ಮಂಗಳವಾರ, 16 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಬೇಗೂರು ಠಾಣೆಗೆ ಎಸ್‌ಪಿ ಭೇಟಿ

Published 7 ಜುಲೈ 2024, 16:16 IST
Last Updated 7 ಜುಲೈ 2024, 16:16 IST
ಅಕ್ಷರ ಗಾತ್ರ

ಗುಂಡ್ಲುಪೇಟೆ: ತಾಲ್ಲೂಕಿನ ಬೇಗೂರು ಪೊಲೀಸ್ ಠಾಣೆಗೆ ನೂತನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಬಿ.ಟಿ.ಕವಿತಾ ಅವರು ಭಾನುವಾರ ಭೇಟಿ ನೀಡಿ ಅಧಿಕಾರಿಗಳು ಹಾಗೂ ಸಿಬ್ಬಂದಿ ಜೊತೆಗೆ ಚರ್ಚಿಸಿದರು. ಕರ್ತವ್ಯ ಮತ್ತು ಠಾಣೆ ಸ್ವಚ್ಛತೆ ಬಗ್ಗೆ ಪರಿಶೀಲನೆ ನಡೆಸಿದರು.

ಈ ವೇಳೆ ಡಾ. ಬಿ.ಟಿ.ಕವಿತಾ ಮಾತನಾಡಿ, ‘ವಿವಿಧ ಪ್ರಕರಣಗಳಲ್ಲಿ ವಶಪಡಿಸಿಕೊಂಡಿರುವ ವಸ್ತುಗಳನ್ನು ತ್ವರಿತಗತಿಯಲ್ಲಿ ವಿಲೇವಾರಿಗೊಳಿಸಬೇಕು’ ಎಂದು ಸೂಚಿಸಿದರು.

ಜೊತೆಗೆ ಠಾಣೆಗೆ ಭೇಟಿ ನೀಡಿದ್ದ ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಿ, ಕಾನೂನು ರೀತಿ ಪರಿಹರಿಸುವ ಸಂಬಂಧ ಸೂಕ್ತ ಕ್ರಮ ವಹಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಅಪಘಾತ ಸ್ಥಳಕ್ಕೆ ಭೇಟಿ: ಬೇಗೂರು ಹೊರ ವಲಯದ ಪೆಟ್ರೋಲ್ ಬಂಕ್ ಬಳಿ ಶನಿವಾರ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಮೃತಪಟ್ಟ ಸ್ಥಳಕ್ಕೆ ಡಾ. ಬಿ.ಟಿ.ಕವಿತಾ ಅವರು ಭೇಟಿ ನೀಡಿ ಪರಿಶಿಲನೆ ನಡೆಸಿದರು.

ಸರ್ಕಲ್‌ ಇನ್‌ಸ್ಪೆಕ್ಟರ್‌ ವನರಾಜು, ಎಸ್‌ಐ ಚರಣ್‌ ಗೌಡ ಸೇರಿದಂತೆ ಠಾಣೆಯ ಸಿಬ್ಬಂದಿ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT