ಚಾಮರಾಜನಗರ: ಜಿಲ್ಲಾ ಉಸ್ತುವಾರಿ ಸಚಿವ ಎಸ್. ಸುರೇಶ್ ಕುಮಾರ್ ಅವರು ಶಾಸಕರಾದ ಸಿ.ಎಸ್. ನಿರಂಜನ್ ಕುಮಾರ್ ಅವರೊಂದಿಗೆ ಗುರುವಾರ ಗುಂಡ್ಲುಪೇಟೆ ತಾಲೂಕಿನ ವಿವಿಧ ಆಸ್ಪತ್ರೆಗಳು, ಪ್ರಾಥಮಿಕ ಆರೋಗ್ಯ ಕೇಂದ್ರ, ಕೋವಿಡ್ ಸೆಂಟರ್ ಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಚಾಮರಾಜನಗರ ತಾಲ್ಲೂಕಿನ ಮಲ್ಲಯ್ಯನಪುರದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ತೆರೆಯಲಾಗುತ್ತಿರುವ ಕೋವಿಡ್ ಕೇರ್ ಕೇಂದ್ರಕ್ಕೆ ಭೇಟಿ ನೀಡಿ ಬಳಿಕ ತೆರಕಣಾಂಬಿಯ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಪರಿಶೀಲಿಸಿದರು.

ಗುಂಡ್ಲುಪೇಟೆ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿ ಅಲ್ಲಿನ ವ್ಯವಸ್ಥೆಗಳನ್ನು ಪರಿಶೀಲಿಸಿದರು. ಕಬ್ಬಳ್ಳಿ, ಬೇಗೂರು ಆಸ್ಪತ್ರೆಗೂ ತೆರಳಿ ಆರೋಗ್ಯ ಸಂಬಂಧಿ ಒದಗಿಸಿರುವ ಸೇವೆಗಳನ್ನು ವೀಕ್ಷಿಸಿದರು.

ವೀರನಪುರದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ತೆರೆಯಲಾಗಿರುವ ಕೋವಿಡ್ ಕೇಂದ್ರ ಹಾಗೂ ಬೇಗೂರಿನ ಕಿತ್ತೂರು ರಾಣಿ ಚೆನ್ನಮ್ಮ ಶಾಲೆಯಲ್ಲಿ ಸಜ್ಜುಗೊಳಿಸಲಾಗುತ್ತಿರುವ ಕೋವಿಡ್ ಕೇಂದ್ರಕ್ಕೂ ಇವರು ಭೇಟಿ ನೀಡಿದರು ತಹಶೀಲ್ದಾರ್ ರವಿಶಂಕರ್, ತಾಲೂಕು ಆರೋಗ್ಯಾಧಿಕಾರಿ ಡಾ. ಮಂಜುನಾಥ್ ಇತರರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.