ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊಳ್ಳೇಗಾಲ | ಅಧಿಕಾರಿಗಳಿಂದ ಸ್ಟ್ರಾಂಗ್ ರೂಮ್ ಪರಿಶೀಲನೆ

Published 19 ಮಾರ್ಚ್ 2024, 15:06 IST
Last Updated 19 ಮಾರ್ಚ್ 2024, 15:06 IST
ಅಕ್ಷರ ಗಾತ್ರ

ಕೊಳ್ಳೇಗಾಲ: ಇಲ್ಲಿನ ಮಹದೇಶ್ವರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸ್ಟ್ರಾಂಗ್ ರೂಮ್‌‌ಗಳನ್ನು ಉಪ ವಿಭಾಗಾಧಿಕಾರಿ ಶಿವಮೂರ್ತಿ ಹಾಗೂ ತಹಶೀಲ್ದಾರ್ ಮಂಜುಳ ನೇತೃತ್ವದಲ್ಲಿ ಪರಿಶೀಲನೆ ನಡೆಸಿದರು.

ಮಂಗಳವಾರ ಬೆಳಿಗ್ಗೆ ಕಾಲೇಜಿಗೆ ಭೇಟಿ ನೀಡಿ ಪ್ರತಿಯೊಂದು ಕೊಠಡಿಗಳನ್ನು ವೀಕ್ಷಣೆ ಮಾಡಿದರು. ಬಳಿಕ ಮೂಲಭೂತ ಸೌಕರ್ಯ ಸೇರಿ ಮತಯಂತ್ರ ಭದ್ರವಾಗಿ ಇಡಬೇಕು ಎಂಬುದನ್ನು ಪರಿಶೀಲನೆ ನಡೆಸಿ ಚರ್ಚಿಸಿದರು.

ಬಳಿಕ ಕೆಲವು ಕೊಠಡಿಗಳಿಗೆ ಕಿಟಕಿ, ಬಾಗಿಲು ಹಾಳಾಗಿದ್ದನ್ನು ಗಮನಿಸಿದ ಅಧಿಕಾರಿಗಳು ಇವುಗಳನ್ನು ಸರಿಪಡಿಸಿ ಮತ ಯಂತ್ರ ಇಡಬೇಕು ಎಂದು ಸೂಚನೆ ನೀಡಿದರು. ಅದಲ್ಲದೆ, ಕಾಲೇಜಿನ ಸುತ್ತ 144 ಸೆಕ್ಷನ್ ಜಾರಿಯಲ್ಲಿರುತ್ತದೆ.  ಸುತ್ತಮುತ್ತ ಯಾರೂ ಬರುವಂತಿಲ್ಲ. ಅಧಿಕಾರಿಗಳು ಹಾಗೂ ಪೊಲೀಸರು ಹದ್ದಿನ ಕಣ್ಣಿಡಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ಡಿ.ವೈ.ಎಸ್.ಪಿ ಧರ್ಮೇಂದ್ರ ಸೇರಿ ಅಧಿಕಾರಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT