ಭಾನುವಾರ, ಸೆಪ್ಟೆಂಬರ್ 19, 2021
24 °C

ಸರ್ಕಾರ ಪತನ: ಕಾಂಗ್ರೆಸ್‌ ಹಗಲುಗನಸು– ಸಚಿವ ಸೋಮಶೇಖರ್‌ ವ್ಯಂಗ್ಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕೊಳ್ಳೇಗಾಲ: ರಾಜ್ಯದಲ್ಲಿ ಬಿಜೆಪಿ ಸರ್ಕಾರ ಬಿದ್ದು ಹೋಗುತ್ತದೆ ಎಂದು ಕಾಂಗ್ರೆಸ್ ಮುಖಂಡರು ಹಗಲು ಗನಸು ಕಾಣುತ್ತಿದ್ದಾರೆ ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಅವರು ಸೋಮವಾರ ಹೇಳಿದರು. 

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಸರ್ಕಾರ ಉತ್ತಮವಾಗಿ ಆಡಳಿತ ನಡೆಸುತ್ತಿದೆ. ವಿರೋಧ ಪಕ್ಷಗಳು ಆರೋಪ ಮಾಡುವುದು ಸಹಜ. ಸರ್ಕಾರ ಸುಭದ್ರವಾಗಿದೆ. ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾದ ಮೇಲೆ ಕಾಂಗ್ರೆಸ್ ಪಕ್ಷದವರಿಗೆ ನಡುಕ ಉಂಟಾಗಿದೆ’ ಎಂದರು. 

‘ಬೊಮ್ಮಾಯಿ ಅವರು ಗೃಹ ಹಾಗೂ ನೀರಾವರಿ ಸಚಿವರಾಗಿ ಉತ್ತಮ ಕೆಲಸ ಮಾಡಿದ್ದಾರೆ. ಅವರ ಮೇಲೆ ಯಾವುದೇ ಕಪ್ಪು ಚುಕ್ಕೆಯೂ ಇಲ್ಲ. ನಮ್ಮ ಸರ್ಕಾರ ಅವಧಿ ಪೂರೈಸಲಿದೆ’ ಎಂದು ಸ್ಪಷ್ಟಪಡಿಸಿದರು. 

ಪಿಕ್ಚರೂ ಇಲ್ಲ, ರೀಲೂ ಇಲ್ಲ: ‘ಪಿಕ್ಚರ್‌ ಅಭಿ ಬಾಕಿ ಹೈ’ ಎಂ‌ದು ಆನಂದ್‌ ಸಿಂಗ್‌ ಅವರು ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸಿದ ಸೋಮಶೇಖರ್‌ ಅವರು, ‘ಯಾವ ಪಿಕ್ಚರೂ ಇಲ್ಲ, ಯಾವ ರೀಲೂ ಇಲ್ಲ. ಅವರಿಗೆ ಸಮಸ್ಯೆ ಇದ್ದರೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಬಳಿ ಹೇಳಬಹುದು. ಕೆಲವರಿಗೆ ಖಾತೆ ಹಂಚಿಕೆಯ ವಿಚಾರದಲ್ಲಿ ಮುನಿಸು ಇದ್ದುದು ನಿಜ. ಈಗ ಅದು ಸರಿಯಾಗಿದೆ’ ಎಂದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು