ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಂಜು, ವಿನುತಾಗೆ ವೈಯಕ್ತಿಕ ಪ್ರಶಸ್ತಿ

ಹಿರಿಯ ‍ಪ್ರಾಥಮಿಕ ಮತ್ತು ಪ್ರೌಢಶಾಲಾ ಮಕ್ಕಳ ಜಿಲ್ಲಾಮಟ್ಟದ ಕ್ರೀಡಾಕೂಟಕ್ಕೆ ತೆರೆ
Last Updated 23 ಸೆಪ್ಟೆಂಬರ್ 2019, 9:39 IST
ಅಕ್ಷರ ಗಾತ್ರ

ಚಾಮರಾಜನಗರ: ನಗರದ ಜಿಲ್ಲಾಕ್ರೀಡಾಂಗಣದಲ್ಲಿ ನಡೆದ 2 ದಿನಗಳ ಹಿರಿಯ‍ಪ್ರಾಥಮಿಕ ಮತ್ತು ಪ್ರೌಢಶಾಲಾ ಮಕ್ಕಳ ಜಿಲ್ಲಾಮಟ್ಟದ ಕ್ರೀಡಾಕೂಟಕ್ಕೆ ಶುಕ್ರವಾರ ತೆರೆ ಬಿತ್ತು.

ಶುಕ್ರವಾರ ನಡೆದ ಹಿರಿಯ ಪ್ರಾಥಮಿಕ ಶಾಲಾ ವಿಭಾಗದ ಅಥ್ಲೆಟಿಕ್ಸ್‌ನ ಬಾಲಕರ ವಿಭಾಗದಲ್ಲಿ ಗುಂಡ್ಲುಪೇಟೆ ತಾಲ್ಲೂಕಿನ ಅಣ್ಣೂರು ಕೇರಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 7ನೇ ತರಗತಿ ವಿದ್ಯಾರ್ಥಿ ಸಂಜು ಹಾಗೂ ಬಾಲಕಿಯರ ವಿಭಾಗದಲ್ಲಿ ಹನೂರು ತಾಲ್ಲೂಕಿನ ಕೌದಳ್ಳಿಯ ಸಂತ ಅಂಥೋಣಿ ಹಿರಿಯ ಪ್ರಾಥಮಿಕ ಶಾಲೆಯ 7ನೇ ತರಗತಿ ವಿದ್ಯಾರ್ಥಿನಿ ವಿನುತಾ ಅವರು ವೈಯಕ್ತಿಕ ಪ್ರಶಸ್ತಿ ಗಳಿಸಿದರು.‌

ಸಂಜು 400 ಮೀಟರ್‌ ಓಟ ಮತ್ತು ಉದ್ದ ಜಿಗಿತದಲ್ಲಿ ಮೊದಲ ಸ್ಥಾನ ಗಳಿಸಿದರೆ, ವಿನುತಾ ಉದ್ದ ಜಿಗಿತದಲ್ಲಿ ಮೊದಲ ಸ್ಥಾನ ಹಾಗೂ ಗುಂಡೆಸತದಲ್ಲಿ ದ್ವಿತೀಯ ಸ್ಥಾನ ಗಳಿಸಿ ವೈಯಕ್ತಿಕ ಪ್ರಶಸ್ತಿಗೆ ಮುತ್ತಿಕ್ಕಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT