ಸೋಮವಾರ, 7 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಮಹದೇಶ್ವರ ಬೆಟ್ಟದಲ್ಲಿ ಅಕ್ರಮ ಮದ್ಯ ಮಾರಾಟ ಆರೋಪ: ಇಬ್ಬರು ಕಾನ್‌ಸ್ಟೆಬಲ್ ಅಮಾನತು

Published : 11 ಸೆಪ್ಟೆಂಬರ್ 2024, 14:17 IST
Last Updated : 11 ಸೆಪ್ಟೆಂಬರ್ 2024, 14:17 IST
ಫಾಲೋ ಮಾಡಿ
Comments

ಹನೂರು: ತಾಲ್ಲೂಕಿನ ಮಹದೇಶ್ವರ ಬೆಟ್ಟದಲ್ಲಿ ಅಕ್ರಮ ಮದ್ಯ ಮಾರಾಟ ದಂಧೆಯಲ್ಲಿ ಶಾಮೀಲಾಗಿರುವ ಆರೋಪದ ಹಿನ್ನೆಲೆಯಲ್ಲಿ ಇಬ್ಬರು ಕಾನ್‌ಸ್ಟೆಬಲ್‌ಗಳನ್ನು ಅಮಾನತು ಮಾಡಿದ್ದು, ನಾಲ್ವರು ಪೊಲೀಸರನ್ನು ವರ್ಗಾವಣೆ ಮಾಡುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಟಿ. ಕವಿತಾ ಆದೇಶಿಸಿದ್ದಾರೆ.

ಮಹದೇಶ್ವರ ಬೆಟ್ಟ ಠಾಣೆಯ ಮುತ್ತುರಾಜು ಹಾಗೂ ಅಣ್ಣಾದೊರೆ ಅಮಾನತುಗೊಂಡವರು.  ಅಪರಾಧ ವಿಭಾಗದ ಎಎಸ್ಐ ಚಿಕ್ಕ ಕಾಳೇಗೌಡ ಅವರನ್ನು ಚಾಮರಾಜನಗರ ಜಿಲ್ಲೆಯ ಬೇಗೂರು ಠಾಣೆಗೆ ಹಾಗೂ ಕಾನ್‌ಸ್ಟೆಬಲ್‌ ಗುರುಕಿರಣ್ ಅವರನ್ನು ಚಾಮರಾಜನಗರ ಸೈಬರ್ ಠಾಣೆಗೆ, ಅಮರೇಶ್ ಅವರನ್ನು ಚಾಮರಾಜನಗರ ಪಟ್ಟಣ ಪೊಲೀಸ್ ಠಾಣೆಗೆ, ಶ್ರೀಗಂಧ ಅವರನ್ನು ಕೊಳ್ಳೇಗಾಲ ಪಟ್ಟಣ ಠಾಣೆಗೆ ವರ್ಗಾವಣೆ ಮಾಡಲಾಗಿದೆ.

ಧಾರ್ಮಿಕ ಕ್ಷೇತ್ರವಾದ ಮಹದೇಶ್ವರ ಬೆಟ್ಟದಲ್ಲಿ ಅಕ್ರಮ ಮಧ್ಯ ಮಾರಾಟ ದಂಧೆ ಪ್ರಕರಣವನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಟಿ. ಕವಿತಾ ಹಾಗೂ ಅಬಕಾರಿ ಆಯುಕ್ತರು ಜಂಟಿ ಕಾರ್ಯಚರಣೆ ನಡೆಸಿ ಐದು ಪ್ರತ್ಯೇಕ ಪ್ರಕರಣಗಳಲ್ಲಿ ಎಂಟು ಜನರನ್ನು ಬಂಧಿಸಿ 184 ಲೀಟರ್ ಅಕ್ರಮ ಮದ್ಯವನ್ನು ವಶಪಡಿಸಿಕೊಂಡಿದ್ದರು.

ಬೆಟ್ಟದಲ್ಲಿ ಅಕ್ರಮ ಮದ್ಯ ಮಾರಾಟ ಅವ್ಯಾವ್ಯಾಹಿತವಾಗಿ ನಡೆಯುತ್ತಿದ್ದರೂ ಅದನ್ನು ತಡೆಯುವಲ್ಲಿ ಇಲ್ಲಿನ ಪೊಲೀಸರು ವಿಫಲರಾಗಿದ್ದಾರೆ ಎಂಬ ಆರೋಪ ವ್ಯಾಪಕವಾಗಿ ಕೇಳಿಬಂದಿತ್ತು. ಇದನ್ನು ಗಂಭೀರವಾಗಿ ಪರಿಗಣಿಸಿದ ಎಸ್.ಪಿ ಕೆ. ಟಿ ಕವಿತ ಅವರು ಸ್ವತಃ ಕಾರ್ಯಚರಣೆಗಿಳಿದಿದ್ದ ಸಂದರ್ಭದಲ್ಲಿ ಸ್ಥಳೀಯ ಪೊಲೀಸರ ವೈಫಲ್ಯ ಕಂಡು ಬಂದಿತ್ತು. ಇದನ್ನು ಗಮನಿಸಿದ ಎಸ್‌ಪಿ ಅಮಾನತು ಮಾಡಿ ಆದೇಶಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT