ಬುಧವಾರ, 19 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊಳ್ಳೇಗಾಲ | ನಕ್ಷತ್ರ ಆಮೆ ಸಾಗಣೆ: ಇಬ್ಬರ ಬಂಧನ

Published 10 ಜೂನ್ 2024, 14:23 IST
Last Updated 10 ಜೂನ್ 2024, 14:23 IST
ಅಕ್ಷರ ಗಾತ್ರ

ಕೊಳ್ಳೇಗಾಲ: ಹನೂರು ತಾಲ್ಲೂಕಿನ ಹುಲುಸು ಗುಡ್ಡದ ಬೋರೆ ಬಳಿ ನಕ್ಷತ್ರ ಆಮೆ ಸಾಗಣೆ ಮಾಡುತ್ತಿದ್ದ ತಮಿಳುನಾಡು ಮೂಲದ ಇಬ್ಬರು ಆರೋಪಿಗಳನ್ನು ನಗರದ ಅರಣ್ಯ ಸಂಚಾರಿ ದಳದ ಪೋಲಿಸರು ಬಂಧಿಸಿದ್ದಾರೆ. ತಮಿಳುನಾಡು ಮೂಲದ ಸುಕುಮಾರನ್ ಹಾಗೂ ಭೈರರೆಡ್ಡಿ ಬಂಧಿತ ಆರೋಪಿಗಳು.

ಇವರು ಹನೂರಿನ ಹುಲುಸುಗುಡ್ಡ ಬೋರೆ ಬಳಿ ನಕ್ಷತ್ರ ಆಮೆಯನ್ನು ಚೀಲದೊಳಗೆ ಹಾಕಿಕೊಂಡು ಬೈಕ್‌ನಲ್ಲಿ ಸಾಗಣೆ ಮಾಡುತ್ತಿದ್ದರು. ಖಚಿತ ಮಾಹಿತಿ ಆಧರಿಸಿದ ಅರಣ್ಯ ಸಂಚಾರಿ ದಳದ ಪಿಎಸ್‍ಐ ವಿಜಯರಾಜ್ ಸಿಬ್ಬಂದಿಯೊಂದಿಗೆ ದಾಳಿ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿ, ಆಮೆ ಹಾಗೂ ವಾಹನವನ್ನು ವಶಕ್ಕೆ ಪಡೆದಿದ್ದಾರೆ.

ಕೊಳ್ಳೇಗಾಲದ ಅರಣ್ಯ ಸಂಚಾರಿದಳದ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಂಧಿತರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT