ಸಂತೇಮರಹಳ್ಳಿ: ಸ್ತ್ರೀಸೌಖ್ಯ ಕಾರ್ಯಕ್ರಮದ ಮೂಲಕ ಮಹಿಳೆಯರ ಕ್ಯಾನ್ಸರ್ ತಪಾಸಣೆ ನಡೆಸಿ ಚಿಕಿತ್ಸೆಗೆ ಶಿಪಾರಸು ಮಾಡುವ ಮೂಲಕ ಅವರ ಆರೋಗ್ಯದ ಬಗ್ಗೆ ಗಮನ ಹರಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಶ್ರೀರೂಪಾ ತಿಳಿಸಿದರು.

ಇಲ್ಲಿನ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆ ವತಿಯಿಂದ ಸೋಮವಾರ ನಡೆದ ಕ್ಯಾನ್ಸರ್ ತಪಾಸಣೆ ಹಾಗೂ ಎಚ್ಪಿವಿ ಲಸಿಕಾ ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಮಹಿಳೆಯರಿಗೆ ಗರ್ಭಾಶಯದ ಕ್ಯಾನ್ಸರ್, ಸ್ತನ ಕ್ಯಾನ್ಸರ್, ಬಾಯಿ ಕ್ಯಾನ್ಸರ್ ತಪಾಸಣೆ ನಡೆಸಿ ಚಿಕಿತ್ಸೆಗೆ ಶಿಪಾರಸು ಮಾಡುವುದು ಸ್ತ್ರೀ ಸೌಖ್ಯ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ ಎಂದರು.

ತೀವ್ರ ಬಾಧಿಸುವ ಕ್ಯಾನ್ಸರ್ನಂತಹ ರೋಗಗಳಿಗೆ ಆರಂಭದಲ್ಲಿಯೇ ಚಿಕಿತ್ಸೆ ಪಡೆದರೆ ಆರೋಗ್ಯದ ಮೇಲೆ ಆಗುವ ಇನ್ನು ಹೆಚ್ಚಿನ ತೊಂದರೆಗಳನ್ನು ತಪ್ಪಿಸಬಹುದಾಗಿದೆ. ಮಹಿಳೆಯರ ಕಾಳಜಿಯನ್ನು ಉದ್ದೇಶವಾಗಿಟ್ಟುಕೊಂಡು ಕ್ಯಾನ್ಸರ್ ತಪಾಸಣ ಚಿಕಿತ್ಸೆಗಾಗಿ ಸ್ತ್ರೀಸೌಖ್ಯ ಕಾರ್ಯಕ್ರಮವನ್ನು ಚಾಮರಾಜನಗರ ಜಿಲ್ಲೆಯಲ್ಲಿ ಜಾರಿ ಮಾಡಲಾಗಿದೆ ಎಂದರು.

ಕುಟುಂಬ ನಿರ್ವಹಣೆಯ ಹೆಚ್ಚು ಜವಾಬ್ದಾರಿ ಹೊತ್ತಿರುವ ಮಹಿಳೆಯರು ಒಂದಿಲ್ಲೊಂದು ಕಾರಣದಿಂದ ಆರೋಗ್ಯ ತಪಾಸಣೆಗೆ ಮುಂದಾಗುವುದಿಲ್ಲ. ಕ್ಯಾನ್ಸರ್ ನಂತಹ ಕಾಯಿಲೆಗಳಿಗೆ ಆರಂಭದಲ್ಲಿಯೇ ಚಿಕಿತ್ಸೆ ಪಡೆಯದೆ ಇರುವುದರಿಂದ ಇದು ಮತ್ತಷ್ಟು ಹಂತಗಳಿಗೆ ತಲುಪಿ ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ. ಎಷ್ಟೋ ಬಾರಿ ತುಂಬಾ ಹರಡಿದ ನಂತರ ಬೆಳಕಿಗೆ ಬರುತ್ತದೆ. ಹೀಗಾಗಿ ಜಿಲ್ಲೆಯಲ್ಲಿಯೆ ಕ್ಯಾನ್ಸರ್ ತಪಾಸಣೆಗಾಗಿ ಬೆಂಗಳೂರಿನ ಕಿದ್ವಾಯಿ ಸಂಸ್ಥೆ ಮೊಬೈಲ್ ಘಟಕದೊಂದಿಗೆ ತಜ್ಞರು ಬಂದಿದ್ದಾರೆ. ಮಹಿಳೆಯರು ಮುಕ್ತವಾಗಿ ತಪಾಸಣೆಗೆ ಒಳಗಾಗಬೇಕು. ಆರೋಗ್ಯವಂತ ಸಮಾಜಕ್ಕಾಗಿ ಇಂತಹ ಕಾರ್ಯಕ್ರಮನ್ನು ಸದುಪಯೋಗ ಮಾಡಿಕೊಳ್ಳಬೇಕು ಎಂದು ಮನವಿ ಮಾಡಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮೋನಾರೋತ್ ಮಾತನಾಡಿ, ಸಾಕಷ್ಟು ಪರಿಶ್ರಮ ವಹಿಸಿ ಸ್ತ್ರೀಸೌಖ್ಯ ಕಾರ್ಯಕ್ರಮ ರೂಪಿಸಿ ಅನುಷ್ಠಾನಕ್ಕೆ ತರಲಾಗಿದೆ. ಕ್ಯಾನ್ಸರ್ ತಪಾಸಣೆ ಚಿಕಿತ್ಸೆಗೆ ಅನುಕೂಲ ಮಾಡಿಕೊಡುವ ಉದ್ದೇಶ ಹೊಂದಿರುವ ಈ ಕಾರ್ಯಕ್ರಮದ ಬಗ್ಗೆ ಎಲ್ಲರಿಗೂ ಜಾಗೃತಿ ಮೂಡಿಸಬೇಕು. ಪ್ರತಿಯೊಬ್ಬರು ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು ಎಂದು ತಿಳಿಸಿದರು.

ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಯ ನಿರ್ದೇಶಕ ಡಾ.ಟಿ.ನವೀನ್ ಮಾತನಾಡಿ, ಮಹಿಳೆಯರು ಆರೋಗ್ಯ ತಪಾಸಣೆಗೆ ಹಿಂದೇಟು ಹಾಕಬಾರದು. ಆರಂಭದಲ್ಲಿಯೇ ಗರ್ಭಕಂಠದಂತಹ ಕ್ಯಾನ್ಸರ್ ಪತ್ತೆಯಾದಲ್ಲಿ ಇದನ್ನು ತಡೆಯಲು ಚಿಕಿತ್ಸೆಗಳಿವೆ. ಇತರೆ ಕ್ಯಾನ್ಸರ್ಗಳು ಬೇಗ ಪತ್ತೆಯಾದಲ್ಲಿ ಅಗತ್ಯ ಚಿಕಿತ್ಸೆಗಳನ್ನು ಪಡೆಯಬಹುದಾಗಿದೆ. ಚಿಕಿತ್ಸಾ ವೆಚ್ಚ ದುಬಾರಿ ಎಂದುಕೊಳ್ಳಬೇಕಾಗಿಲ್ಲ. ಬಿಪಿಎಲ್ ಕಾರ್ಡುದಾರರು, ಅಯುಷ್ಮಾನ್ ಭಾರತ್ ಕಾರ್ಡ್ ಹೊಂದಿರುವವರು, ಯಶಸ್ವಿನಿ ಯೋಜನೆ ಒಳಪಡುವವರು ಪರಿಶಿಷ್ಟ ಜಾತಿ ಮತ್ತು ಪಂಗಡ ಸೇರಿದಂತೆ ಇತರೆ ವರ್ಗಗಳಿಗೆ ಸೇರುವ ಜನರಿಗೆ ಸರ್ಕಾರದಿಂದ ಸಂಪೂರ್ಣ ಉಚಿತ ಚಿಕಿತ್ಸೆ ದೊರೆಯಲಿದೆ ಎಂದು ತಿಳಿಸಿದರು.

ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಯ ಡಾ.ಎ.ಎಸ್.ಮಹಾಂತೇಶ್, ಡಾ.ವಿಜಯ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಧಿಕಾರಿ ಡಾ.ಚಿದಂಬರ್, ಆಡಳಿತ ವೈದ್ಯಾಧಿಕಾರಿ ಡಾ.ಪುನೀತ್, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಶ್ರೀನಿವಾಸ್, ರಕ್ಷಿತಾ ನಾಯಕ್ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.