ಇಬ್ಬರು ‘ಕಾಡಿನ ಮಕ್ಕಳು’ ತೇರ್ಗಡೆ
ಜಿಲ್ಲಾಡಳಿತ ವಿಶೇಷ ಆಸಕ್ತಿ ವಹಿಸಿ ಮೂರು ತಿಂಗಳ ಕಾಲ ವಿಶೇಷ ತರಬೇತಿ ನೀಡಿದ್ದ ಎಸ್‌ಎಸ್‌ಎಲ್‌ಸಿ ಶಿಕ್ಷಣವನ್ನು ಅರ್ಧದಲ್ಲೇ ಮೊಟಕುಗೊಳಿಸಿದ್ದ 30 ಗಿರಿಜನ ಮಕ್ಕಳಲ್ಲಿ ಇಬ್ಬರು ಮಾತ್ರ ತೇರ್ಗಡೆಯಾಗಲು ಯಶಸ್ವಿಯಾಗಿದ್ದಾರೆ. ಪ್ರಶಾಂತ್ ಮತ್ತು ರಾಜೇಶ್ ಎಂಬುವವರು ಉತ್ತೀರ್ಣರಾಗಿದ್ದಾರೆ. ಕ್ರಮವಾಗಿ 284 ಮತ್ತು 253 ಅಂಕಗಳನ್ನು ಗಳಿಸಿದ್ದಾರೆ. ಗಿರಿಜನ ಮಕ್ಕಳು ಅರ್ಧದಲ್ಲೇ ಶಿಕ್ಷಣ ಮೊಟಕುಗೊಳಿಸಬಾರದು ಎಂಬ ಉದ್ದೇಶದಿಂದ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ವಿಶೇಷ ಆಸಕ್ತಿ ವಹಿಸಿ 30 ಮಕ್ಕಳನ್ನು ಮೂರು ತಿಂಗಳ ಕಾಲ ಹಾಸ್ಟೆಲ್‌ನಲ್ಲಿ ಇರಿಸಿ ವಿಶೇಷ ತರಬೇತಿ ನೀಡಲು ವ್ಯವಸ್ಥೆ ಮಾಡಿದ್ದರು. ಮಕ್ಕಳು ಉತ್ತಮ ಸಾಧನೆ ಮಾಡುವ ನಿರೀಕ್ಷೆಯಲ್ಲಿ ಅಧಿಕಾರಿಗಳು ಇದ್ದರು. ಆದರೆ ಅವರ ಪ್ರಯತ್ನಕ್ಕೆ ದೊಡ್ಡ ಮಟ್ಟಿನ ಯಶಸ್ಸು ಸಿಕ್ಕಿಲ್ಲ.