ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಸ್ಸೆಸ್ಸೆಲ್ಸಿ ಮೌಲ್ಯಮಾಪನ ಇಂದಿನಿಂದ

ಜಿಲ್ಲೆಯಲ್ಲಿ ಆರು ಕೇಂದ್ರಗಳು, 1,110 ಶಿಕ್ಷಕರು ಭಾಗಿ
Last Updated 12 ಜುಲೈ 2020, 15:11 IST
ಅಕ್ಷರ ಗಾತ್ರ

ಚಾಮರಾಜನಗರ: ಜುಲೈ 3ರಂದು ಮುಕ್ತಾಯ ಕಂಡಿದ್ದ ಎಸ್ಸೆಸ್ಸೆಲ್ಸಿ ಪರೀಕ್ಷೆಯ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯ ಸೋಮವಾರದಿಂದ ಆರಂಭವಾಗಲಿದ್ದು, ಜಿಲ್ಲೆಯ ಆರು ಕೇಂದ್ರಗಳಲ್ಲಿ ಮೌಲ್ಯಮಾಪನ ನಡೆಯಲಿದೆ.

ಸಾರ್ವಜನಿಕ ಶಿಕ್ಷಣ ಇಲಾಖೆಗೆ ಮೌಲ್ಯಮಾಪನಕ್ಕೆ ಬೇಕಾದ ಅಗತ್ಯ ಸಿದ್ಧತೆಗಳನ್ನು ನಡೆಸಿದೆ. ಜಿಲ್ಲೆಯ 1,110 ಶಿಕ್ಷಕರು ಉತ್ತರ ಪತ್ರಿಕೆಗಳ ಮೌಲ್ಯಮಾಪನದಲ್ಲಿ ತೊಡಗಲಿದ್ದಾರೆ.

ನಗರದ ಸಿ.ಆರ್‌.ಬಾಲರಪಟ್ಟಣದ ಕ್ರಿಸ್ತರಾಜ‌ ಪ್ರೌಢ ಶಾಲೆ, ಸೇಂಟ್‌ ಜೋಸೆಫ್‌ ಪ್ರೌಢ ಶಾಲೆ, ಜೆಎಸ್‌ಎಸ್‌ ಬಾಲಕಿಯರ ಪ್ರೌಢ ಶಾಲೆ, ಸಂತ ಪೌಲರ ಪ್ರೌಢ ಶಾಲೆ, ಸರ್ಕಾರಿ ಬಾಲಕಿಯರ ಪ‍ದವಿ ಪೂರ್ವ ಕಾಲೇಜು ಮತ್ತು ಸರ್ಕಾರಿ ಬಾಲಕರ ಪದವಿಪೂರ್ವ ಕಾಲೇಜುಗಳಲ್ಲಿ ಸೋಮವಾರದಿಂದ (ಜುಲೈ 13) 20ರವರೆಗೆ ಮೌಲ್ಯಮಾಪನ ನಡೆಯಲಿದೆ.

ಆರೂ ಕೇಂದ್ರಗಳ ಸುತ್ತ ನಿಷೇಧಾಜ್ಞೆಯನ್ನು ಜಾರಿಗೊಳಿಸಿ ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಅವರು ಈಗಾಗಲೇ ಆದೇಶ ಹೊರಡಿಸಿದ್ದಾರೆ.

‘ಕೋವಿಡ್‌–19 ಕಾರಣದಿಂದಾಗಿ ಮೌಲ್ಯಮಾಪನದಲ್ಲಿ ಪಾಲ್ಗೊಳ್ಳುವ ಶಿಕ್ಷಕರ ಆರೋಗ್ಯದ ದೃಷ್ಟಿಯಿಂದ ಎಲ್ಲ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಕೇಂದ್ರಗಳಿಗೆ ಸೋಂಕು ನಿವಾರಕ ಸಿಂಪಡಿಸುವುದು, ಥರ್ಮಲ್‌ ಸ್ಕ್ರೀನಿಂಗ್‌ ಮಾಡುವುದು, ಅಂತರ ಕಾಯ್ದುಕೊಳ್ಳುವುದಕ್ಕೆ ಎಲ್ಲ ವ್ಯವಸ್ಥೆಯನ್ನೂ ಮಾಡಲಾಗಿದೆ. ಎಸ್ಸೆಸ್ಸೆಲ್ಸಿಯ ಆರೂ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನವನ್ನು 1,110 ಶಿಕ್ಷಕರು ಮಾಡಲಿದ್ದಾರೆ’ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಸ್‌.ಟಿ.ಜವರೇಗೌಡ ಅವರು ‘ಪ್ರಜಾವಾಣಿ’ಗೆ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT