ಗುರುವಾರ , ಮೇ 13, 2021
39 °C

ಎಸ್ಸೆಸ್ಸೆಲ್ಸಿ ಪರೀಕ್ಷೆ: ಮಕ್ಕಳ ಯೋಗಕ್ಷೇಮಕ್ಕೆ ತೊಂದರೆಯಾಗದಂತೆ‌ ನಿರ್ಧಾರ- ಸಚಿವ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಾಮರಾಜನಗರ: 'ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಇನ್ನೂ ಸಮಯ ಇದೆ. ಮಕ್ಕಳ ಯೋಗಕ್ಷೇಮಕ್ಕೆ ತೊಂದರೆಯಾಗದಂತೆ ನಿರ್ಧಾರ ಕೈಗೊಳ್ಳಲಾಗುವುದು' ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್‌.ಸುರೇಶ್‌ ಕುಮಾರ್‌ ಅವರು ಮಂಗಳವಾರ ಸ್ಪಷ್ಟಪಡಿಸಿದರು. 

ನಗರದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ‘ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಸಬೇಕು ಎಂಬ ಅಭಿಪ್ರಾಯ ವ್ಯಕ್ತವಾಗಿದೆ. ವಿಧಾನಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ ಅವರು ಪರೀಕ್ಷೆ ನಡೆಸಬೇಕು ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಮಕ್ಕಳು ಕೂಡ ಪರೀಕ್ಷೆ ನಡೆಸಲೇಬೇಕು ಎಂಬ ಅಭಿಯಾನ ನಡೆಸುತ್ತಿದ್ದಾರೆ. ಅವರು ಕೂಡ ಸಿದ್ಧತೆಯಲ್ಲಿ ತೊಡಗಿದ್ದಾರೆ' ಎಂದು ಹೇಳಿದರು.

'ಪದೇ ಪದೇ ಇದರ ಬಗ್ಗೆ ಚರ್ಚೆ ಮಾಡುವುದರಿಂದ ಮಕ್ಕಳಲ್ಲಿ ಗೊಂದಲ ಉಂಟಾಗುತ್ತದೆ. ಜೂನ್ 21ರವರೆಗೆ ಸಮಯ ಇದೆ. ಪರಿಸ್ಥಿತಿ ನೋಡಿಕೊಂಡು ನಿರ್ಧಾರ ಕೈಗೊಳ್ಳಲಾಗುತ್ತದೆ' ಎಂದರು.

ಕೋವಿಡ್ ನಿಯಂತ್ರಣಕ್ಕಾಗಿ ಶಾಲೆಗಳನ್ನೆಲ್ಲ ಬಂದ್ ಮಾಡಲಾಗಿದೆ, ಶಿಕ್ಷಕರಿಗೆ ರಜೆ ನೀಡಲಾಗಿದೆಯೇ ಅಥವಾ ಅವರು ಕರ್ತವ್ಯಕ್ಕೆ ಹಾಜರಾಗಬೇಕೇ ಎಂಬ ಪ್ರಶ್ನೆಗೆ ಉತ್ತರಿಸಿದ ಸಚಿವರು, 'ಮಾರ್ಗದರ್ಶಿ ಸೂತ್ರದಲ್ಲಿ ಎಲ್ಲವನ್ನೂ ಸ್ಪಷ್ಟವಾಗಿ ಹೇಳಲಾಗಿದೆ. ಶಿಕ್ಷಕರ ವಿಚಾರದಲ್ಲಿ ಆಯಾ ಜಿಲ್ಲೆಗಳ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ನಿರ್ಧಾರ ಕೈಗೊಳ್ಳಲಿದ್ದಾರೆ' ಎಂದಷ್ಟೇ ಹೇಳಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು