ಚಾಮರಾಜನಗರ: 2025-26ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ಎಫ್.ಎ.ಕ್ಯೂ ಗುಣಮಟ್ಟದ ಸೂರ್ಯಕಾಂತಿ ಖರೀದಿಸಲು ಜಿಲ್ಲೆಯ ವಿವಿಧೆಡೆ ಖರೀದಿ ಕೇಂದ್ರಗಳನ್ನು ತೆರೆಯಲಾಗಿದ್ದು ನೋಂದಣಿ ಕಾರ್ಯ ಆರಂಭವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಚಾಮರಾಜನಗರ, ಕೊಳ್ಳೇಗಾಲ, ಹನೂರು, ಗುಂಡ್ಲುಪೇಟೆಯ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಪ್ರಾಂಗಣ ಹಾಗೂ ಗುಂಡ್ಲುಪೇಟೆ ತಾಲ್ಲೂಕಿನ ತೆರಕಣಾಂಬಿ ಉಪ ಮಾರುಕಟ್ಟೆ ಪ್ರಾಂಗಣದಲ್ಲಿ ಖರೀದಿ ಕೇಂದ್ರ ತೆರೆಯಲಾಗಿದ್ದು, ರೈತರು ನೋಂದಣಿ ಮಾಡಿಕೊಳ್ಳಬೇಕು. ಕೇಂದ್ರ ಸರ್ಕಾರ ಪ್ರತಿ ಕ್ವಿಂಟಲ್ಗೆ ₹ 7,721 ದರ ನಿಗದಿಪಡಿಸಿದ್ದು, ಕರ್ನಾಟಕ ಸಹಕಾರಿ ಎಣ್ಣೆಬೀಜ ಬೆಳೆಗಾರರ ಮಹಾ ಮಂಡಳಿ ನಿಯಮಿತ ಸಂಸ್ಥೆಯಿಂದ ಖರೀದಿ ಮಾಡಲಾಗುತ್ತದೆ.

ನೋಂದಣಿ ಪ್ರಕ್ರಿಯೆಗೆ ರೈತರು ಪಹಣಿ, ಆಧಾರ್ ಮತ್ತು ಬ್ಯಾಂಕ್ ಪಾಸ್ ಪುಸ್ತಕದ ಜೆರಾಕ್ಸ್ (ಆಧಾರ್ ಜೋಡಣೆ ಕಡ್ಡಾಯ) ಭಾವಚಿತ್ರ ಹಾಗೂ ಫ್ರೂಟ್ಸ್ ತಂತ್ರಾಂಶದ ರೈತ ನೋಂದಣಿ ಸಂಖ್ಯೆ (ಎಫ್.ಐ.ಡಿ) ಕಡ್ಡಾಯವಾಗಿ ತರಬೇಕು. ಹೋಬಳಿ ಮಟ್ಟದ ರೈತ ಸಂಪರ್ಕ ಕೇಂದ್ರ ಅಥವಾ ತಾಲ್ಲೂಕಿನ ಕೃಷಿ ಇಲಾಖೆಯಿಂದ ಫ್ರೂಟ್ಸ್ ತಂತ್ರಾಂಶದ ರೈತ ನೋಂದಣಿ ಸಂಖ್ಯೆ ಪಡೆಯಬೇಕು.

ಬೆಳೆ ಸಮೀಕ್ಷೆಯಲ್ಲಿ ಸೂರ್ಯಕಾತಿ ಬೆಳೆ ಎಂದು ಆರ್.ಟಿ.ಸಿವಾರು ನಮೂದಾಗಿರುವ ರೈತರು ಮಾತ್ರ ಯೋಜನೆಗೆ ಅರ್ಹರಾಗಿರುತ್ತಾರೆ. ಎಕರೆಗೆ 4 ಕ್ವಿಂಟಾಲ್ ಹಾಗೂ ಪ್ರತಿ ರೈತರಿಂದ 20 ಕ್ವಿಂಟಲ್ ಎಫ್.ಎ.ಕ್ಯೂ ಗುಣಮಟ್ಟದ ಸೂರ್ಯಕಾಂತಿ ಖರೀದಿಸಲಾಗುವುದು. ರೈತರ ಹೆಸರಿನ ಆಧಾರ್ ಸಂಖ್ಯೆಗೆ ಜೋಡಣೆಗೊಂಡ ಬ್ಯಾಂಕ್ ಖಾತೆಗೆ ನೇರವಾಗಿ ಹಣ ಜಮೆ ಮಾಡಲಾಗುವುದು.

ಅ.9ರಿಂದ ನೋಂದಣಿ ಆರಂಭವಾಗಿದ್ದು ಜಿಲ್ಲೆಯ ರೈತರು ಯೋಜನೆಯ ಸದುಪಯೋಗಪಡಿಸಿಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ 8073093473, ಚಾಮರಾಜನಗರ 7406474389, ಗುಂಡ್ಲುಪೇಟೆ 9844211885, ಕೊಳ್ಳೇಗಾಲ 8762898394, ಹನೂರು 9686707090 ಸಂಪರ್ಕಿಸಬಹುದು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.