ಚಾಮರಾಜನಗರ: ಅಂತರರಾಷ್ಟ್ರೀಯ ಯೋಗ ದಿನದ ಅಂಗವಾಗಿ ಸೋಮವಾರ (ಜೂನ್ 21) ಜಿಲ್ಲಾದ್ಯಂತ ವಿಶೇಷ ಕೋವಿಡ್ ಲಸಿಕಾ ಮೇಳವನ್ನು ಆಯೋಜಿಸಲಾಗಿದೆ.

18 ವರ್ಷಕ್ಕಿಂತ ಹೆಚ್ಚು ವಯಸ್ಸಿನಆದ್ಯತಾ ವಲಯ ಗುಂಪಿನ ಫಲಾನುಭವಿಗಳಿಗೆ ಹಾಗೂ 44 ವರ್ಷ ಮೇಲ್ಪಟ್ಟ ಎಲ್ಲ ನಾಗರಿಕರಿಗೆ ಲಸಿಕೆ ನೀಡಲಾಗುತ್ತದೆ.

ಚಾಮರಾಜನಗರ ಜಿಲ್ಲಾ ಆಸ್ಪತ್ರೆ, ನಗರ ಪ್ರಾಥಮಿಕ ಆರೋಗ್ಯ ಕೇಂದ್ರ, ನಗರದ ಉಪ್ಪಾರ ಬೀದಿಯ ಸರ್ಕಾರಿ ಶಾಲೆ, ರಾಮಸಮುದ್ರ ಬಡಾವಣೆಯ ಸರ್ಕಾರಿ ಶಾಲೆಯಲ್ಲಿ ಹಾಗೂ ಚಾಮರಾಜನಗರ ತಾಲ್ಲೂಕಿನ ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರ, ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಕೋವಿಡ್ ಲಸಿಕೆ ನೀಡಲಾಗುತ್ತದೆ.

ಕೊಳ್ಳೇಗಾಲದ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆ, ಕೊಳ್ಳೇಗಾಲ ಪಟ್ಟಣದ ನಗರ ಆರೋಗ್ಯ ಕೇಂದ್ರ, ವಾಸವಿ ಮಹಲ್ ಮತ್ತು ಕೊಳ್ಳೇಗಾಲ ತಾಲ್ಲೂಕು ವ್ಯಾಪ್ತಿಯ ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಲಸಿಕೆ ನೀಡಲಾಗುವುದು.

ಗುಂಡ್ಲುಪೇಟೆ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆ, ತಾಲ್ಲೂಕಿನ ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರ, ಸಮುದಾಯ ಆರೋಗ್ಯ ಕೇಂದ್ರಗಳು,ಯಳಂದೂರು ತಾಲ್ಲೂಕು ಸಾರ್ವಜನಿಕ ಆಸ್ಪತ್ರೆ, ತಾಲ್ಲೂಕಿನ ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರಗಳು,ಹನೂರು ತಾಲ್ಲೂಕು ಕೇಂದ್ರದಲ್ಲಿರುವ ಸರ್ಕಾರಿ ಆಸ್ಪತ್ರೆ ಹಾಗೂ ತಾಲ್ಲೂಕಿನ ವ್ಯಾಪ್ತಿಯಲ್ಲಿ ಇರುವ ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಲಸಿಕೆ ನೀಡಲಾಗುತ್ತದೆ.

20 ಸಾವಿರ ಜನರಿಗೆ ನೀಡುವ ಗುರಿ: ಸೋಮವಾರ ಜಿಲ್ಲೆಯಲ್ಲಿ 20 ಸಾವಿರ ಜನರಿಗೆ ಕೋವಿಡ್ ಲಸಿಕೆ ನೀಡುವ ಗುರಿ ಹೊಂದಲಾಗಿದೆ. ಚಾಮರಾಜನಗರ ತಾಲ್ಲೂಕಿನಲ್ಲಿ 6,000 , ಗುಂಡ್ಲುಪೇಟೆ ತಾಲೂಕಿನಲ್ಲಿ 5,000, ಕೊಳ್ಳೇಗಾಲ ತಾಲ್ಲೂಕಿನಲ್ಲಿ 4,000, ಹನೂರು ತಾಲ್ಲೂಕಿನಲ್ಲಿ 3,000 ಮತ್ತು ಯಳಂದೂರು ತಾಲ್ಲೂಕಿ 2,000 ಜನರಿಗೆ ಕೋವಿಡ್ ಲಸಿಕೆ ನೀಡಲು ಎಲ್ಲ ಅಗತ್ಯ ಸಿದ್ಧತೆ ಮಾಡಲಾಗಿದೆ.

ಕೋವಿಡ್ನಿಂದ ರಕ್ಷಣೆ ಪಡೆಯುವ ಸಲುವಾಗಿ ಜಿಲ್ಲೆಯ ಎಲ್ಲ ಜನರು ತಪ್ಪದೇ ಲಸಿಕೆ ಪಡೆಯುವ ಮೂಲಕ ವಿಶೇಷ ಕೋವಿಡ್ ಲಸಿಕಾ ಮೇಳದ ಸದುಪಯೋಗ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.