ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯ ಸರ್ಕಾರ ಸುಭದ್ರ: ಶ್ರೀನಿವಾಸ ಪ್ರಸಾದ್

Last Updated 7 ನವೆಂಬರ್ 2019, 15:04 IST
ಅಕ್ಷರ ಗಾತ್ರ

ಚಾಮರಾಜನಗರ: ‘ರಾಜ್ಯ ಬಿಜೆಪಿ ಸರ್ಕಾರ ಮೂರೂವರೆ ವರ್ಷ ಆಡಳಿತ ಪೂರೈಸುತ್ತದೆ. ನನ್ನ ಅನುಭವದಲ್ಲಿ ಹೇಳುವುದಾದರೆ ಯಾವುದೇ ಕಾರಣಕ್ಕೂ ಸರ್ಕಾರ ಬೀಳುವುದಿಲ್ಲ’ ಎಂದು ಸಂಸದ ವಿ.ಶ್ರೀನಿವಾಸ ಪ್ರಸಾದ್ ವಿಶ್ವಾಸ ವ್ಯಕ್ತಪಡಿಸಿದರು.

ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,‘ಕಾಂಗ್ರೆಸ್‌ ಮತ್ತು ಜೆಡಿಎಸ್‌ ಮುಖಂಡರ ವರ್ತನೆಯಿಂದಾಗಿಯೇ, ಒಬ್ಬರಿಗೊಬ್ಬರ ನಡುವೆ ವಿಶ್ವಾಸವಿಲ್ಲದೆ ಮೈತ್ರಿ ಸರ್ಕಾರ ಪತನವಾಯಿತು’ ಎಂದು ಹೇಳಿದರು.

‘ಬಿಜೆಪಿ ಇಂದು ಸುಭದ್ರ ಆಡಳಿತ ನೀಡುತ್ತಿದೆ. ಎಚ್ಚರಿಕೆಯಿಂದ ಆಡಳಿತದ ನಡೆಸುತ್ತಿದ್ದೇವೆ. ಜನರಿಗೆ ನಿರಾಸೆ ಆಗಬಾರದು ಹಾಗೂ ಮಧ್ಯಂತರ ಚುನಾವಣೆಗೆ ಅವಕಾಶ ಕೊಡಬಾರದು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಹೈಕಮಾಂಡ್‌ ಸಹಕಾರ, ಪಕ್ಷದ ಎಲ್ಲ ಪ್ರಮುಖರನ್ನು ವಿಶ್ವಾಸಕ್ಕೆ ಪಡೆದು ಆಡಳಿತ ನಡೆಸುತ್ತಿದ್ದಾರೆ’ ಎಂದು ಶ್ಲಾಘಿಸಿದರು.

ಆಸಕ್ತಿ ಇಲ್ಲ: ಜೆಡಿಎಸ್‌ ಬೆಂಬಲ ನೀಡುವ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಅವರು, ‘ರಾಜಕೀಯದಲ್ಲಿ ಯಾರೂ ಶತ್ರುಗಳಲ್ಲ, ಮಿತ್ರರಲ್ಲ ಎಂದು ದೇವೇಗೌಡ ಅವರು ಹೇಳಿದ್ದಾರೆ. ಸಮಯ ಸಂದರ್ಭ ನೋಡಿ ನಾವು ತೀರ್ಮಾನ ತೆಗೆದುಕೊಳ್ಳಬೇಕಾಗುತ್ತದೆ. ಯಾರೋ ಮುಖ್ಯಮಂತ್ರಿ ಆಗುವುದಕ್ಕಾಗಿ ಮಧ್ಯಂತರ ಚುನಾವಣೆಗೆ ಹೋಗುವುದು ಬೇಡ ಎನ್ನುವುದು ಜೆಡಿಎಸ್‌ನಿಲುವು. ಮುಂದೆ ರಾಜಕೀಯ ಬೆಳವಣಿಗೆ ಏನಾಗುತ್ತದೆ ಎನ್ನುವುದು ನನಗೆ ಗೊತ್ತಿಲ್ಲ. ನನಗೆ ಅದರಲ್ಲಿ ಆಸಕ್ತಿಯೂ ಇಲ್ಲ’ ಎಂದರು.

ಆಶಾಂತಿಗೆ ಅವಕಾಶವಿಲ್ಲ: ಬಾಬರಿ ಮಸೀದಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದ ಸುಪ್ರೀಂ ಕೋರ್ಟ್‌ ತೀರ್ಪು ಶೀಘ್ರ ಹೊರಬೀಳಲಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಂಸದರು, ‘ತೀರ್ಪು ಬಂದ ಸಂದರ್ಭದಲ್ಲಿ ಕಿಡಿಗೇಡಿಗಳು ಏನಾದರೂ ಶಾಂತಿಕದಡುವಕೆಲಸ ಮಾಡಬಹುದು ಎಂಬ ಮುನ್ನೆಚ್ಚರಿಕೆಯಿಂದ ಕೇಂದ್ರ ಸರ್ಕಾರ ದೇಶದಾದ್ಯಂತ ಕಾನೂನು ಸುವ್ಯವಸ್ಥೆ ಕಾಪಾಡಲು ಭದ್ರತೆ ಕೈಗೊಂಡಿದೆ. ಯಾವುದೇ ತೀರ್ಪು ಹೊರ ಬಂದರೂ ಅದಕ್ಕೆ ಬದ್ಧರಾಗಿರುತ್ತೇವೆ ಎಂದು ಕೇಂದ್ರ ಸರ್ಕಾರ ಈಗಾಗಲೇ ಹೇಳಿದೆ’ ಎಂದು ಹೇಳಿದರು.

‘ಸಿದ್ದರಾಮಯ್ಯ ಸ್ವತಂತ್ರರು’

ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಮತ್ತೆ ಅಹಿಂದ ಸಂಘಟನೆಯತ್ತ ಗಮನಹರಿಸುತ್ತಿರುವುದರ ಬಗ್ಗೆ ಕೇಳಿದ್ದಕ್ಕೆ, ‘ಅಹಿಂದ ಮತ್ತು ಇತರೆ ವಿಷಯಗಳ ಬಗ್ಗೆ ಮಾತನಾಡಲು ಸಿದ್ದರಾಮಯ್ಯ ಸ್ವತಂತ್ರರು. ಅವರು ಯಾವುದೇ ವಿಚಾರದ ಬಗ್ಗೆ ಮಾತನಾಡುವುದಕ್ಕೆ ನಮ್ಮ ವಿರೋಧವಿಲ್ಲ. ಮಾತನಾಡುವುದಕ್ಕೆ ಸಿದ್ದರಾಮಯ್ಯ,ಕೇಳಿಸಿಕೊಳ್ಳಲು ಜನರು ಇದ್ದಾರೆ’ ಎಂದು ಶ್ರೀನಿವಾಸ ಪ್ರಸಾದ್ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT