ಶನಿವಾರ, ಆಗಸ್ಟ್ 13, 2022
26 °C

ಜುಲೈ 3ನೇ ವಾರದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ: ಸುರೇಶ್‌ ಕುಮಾರ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಾಮರಾಜನಗರ: ಜುಲೈ ಮೂರನೇ ವಾರದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್‌.ಸುರೇಶ್‌ ಕುಮಾರ್ ಅವರು ಶುಕ್ರವಾರ ಹೇಳಿದರು. 

ತಾಲ್ಲೂಕಿನ ಕನ್ನೇರಿ ಕಾಲೊನಿಯಲ್ಲಿ ಮಾತನಾಡಿದ ಅವರು, ‘ಪರೀಕ್ಷೆಗೆ ಸಂಬಂಧಿಸಿದಂತೆ ಆರೋಗ್ಯ ಇಲಾಖೆ ಹಾಗೂ ಕೋವಿಡ್‌ ಟಾಸ್ಕ್‌ ಫೋರ್ಸ್‌ ಸಮಿತಿಯ ಜೊತೆಗೂ ಗುರುವಾರ ಚರ್ಚಿಸಿದ್ದೇವೆ. ಬಹುತೇಕ ಜುಲೈ ಮೂರನೇ ವಾರದಲ್ಲಿ ಪರೀಕ್ಷೆ ನಡೆಯಲಿದೆ’ ಎಂದರು. 

ಖಾಸಗಿ ಶಾಲಾ ಶುಲ್ಕಕ್ಕೆ ಸಂಬಂಧಿಸಿದಂತೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ‘ಖಾಸಗಿ ಶಾಲೆಗಳ ಶುಲ್ಕದ ಸಮಸ್ಯೆ ಒಂದು ಜಿಲ್ಲೆಗೆ ಸೀಮಿತವಾಗಿಲ್ಲ. ಇದು ಇಡೀ ರಾಜ್ಯದ ಸಮಸ್ಯೆ. ಹೈಕೋರ್ಟ್‌ನಲ್ಲೂ ಈ ವಿಚಾರ ಚರ್ಚೆಗೆ ಬಂದಿದೆ. ನಾವು ಈ ವಿಚಾರವಾಗಿ ಅಡ್ವೊಕೇಟ್‌ ಜನರಲ್‌ ಅವರೊಂದಿಗೆ ಚರ್ಚೆ ಮಾಡುತ್ತಿದ್ದೇವೆ. ಸೋಮವಾರ ಹೈಕೋರ್ಟ್‌ನಲ್ಲಿ ವಿಚಾರಣೆಗೆ ಬರಲಿದೆ. ಖಾಸಗಿ ಶಾಲೆಗಳ ಆಡಳಿತ ಮಂಡಳಿ ಹಾಗೂ ಪೋಷಕರು.. ಇಬ್ಬರಿಗೂ ಸಮಾಧಾನಕರ ಸೂತ್ರ ರೂಪಿಸಲು ಪ್ರಯತ್ನ ಪಡುತ್ತಿದ್ದೇವೆ. ಈಗ ಅದು ಚರ್ಚೆಯ ಹಂತದಲ್ಲಿದೆ. ಸರ್ಕಾರದ ಸೂತ್ರವನ್ನು ಹೈಕೋರ್ಟ್‌ ಮುಂದೆ ಇಡುತ್ತೇವೆ’ ಎಂದರು. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು