ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಮತದಾನ ಮಾಡಿ ಪ್ರಜಾಪ್ರಭುತ್ವ ಗಟ್ಟಿಗೊಳಿಸಿ

ಜಾಗೃತಿ ಜಾಥಾ: ಪುರಸಭೆ ಮುಖ್ಯಾಧಿಕಾರಿ ವಸಂತಕುಮಾರಿ
Published 7 ಏಪ್ರಿಲ್ 2024, 16:32 IST
Last Updated 7 ಏಪ್ರಿಲ್ 2024, 16:32 IST
ಅಕ್ಷರ ಗಾತ್ರ

ಗುಂಡ್ಲುಪೇಟೆ: ಪಟ್ಟಣದ ಕೆ.ಎಸ್.ನಾಗರತ್ನಮ್ಮ ಬಡಾವಣೆಯಲ್ಲಿ ಪುರಸಭಾ ಕಾರ್ಯಾಲಯ ಗುಂಡ್ಲುಪೇಟೆ, ಸ್ವೀಪ್ ಸಮಿತಿ ವತಿಯಿಂದ 2024ರ ಲೋಕಸಭಾ ಚುನಾವಣೆ ಮತದಾನ ಜಾಗೃತಿ ಜಾಥಾಕ್ಕೆ ಶನಿವಾರ ಪುರಸಭೆ ಮುಖ್ಯಾಧಿಕಾರಿ ವಸಂತಕುಮಾರಿ ಚಾಲನೆ ನೀಡಿದರು.

ಪಟ್ಟಣದ ಪುರಸಭಾ ಕಾರ್ಯಾಲಯದಿಂದ ಮತದಾನ ಜಾಗೃತಿ ಜಾಥಾ ಆರಂಭವಾಯಿತು. ಪುರಸಭಾ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ರಾಷ್ಟ್ರೀಯ ಹೆದ್ದಾರಿ ಮೂಲಕ ಸಾಗಿ ಕೆ.ಎಸ್.ನಾಗರತ್ನಮ್ಮ ಬಡಾವಣೆಯ ಪ್ರಮುಖ ರಸ್ತೆಗಳು ಹಾಗೂ ಮನೆ ಮನೆಗೂ ಭೇಟಿ ನೀಡಿ ಮತದಾನದ ಅರಿವು ಮೂಡಿಸಿದರು.1

ವಸಂತಕುಮಾರಿ ಮಾತನಾಡಿ, ಮತದಾನದಿಂದ ದೂರ ಉಳಿಯುವುದು ಪ್ರಜಾಪ್ರಭುತ್ವ ವ್ಯವಸ್ಥೆಗೆ ನಾವು ಮಾಡಿದ ದ್ರೋಹವಾಗಿದೆ. ಆದ್ದರಿಂದ ಪ್ರತಿಯೊಬ್ಬರು ಕಡ್ಡಾಯವಾಗಿ ಮತ ಚಲಾಯಿಸುವ ಮೂಲಕ ಸಂವಿಧಾನ ಬದ್ಧವಾದ ಹಕ್ಕುಗಳನ್ನು ಪ್ರತಿಪಾದಿಸಬೇಕು. ಪಟ್ಟಣ ವ್ಯಾಪ್ತಿಯಲ್ಲಿ ಕಳೆದ ಚುನಾವಣೆಯಲ್ಲಿ ಉತ್ತಮ ಮತದಾನವಾಗಿದ್ದು, ಈ ಬಾರಿಯೂ ಕೂಡ ಅಧಿಕ ಮಂದಿ ಮತ ಚಲಾಯಿಸುವ ಮೂಲಕ ಪ್ರಜಾಪ್ರಭುತ್ವದ ಹಬ್ಬದಲ್ಲಿ ಪಾಲ್ಗೊಳ್ಳಬೇಕು ಎಂದು ಹೇಳಿದರು.

ಯಾವುದೇ ಆಸೆ ಆಮಿಷಗಳಿಗೆ ಒಳಗಾಗದೆ ಪ್ರತಿಯೊಬ್ಬ ಮತದಾರರು ಕೂಡ ಮತ ಚಲಾಯಿಸುವ ಮೂಲಕ ಪ್ರಜಾಪ್ರಭುತ್ವವನ್ನು ಗಟ್ಟಿಗೊಳಿಸಬೇಕು, ಇದರಿಂದ ಮಾತ್ರ ಮುಂದಿನ ಪೀಳಿಗೆಗೆ ಉತ್ತಮ ಸಮಾಜ ನಿರ್ಮಾಣ ಸಾಧ್ಯ. ಈ ನಿಟ್ಟಿನಲ್ಲಿ ಪ್ರತಿಯೊಬ್ಬ ಮತದಾರರು ಕೂಡ ಯೋಚಿಸಿ ಮತ ಚಲಾಯಿಸಬೇಕು ಎಂದು ಸಲಹೆ ನೀಡಿದರು.

ಈ ವೇಳೆ ಪುರಸಭೆ ವತಿಯಿಂದ ಸಾರ್ವಜನಿಕರಿಗೆ ಪ್ರತಿಜ್ಞಾವಿಧಿ ಭೋಧಿಸಿ ಎಲ್ಲರೂ ಕಡ್ಡಾಯವಾಗಿ ಮತದಾನ ಮಾಡಿ ನೈತಿಕ ಮತದಾನ ಬೆಂಬಲಿಸಿ ಎಂದು ತಿಳುವಳಿಕೆ ನೀಡಲಾಯಿತು.

ಜಾಥಾದಲ್ಲಿ ಪುರಸಭಾ ಪರಿಸರ ಅಧಿಕಾರಿ ಗೋಪಿ, ಮಹೇಶ್, ಪುಟ್ಟಸ್ವಾಮಿ, ಶಿವಕುಮಾರ್, ರವಿಕುಮಾರ್ ಸೇರಿದಂತೆ ಪೌರ ಕಾರ್ಮಿಕರು, ಪುರಸಭೆ ಸಿಬ್ಬಂದಿ ವರ್ಗದವರು ಹಾಗೂ ಸಾರ್ವಜನಿಕರು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT