ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಾಮರಾಜನಗರ | ಪರೀಕ್ಷೆ ಬರೆಯಲು ಬಂದಿದ್ದ ವಿದ್ಯಾರ್ಥಿನಿ ಅಸ್ವಸ್ಥ

Last Updated 25 ಜೂನ್ 2020, 7:01 IST
ಅಕ್ಷರ ಗಾತ್ರ

ಚಾಮರಾಜನಗರ: ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯಲು ಬಂದಿದ್ದ ವಿದ್ಯಾರ್ಥಿನಿಯೊಬ್ಬಳು ಪರೀಕ್ಷಾ ಕೇಂದ್ರದಲ್ಲಿ ಅಸ್ವಸ್ಥಗೊಂಡು ವಾಪಸ್ ಹೋದ ಘಟನೆ ನಗರದಲ್ಲಿ ನಡೆದಿದೆ.

ನಗರದ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಕೇಂದ್ರದಲ್ಲಿ ಬೀಬಿ ಹಾಜೀರ ಎಂಬ ವಿದ್ಯಾರ್ಥಿ ಮನೆಯ ಬಳಿ ಬಿದ್ದು ಹಣೆಗೆ ಗಾಯ ಮಾಡಿಕೊಂಡಿದ್ದಳು.ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದು ಪೋಷಕರೊಂದಿಗೆ ಕೇಂದ್ರಕ್ಕೆ ಬಂದ ವಿದ್ಯಾರ್ಥಿನಿ ಥರ್ಮಲ್ ಸ್ಕ್ರೀನಿಂಗ್‌ಗೆ ಒಳಗಾಗುವ ವೇಳೆ ಅಸ್ವಸ್ಥಗೊಂಡಳು.

ಸ್ಥಳದಲ್ಲೇ ಇದ್ದ ಆರೋಗ್ಯ ಸಹಾಯಕಿ ಚಿಕಿತ್ಸೆ ನೀಡಿದರು. ಈ ವೇಳೆ ಪರೀಕ್ಷಾ ಕೇಂದ್ರದಲ್ಲಿ‌ ಜಿಲ್ಲಾಧಿಕಾರಿ ಡಾ.‌ಎಂ.ಆರ್.ರವಿ ಮತ್ತು ಎಸ್ಪಿ ಆನಂದ್ ಕುಮಾರ್ ಇದ್ದರು.

ವಿದ್ಯಾರ್ಥಿನಿ ಜೊತೆ ಮಾತನಾಡಿದ ಅವರು, ಧೈರ್ಯ ಹೇಳಿದರು. ಮುಂದಿನ ಬಾರಿ ಪರೀಕ್ಷೆ ಬರೆಯುವಂತೆ ಸಲಹೆ ನೀಡಿದರು. ಇದಕ್ಕೆ ಒಪ್ಪದ ವಿದ್ಯಾರ್ಥಿನಿ, ಪರೀಕ್ಷೆ ಬರೆಯಲೇಬೇಂದು ಪಟ್ಟು ಹಿಡಿದಳು.

ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ, ಈಗ ಆಸ್ಪತ್ರೆಗೆ ಹೋಗಿ ಚಿಕಿತ್ಸೆ‌ ಪಡೆ. 10 ಗಂಟೆ ಒಳಗೆ ಸುಧಾರಿಸಿದರೆ ಪರೀಕ್ಷೆ ಬರೆಯಬಹುದು ಎಂದು ಸಲಹೆ ನಡೆದರು. ನಂತರ ವಿದ್ಯಾರ್ಥಿನಿ‌ ತೆರಳಿದರು. ಮೊದಲ ದಿನ ಆಕೆಗೆ ಪರೀಕ್ಷೆ ಬರೆಯಲು ಆಗಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT