ಶ್ರಾವಣ ಮಾಸದ ಹಿನ್ನಲೆ ಪಟ್ಟಣದ ಕೆಎಸ್‍ಆರ್‌ಟಿಸಿ ಬಸ್ ನಿಲ್ದಾಣದಿಂದ ಬೆಟ್ಟಕ್ಕೆ ತೆರಳಲು ಸುಮಾರು 25ಕ್ಕೂ ಅಧಿಕ ಬಸ್‍ಗಳನ್ನು ನಿಯೋಜಿಸಲಾಗಿತ್ತು. ಮೈಸೂರು, ಮಂಡ್ಯ, ಚಾಮರಾಜನಗರ ಸೇರಿದಂತೆ ಊಟಿ, ಕೇರಳ ಕಡೆಯಿಂದ ಸಾವಿರಾರು ಮಂದಿ ಆಗಮಿಸಿದ್ದರು. ಬೆಳಿಗ್ಗೆ 10ರಿಂದಲೇ ಅಧಿಕ ಭಕ್ತರು ಭೇಟಿ ನೀಡಿದ್ದ ಕಾರಣ ಬೆಟ್ಟದ ತಪ್ಪಲಿನಲ್ಲಿ ಕಿಲೋಮೀಟರ್ ದೂರದವರೆಗೆ ಜನರು ಸಾಲುಗಟ್ಟಿ ಗಂಟೆಗಟ್ಟಲೇ ನಿಂತು ಟಿಕೆಟ್ ಖರೀದಿಸಿ ಬೆಟ್ಟಕ್ಕೆ ತೆರಳಿದರು.