ಗುರುವಾರ , ಆಗಸ್ಟ್ 22, 2019
25 °C

ಸುಷ್ಮಾ ಸ್ವರಾಜ್‌ಗೆ ಶ್ರದ್ಧಾಂಜಲಿ ಅರ್ಪಣೆ

Published:
Updated:
Prajavani

ಚಾಮರಾಜನಗರ: ಮಂಗಳವಾರ ರಾತ್ರಿ ನಿಧನಹೊಂದಿದ ಕೇಂದ್ರದ ಮಾಜಿ ಸಚಿವೆ, ಬಿಜೆಪಿ ಹಿರಿಯ ನಾಯಕಿ ಸುಷ್ಮಾ ಸ್ವರಾಜ್‌ ಅವರಿಗೆ ಪಕ್ಷದ ಜಿಲ್ಲಾ ಕಚೇರಿಯಲ್ಲಿ ಮುಖಂಡರು ಶ್ರದ್ಧಾಂಜಲಿ ಸಲ್ಲಿಸಿದರು.

ಸುಷ್ಮಾ ಸ್ವರಾಜ್‌ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದ ಮುಖಂಡರು ಹಾಗೂ ಕಾರ್ಯಕರ್ತರು, ಮೌನಾಚರಣೆ ಮೂಲಕ ಸಂತಾಪ ಸೂಚಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಪ್ರೊ.ಕೆ.ಆರ್‌.ಮಲ್ಲಿಕಾರ್ಜುನಪ್ಪ ಅವರು, ‘ದಿಟ್ಟ ಮಹಿಳೆಯನ್ನು ಕಳೆದುಕೊಂಡ ದೇಶ ಬಡವಾಗಿದೆ. ತುಂಬಲಾರದ ನಷ್ಟ ಉಂಟಾಗಿದೆ. ಬಿಜೆಪಿ ಹಾಗೂ ಜನ ಸಂಘಟನೆಯಲ್ಲಿ ತಮ್ಮನ್ನು ಸಂಪೂರ್ಣವಾಗಿ ತೊಡಗಿಸಿಕೊಂಡಿದ್ದರು. ವಿದ್ಯಾರ್ಥಿ ದೆಸೆಯಿಂದಲೇ ಎಬಿವಿಪಿ ಕಾರ್ಯಕರ್ತೆಯಾಗಿದ್ದರು’ ಎಂದರು.

‘ವಕೀಲ ಪದವಿ ಪಡೆದುಕೊಂಡು ಸಕ್ರಿಯ ರಾಜಕಾರಣಕ್ಕೆ ಬಂದು ಚಿಕ್ಕ ವಯಸ್ಸಿನಲ್ಲೇ ಶಾಸಕರಾಗಿ, ಮಂತ್ರಿಯಾಗಿ ಸೇವೆ ಸಲ್ಲಿಸಿದ್ದ ಕೀರ್ತಿ ಸುಷ್ಮಾ ಅವರಿಗೆ ಸಲ್ಲುತ್ತದೆ. 7 ಬಾರಿ ಸಂಸದರಾಗಿ, ದೆಹಲಿ ಮುಖ್ಯಮಂತ್ರಿಯಾಗಿ, ವಾಜಪೇಯಿ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ಸಂಪುಟದಲ್ಲಿ ಸಚಿವರಾಗಿ ಉತ್ತಮ ಕಾರ್ಯನಿರ್ವಹಣೆ ಮಾಡುವ ಮೂಲಕ ಪ್ರಶಂಸೆಗೆ ಪಾತ್ರರಾಗಿದ್ದರು’ ಎಂದರು.

‘ವಿದೇಶಾಂಗ ಸಚಿವೆಯಾಗಿ ವಿದೇಶದಲ್ಲಿ ಸಂಕಷ್ಟ ಪರಿಸ್ಥಿತಿ ಎದುರಿಸುತ್ತಿದ್ದ ಅನೇಕ ಭಾರತೀಯರನ್ನು ರಕ್ಷಣೆ ಮಾಡುವ ಜೊತೆಗೆ ಅವರು ಸ್ವದೇಶಕ್ಕೆ ಸುರಕ್ಷಿತವಾಗಿ ಬರುವಂತೆ ಮಾಡುವಲ್ಲಿ ಅವರು ಬಹಳ ಮುಖ್ಯ ಪಾತ್ರ ವಹಿಸಿದ್ದರು’ ಎಂದರು.

‘ಸುಷ್ಮಾ ಸ್ವರಾಜ್ ಅವರಿಗೆ ಕರ್ನಾಟಕ ಎಂದರೆ ವಿಶೇಷ ಪ್ರೀತಿ. ಲೋಕಸಭಾ ಚುನಾಣೆಯಲ್ಲಿ ಸೋನಿಯಾ ಗಾಂಧಿ ಅವರು ಬಳ್ಳಾರಿಯಿಂದ ಸ್ಪರ್ಧೆ ಮಾಡಿದ್ದ ಸಂದರ್ಭದಲ್ಲಿ ಬಿಜೆಪಿಯಿಂದ ಸುಷ್ಮಾ ಸ್ವರಾಜ್ ಅವರು ಕಣಕ್ಕಿಳಿದು ತೀವ್ರ ಪೈಪೋಟಿ ನೀಡಿದ್ದರು’ ಎಂದು ಸ್ಮರಿಸಿದರು.

ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಶಾಂತಮೂರ್ತಿ, ನೂರೊಂದು ಶೆಟ್ಟಿ, ಜಿಲ್ಲಾ ಕಾರ್ಯದರ್ಶಿ ಶಶಿಕುಮಾರ್, ನಗರ ಘಟಕದ ಅಧ್ಯಕ್ಷ ಸುಂದರ ರಾಜ್, ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ್, ಮಂಡಲದ ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ್, ಚಂದ್ರಶೇಖರ ರಾವ್, ಮುಖಂಡರಾದ ಕೆ. ವೀರಭದ್ರಸ್ವಾಮಿ, ಆರ್. ಪುಟ್ಟಮಲ್ಲಪ್ಪ, ವೆಂಕಟಸ್ವಾಮಿ, ಶ್ರೀಕಂಠಪ್ಪ, ಕುಮರಸ್ವಾಮಿ ಸೇರಿದಂತೆ ಹಲವರು ಇದ್ದರು.

ಏಸು, ಶಿವ, ಅಲ್ಲಾ ಬೇರೆ ಅಲ್ಲ. ಮೂವರು ಕೂಡ ಒಂದೇ ಚೇತನಗಳು. ಬೇರೆ ಬೇರೆ ಹೆಸರುಗಳಿಂದ ಕರೆಯಲಾಗುತ್ತದೆ. ಆದರೆ, ನಮ್ಮ ದೇವರೇ ದೊಡ್ಡವರು ಎಂದು ನಾವು ಪರಸ್ಪರ ಜಗಳವಾಡುತ್ತೇವೆ. ಇದರಿಂದಾಗಿ ಧರ್ಮಗಳ ನಡುವೆ ಗೋಡೆಗಳು ನಿರ್ಮಾಣಗೊಂಡಿವೆ. ಈ ಗೋಡೆಗಳನ್ನು ಒಡೆಯುವುದೇ ಮತ್ತೆ ಕಲ್ಯಾಣ ಅಭಿಯಾನದ ಉದ್ದೇಶ’ ಎಂದು ಅವರು ಅಭಿಪ್ರಾಯಪಟ್ಟರು.

ಉತ್ತಮ ಆಡಳಿತಗಾರ್ತಿ: ಧ್ರುವನಾರಾಯಣ

‘ಸುಷ್ಮಾ ಸ್ವರಾಜ್‌ ಅವರು ವಿದೇಶಾಂಗ ಸಚಿವರಾಗಿದ್ದಾಗ ಜಿಲ್ಲೆಗೆ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಮಂಜೂರು ಮಾಡುವುದರ ಜೊತೆಗೆ ತ್ವರಿತವಾಗಿ ಆರಂಭಿಸಲು ಸಹಕಾರ ನೀಡಿದ್ದಾರೆ’ ಎಂದು ಕಾಂಗ್ರೆಸ್‌ ಮುಖಂಡ ಹಾಗೂ ಮಾಜಿ ಸಂಸದ ಆರ್.ಧ್ರುವನಾರಾಯಣ ಅವರು ನೆನೆದಿದ್ದಾರೆ. 

‘ಅವರೊಬ್ಬ ಉತ್ತಮ ಆಡಳಿತಗಾರರಾಗಿದ್ದರು. ಯಾವುದೇ ಹುದ್ದೆಯನ್ನು ಸಮರ್ಥವಾಗಿ ನಿಭಾಯಿಸುತ್ತಿದ್ದರು. ಅವರ ಹಠಾತ್‌ ಸಾವಿನಿಂದ ದುಃಖವಾಗಿದೆ’ ಎಂದು ಅವರು ಹೇಳಿದ್ದಾರೆ.

Post Comments (+)