾಗ್‌, ಎಸ್‌ಪಿ ಪದ್ಮಿನಿ ಸಾಹು ಅವರು ಸಭಾಂಗಣಕ್ಕೆ ಭೇಟಿ ನೀಡಿ ಮಸ್ಟರಿಂಗ್‌ ಕಾರ್ಯ ಪರಿಶೀಲಿಸಿದರು.

‘ಪ್ರತಿ ಮತಗಟ್ಟೆಗೆ ಒಬ್ಬ ಪ್ರಿಸೈಡಿಂಗ್ ಅಧಿಕಾರಿ, ಒಬ್ಬ ಮತಗಟ್ಟೆ ಅಧಿಕಾರಿ, ಇಬ್ಬರು ಮತದಾನ ಅಧಿಕಾರಿಗಳು, ಒಬ್ಬರು ಮೈಕ್ರೊ ಅಬ್ಸರ್‍ವರ್ ಹಾಗೂ ಕಾಯ್ದಿರಿಸಿದ ಪ್ರಿಸೈಡಿಂಗ್ ಅಧಿಕಾರಿ ಹಾಗೂ ಮತಗಟ್ಟೆ ಅಧಿಕಾರಿಗಳು ಸೇರಿದಂತೆ ಒಟ್ಟು 35 ಮಂದಿ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಮತಗಟ್ಟೆ ಅಧಿಕಾರಿಗಳಿಗೆ ಈಗಾಗಲೇ ಎರಡು ಹಂತಗಳಲ್ಲಿ ತರಬೇತಿ ನೀಡಲಾಗಿದೆ. ಚುನಾವಣೆ ನೀತಿ ಸಂಹಿತೆ ಪಾಲನೆಗೆ ಪ್ರತಿ ತಾಲ್ಲೂಕಿಗೆ ಒಬ್ಬ ಸೆಕ್ಟರ್ ಅಧಿಕಾರಿ, ಮೂವರು ಅಧಿಕಾರಿಗಳನ್ನೊಳಗೊಂಡ ಪ್ಲೈಯಿಂಗ್ ಸ್ಕ್ವಾಡ್ ಹಾಗೂ ಒಬ್ಬರು ಎಂ.ಸಿ.ಸಿ ತಂಡದ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ’ ಎಂದು ಶಿಲ್ಪಾ ನಾಗ್‌ ಮಾಹಿತಿ ನೀಡಿದರು.  

ಮಂಗಳವಾರ 4 ಗಂಟೆಗೆ ಮತದಾನ ಮುಕ್ತಾಯವಾಗಲಿದ್ದು, ಬಳಿಕ ಮತಪತ್ರಗಳು ತುಂಬಿದ ಮತಪೆಟ್ಟಿಗೆಯನ್ನು ಪೊಲೀಸ್ ಬೆಂಗಾವಲಿನೊಂದಿಗೆ  ಡಿ ಮಸ್ಟರಿಂಗ್ ಕೇಂದ್ರಕ್ಕೆ ತರಲಾಗುತ್ತದೆ. ಡಿ ಮಸ್ಟರಿಂಗ್ ಕಾರ್ಯದ ನಂತರ  5 ಮತಗಟ್ಟೆಗಳ ಮತಪತ್ರ ತುಂಬಿದ ಮತ ಪೆಟ್ಟಿಗೆಗಳು ಮತ್ತು ಮತದಾನದ ದಾಖಲೆಗಳನ್ನು ಮೈಸೂರಿನಲ್ಲಿ ಸ್ಥಾಪಿಸಲಾಗಿರುವ ಎಣಿಕೆ ಕೇಂದ್ರಕ್ಕೆ ತಲುಪಿಸಲಾಗುತ್ತದೆ. 6ರಂದು ಮೈಸೂರಿನಲ್ಲಿ ಮತ ಎಣಿಕೆ ನಡೆಯಲಿದೆ’ ಎಂದು ಅವರು ಹೇಳಿದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT