ಚಾಮರಾಜನಗರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಶಾಲಾ ಶಿಕ್ಷಣ ಇಲಾಖೆ, ಜಿಲ್ಲಾ ನೆಟ್ ಬಾಲ್ ಅಸೊಸಿಯೇಷನ್ ಸಂಯುಕ್ತ ಆಶ್ರಯದಲ್ಲಿ ನಗರದ ಡಾ.ಬಿ.ಆರ್ ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಿರುವ 14 ರಿಂದ 17 ವರ್ಷ ವಯೋಮಿತಿಯ ಬಾಲಕ ಬಾಲಕಿಯರ ರಾಜ್ಯಮಟ್ಟದ ನೆಟ್ ಬಾಲ್ ಪಂದ್ಯಾವಳಿಗೆ ಜಿಲ್ಲಾಧಿಕಾರಿ ಶಿಲ್ಪಾನಾಗ್ ಚಾಲನೆ ನೀಡಿದರು.

ಬಳಿಕ ಮಾತನಾಡಿದ ಜಿಲ್ಲಾಧಿಕಾರಿ ‘ನೆಟ್ಬಾಲ್ ಅಂತರ ರಾಷ್ಟ್ರೀಯ ಕ್ರೀಡೆಯಾಗಿದ್ದು 128 ವರ್ಷಗಳ ಹಿಂದೆ ಇಂಗ್ಲೆಂಡ್ನಲ್ಲಿ ಆರಂಭವಾಯಿತು. ನೆಟ್ ಬಾಲ್ ಅಸೋಸಿಯೇಷನ್ನಲ್ಲಿ 2 ಕೋಟಿ ಸದಸ್ಯರು ಇದ್ದಾರೆ ಎಂಬುದು ಗಮನಾರ್ಹ ಸಂಗತಿ ಎಂದರು.

ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸಿರುವ ಕ್ರೀಡಾಪಟುಗಳು ಕ್ರೀಡಾಮನೋಭಾವದಿಂದ ಭಾಗವಹಿಸಿ ಉತ್ತಮ ಪ್ರದರ್ಶನ ನೀಡಬೇಕು. ಜಿಲ್ಲೆಯ ಕ್ರೀಡಾಪಟುಗಳು ಅತ್ಯುತ್ತಮ ಪ್ರದರ್ಶನ ತೋರುವ ಮೂಲಕ ಜಿಲ್ಲೆಗೆ ಕೀರ್ತಿ ತರಬೇಕು ಎಂದು ಹಾರೈಸಿದರು.

ಚೂಡಾ ಅಧ್ಯಕ್ಷ ಮಹಮ್ಮದ್ ಅಸ್ಗರ್ ಮುನ್ನಾ ಮಾತನಾಡಿ ಗಡಿ ಜಿಲ್ಲೆಯಾಗಿರುವ ಚಾಮರಾಜನಗರದಲ್ಲಿ ರಾಜ್ಯಮಟ್ಟದ ನೆಟ್ ಬಾಲ್ ಪಂದ್ಯಾವಳಿ ನಡೆಯುತ್ತಿರುವುದು ಹೆಮ್ಮೆಯ ಸಂಗತಿ. ಹೊರ ಜಿಲ್ಲೆಗಳಿಂದ ಆಗಮಿಸಿರುವ ಸ್ಪರ್ಧಿಗಳಿಗೆ ಕುಂದು ಕೊರತೆಗಳು ಎದುರಾಗದಂತೆ ಎಲ್ಲ ಸೌಲಭ್ಯಗಳನ್ನು ಒದಗಿಸಬೇಕು. ಕ್ರೀಡೆಯಲ್ಲಿ ಭಾಗವಹಿಸಿರುವ ಮಕ್ಕಳು ಸ್ಪರ್ಧಾ ಮನೋಭಾವ ತೋರಬೇಕು ಎಂದು ಕಿವಿಮಾತು ಹೇಳಿದರು.

ಜಿಲ್ಲಾ ನೆಟ್ ಬಾಲ್ ಅಸೋಸಿಯೇಷನ್ ಅಧ್ಯಕ್ಷ ಶ್ರೀನಿವಾಸ್ ಪ್ರಸಾದ್ ಮಾತನಾಡಿ ಕ್ರೀಡಾಕೂಟಗಳ ಆಯೋಜನೆಗೆ ಸರ್ವರ ಸಹಕಾರ ಅಗತ್ಯ. ಹಾಗೆಯೇ ರಾಜ್ಯ ಹಾಗೂ ರಾಷ್ಟ್ರಮಟ್ಟದ ಕ್ರೀಡಾಕೂಟಗಳ ಆಯೋಜನೆಗೆ ಹೆಚ್ಚಿನ ಅನುದಾನ ಅಗತ್ಯವಿದೆ. ಕ್ರೀಡಾ ಕ್ಷೇತ್ರಕ್ಕೆ ಹೆಚ್ಚಿನ ಪ್ರೋತ್ಸಾಹ ಅಗತ್ಯವಿದೆ ಎಂದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮೋನಾ ರೋತ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಟಿ.ಕವಿತಾ, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಸ್.ಚಂದ್ರಪಾಟೀಲ್, ಡಯಟ್ ಪ್ರಾಂಶುಪಾಲ ಕಾಶಿನಾಥ್, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಆರ್.ಶಂಕರ್, ಜಿಲ್ಲಾ ನೆಟ್ ಬಾಲ್ ಅಸೋಸಿಯೇಷನ್ ಗೌರವ ಅಧ್ಯಕ್ಷೆ ನರ್ಗೀಸ್ ಬಾನು, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ವಿಶ್ವನಾಥ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಕೆ.ಸುರೇಶ್ ಕಾರ್ಯಕ್ರಮದಲ್ಲಿ ಇದ್ದರು.

80 ತಂಡಗಳು ಭಾಗಿ

ರಾಜ್ಯಮಟ್ಟದ ನೆಟ್ ಬಾಲ್ ಕ್ರೀಡಾಕೂಟದಲ್ಲಿ 23 ಜಿಲ್ಲೆಗಳಿಂದ 80 ತಂಡಗಳು ಭಾಗವಹಿಸಿವೆ. 14 ವರ್ಷದೊಳಗಿನವರ ವಿಭಾಗದಲ್ಲಿ ಬಾಲಕಿಯರ 21 ತಂಡಗಳು ಹಾಗೂ ಬಾಲಕರ 19 ತಂಡಗಳು 17 ವರ್ಷದೊಳಗಿನವರ ವಿಭಾಗದಲ್ಲಿ ಬಾಲಕ ಹಾಗೂ ಬಾಲಕಿಯರ ತಲಾ 20 ತಂಡಗಳು ಭಾಗವಹಿಸಿವೆ. ಕ್ರೀಡಾಕೂಟದಲ್ಲಿ 1120 ಕ್ರೀಡಾಪಟುಗಳು 40 ದೈಹಿಕ ಶಿಕ್ಷಣ ಶಿಕ್ಷಕರು 25 ಕ್ರೀಡಾಧಿಕಾರಿಗಳು ಸೇರಿ 160 ಮಂದಿ ಇದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.