ಚಾಮರಾಜನಗರ: ಉತ್ತಮ ಸಮಾಜ, ಸದೃಢ ದೇಶ ನಿರ್ಮಾಣಕ್ಕೆ ತಂಬಾಕು ಸಹಿತ ದುಶ್ಚಟಗಳಿಂದ ದೂರವಿರಬೇಕು. ಸಮಾಜಕ್ಕೆ ತಂಬಾಕು ಸೇವನೆ ದುಷ್ಪರಿಣಾಮಗಳ ಕುರಿತು ನಿರಂತರ ಜಾಗೃತಿ ಮೂಡಿಸುವುದು ಅಗತ್ಯ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಮುತ್ತುರಾಜ್ ತಿಳಿಸಿದರು.

ನಗರದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಸಭಾಂಗಣದಲ್ಲಿ ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದಡಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಜಾರಿ ನಿರ್ದೇಶನ ವಿಭಾಗದಿಂದ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ತಂಬಾಕು ಉತ್ಪನ್ನಗಳ ಸೇವನೆಯ ದುಷ್ಪರಿಣಾಮಗಳು ಹಾಗೂ ಕೋಟ್ಟಾ-2003ರ ಕಾಯ್ದೆ ಕುರಿತು ಆಯೋಜಿಸಲಾಗಿದ್ದ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.

ಕೋಟ್ಪಾ ಕಾಯ್ದೆ ಉಲ್ಲಂಘನೆಗಳ ಮೇಲ್ವಿಚಾರಣೆಯ ಬಗ್ಗೆ ಪೊಲೀಸ್ ಇಲಾಖೆ ಹೆಚ್ಚಿನ ನಿಗಾ ವಹಿಸಿದ್ದು, ಪ್ರತಿದಿನ ಮಾಹಿತಿ ಪಡೆಯಲಾಗುತ್ತಿದೆ. ಉತ್ತಮ ಸಮಾಜ ಹಾಗೂ ಸದೃಢ ದೇಶ ನಿರ್ಮಾಣಕ್ಕೆ ತಂಬಾಕು ಸೇರಿದಂತೆ ದುಶ್ಚಟಗಳನ್ನು ತ್ಯಜಿಸುವುದು ಅನಿವಾರ್ಯ. ತಂಬಾಕು ಸೇವನೆ ದುಷ್ಪರಿಣಾಮಗಳ ಬಗ್ಗೆ ನಿರಂತರ ಜಾಗೃತಿ ಅಗತ್ಯ ಎಂದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಸ್.ಚಿದಂಬರ ಮಾತನಾಡಿ ಮಾದಕ ವಸ್ತುಗಳಲ್ಲಿ ತಂಬಾಕು ಮನರಂಜನಾ ಉತ್ಪನ್ನವಾಗಿದ್ದು ಸೇವನೆ ಮಾಡಿದಾಗ ವ್ಯಕ್ತಿಯ ಮೆದುಳನ್ನು ಪ್ರಚೋದಿಸುತ್ತದೆ. ಇದರಿಂದ ಜನರು ತಂಬಾಕು ಸೇವನೆಗಳ ಚಟಕ್ಕೆ ದಾಸರಾಗುತ್ತಾರೆ. ತಂಬಾಕು ಉತ್ಪನ್ನಗಳಾದ ಬೀಡಿ, ಸಿಗರೇಟು, ಸಿಗಾರ್, ಹುಕ್ಕಾ, ಪಾನ್ ಮಸಾಲ ಹಾಗೂ ನಶ್ಯ ಸೇವನೆಯು ಆರೋಗ್ಯದ ಮೇಲೆ ದುಷ್ಪರಿಣಾಮ ಬೀರಲಿದೆ ಎಂದರು.

ಬೀಡಿ, ಸಿಗರೇಟು ಸುಟ್ಟಾಗ 4,800 ರಾಸಾಯನಿಕಗಳು ಹೊರ ಬರುತ್ತದೆ. ಅವುಗಳಲ್ಲಿ ಹೆಚ್ಚಿನ ರಾಸಾಯನಿಕಗಳು ಕ್ಯಾನ್ಸರ್ ತರುವಂತಹ ಅಪಾಯಕಾರಿ ಅಂಶಗಳನ್ನು ಒಳಗೊಂಡಿರುತ್ತವೆ. ದೇಹದಲ್ಲಿ ತಲೆ ಕೂದಲು ಹಾಗೂ ಕೈ ಕಾಲಿನ ಉಗುರುಗಳು ಬಿಟ್ಟರೆ ಎಲ್ಲ ಅಂಗಗಳನ್ನು ಕ್ಯಾನ್ಸರ್ ತಗಲುತ್ತದೆ.

ಕ್ಯಾನ್ಸರ್ನಿಂದಾಗಿ ಪ್ರತಿವರ್ಷ 10 ಲಕ್ಷಕ್ಕೂ ಹೆಚ್ಚು ಜನ ಸಾವನ್ನಪ್ಪುತ್ತಿದ್ದು ಮೃತರ ಪೈಕಿ ಪರೋಕ್ಷ ಧೂಮಪಾನಕ್ಕೆ ಒಳಗಾದವರ ಸಂಖ್ಯೆಯೂ ದೊಡ್ಡದಿದೆ. ತಂಬಾಕು ಸೇವನೆಯನ್ನು ಸಾಮುದಾಯಿಕವಾಗಿ ತಡೆಯಲು ಪ್ರತಿ ಮನೆಗಳಲ್ಲಿ ಜಾಗೃತಿ ಮೂಡಿಸಬೇಕು. ತಂಬಾಕನ್ನು ಸ್ವಯಂ ನಿಷೇಧಿಸುವ ಸಂಕಲ್ಪ ಅಗತ್ಯವಾಗಿದೆ. ತಂಬಾಕು ಮುಕ್ತ ಬೀದಿ, ಗ್ರಾಮ, ಹೋಬಳಿ, ತಾಲ್ಲೂಕು, ಜಿಲ್ಲೆಯನ್ನಾಗಿಸಲು ಎಲ್ಲರ ಸಹಕಾರ ಅಗತ್ಯ ಎಂದು ಡಾ. ಚಿದಂಬರ ಅವರು ತಿಳಿಸಿದರು.

ತರಬೇತಿ ಕಾರ್ಯಕ್ರಮಕ್ಕೆ ಚಾಮರಾಜನಗರ ವೈದ್ಯಕೀಯ ವಿಜ್ಞಾನಗಳ ಭೋಧನ ಕಾಲೇಜಿನ ಸಮುದಾಯ ಆರೋಗ್ಯ ವಿಭಾಗದ ಡಾ. ದರ್ಶನ್ ಹಾಗೂ ಡಾ.ವಾಸೀಮ್ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದರು. ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಶಿಧರ್, ಜಾರಿ ನಿರ್ದೇಶನ ವಿಭಾಗದ ಅಧಿಕಾರಿ ಡಾ.ಅಂಕಪ್ಪ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ದೊರೆಸ್ವಾಮಿ ನಾಯಕ್, ಜಿಲ್ಲಾ ಸಲಹೆಗಾರ ಪ್ರಶಾಂತ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.