ಗುಂಡ್ಲುಪೇಟೆ: ಸಮಾಜದಲ್ಲಿ ಜನರು ಸನ್ಮಾರ್ಗದಿಂದ ನಡೆದರೆ ದೇವರ ಅನುಗ್ರಹ ಪ್ರಾಪ್ತಿಯಾಗುತ್ತದೆ ಎಂದು ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಅಭಿಪ್ರಾಯಪಟ್ಟರು.

ತಾಲ್ಲೂಕಿನ ಶಿಂಡನಪುರ ಗ್ರಾಮದಲ್ಲಿ ಅಂಕ ಪ್ರತಿಷ್ಠಾಪನೆ ಮತ್ತು ಸ್ಕಂದಗಿರಿ ಪಾರ್ವತಾಂಬ ಹಾಗೂ ಗ್ರಾಮ ದೇವತೆ ಮಾರಮ್ಮನ ದೇವಸ್ಥಾನದ ಮಹಾದ್ವಾರ ಉದ್ಘಾಟನಾ ಮಹೋತ್ಸವದ ಸಾನ್ನಿಧ್ಯ ವಹಿಸಿ ಮಾತನಾಡಿದ ಅವರು, ಅಂಕ ಪ್ರತಿಷ್ಠಾಪನೆ ಸಾತ್ವಿಕ ಭಾವನೆ ಬೆಳೆಸಬೇಕು. ಪ್ರತಿ ಗ್ರಾಮಗಳಲ್ಲೂ ಅಂಕ ಪ್ರತಿಷ್ಠಾಪನೆ ಮಾಡುವುದರಿಂದ ಬದ್ಧತೆಯನ್ನು ಆ ಗ್ರಾಮಕ್ಕೆ ಕೊಟ್ಟಂತಾಗುತ್ತದೆ ಎಂದು ತಿಳಿಸಿದರು.

ಯಾವುದೇ ಕಾರ್ಯ ಮಾಡಬೇಕೆಂಬ ಮನಸ್ಸಿದ್ದರೆ ಸೋಮೇಶ್ವರ ಪಾರ್ವತಾಂಬ ದೇವಾಲಯಕ್ಕೆ ಭೇಟಿ ನೀಡಿ ಪೂಜೆ–ಪುರಸ್ಕಾರ ಮಾಡಬೇಕು ಎನ್ನುವ ಪ್ರತೀತಿ ಮೊದಲಿನಿಂದಲೂ ನಡೆದುಕೊಂಡು ಬಂದಿದೆ. ಹಾಗಾಗಿ ಅಕ್ಕಪಕ್ಕದ ಗ್ರಾಮಸ್ಥರು ಹಾಗೂ ಚಾಮರಾಜನಗರ ಜಿಲ್ಲೆಯ ಸುತ್ತಮುತ್ತಲ ಭಕ್ತರು ಮಹಾಪಾರ್ವತಿ ಬೆಟ್ಟಕ್ಕೆ ಬಂದು ಪೂಜಾ ಕೈಂಕರ್ಯಗಳನ್ನು ನೆರವೇರಿಸಿಕೊಂಡು ಹೋಗುತ್ತಿದ್ದಾರೆ. ಅದರ ಮಹಾ ದ್ವಾರವನ್ನು ಶಿಂಡನಪುರದ ಗ್ರಾಮಸ್ಥರು ನಿರ್ಮಿಸಿರುವುದು ಮೆಚ್ಚುಗೆಯ ಸಂಗತಿ ಎಂದು ಹೇಳಿದರು.

ಶಾಸಕ ಎಚ್.ಎಂ.ಗಣೇಶಪ್ರಸಾದ್, ಮಾಜಿ ಶಾಸಕ ಸಿ.ಎಸ್.ನಿರಂಜನಕುಮಾರ್ ಮಾತನಾಡಿದರು. ಸಿದ್ದಗಂಗಾ ಶ್ರೀ, ಪಡಗೂರು ಅಡವಿ ಮಠದ ಶಿವಲಿಂಗೇಂದ್ರ ಸ್ವಾಮೀಜಿ, ದೇವನೂರು ಮಹಾಂತ ಸ್ವಾಮೀಜಿ, ಸೋಮಹಳ್ಳಿ ವೀರಸಿಂಹಾಸನ ಶಿಲಾಮಠದ ಸಿದ್ದಮಲ್ಲಪ್ಪ ಸ್ವಾಮೀಜಿ, ಹಂಗಳದ ಮಠ ಜಡೆ ಸ್ವಾಮೀಜಿ, ಗೋಪಾಲಪುರ ಕಬ್ಬಿನ ಕೋಲೇಶ್ವರ ಮಠ ಗಂಗಾಧರ ಸ್ವಾಮೀಜಿ, ಮೂಡುಗೂರು ವಿರಕ್ತ ಮಠದ ಇಮ್ಮಡಿ ಉದ್ದನ ಸ್ವಾಮೀಜಿ, ಬೊಮ್ಮನಹಳ್ಳಿ, ಶಾಂತ ಮಲ್ಲಿಕಾರ್ಜುನ ಸ್ವಾಮೀಜಿ, ಚಿಕ್ಕತುಪ್ಪೂರು ಮಠದ ಶ್ರೀ, ಮರೆಯಾಲ ಇಮ್ಮಡಿ ಮುರುಘ ರಾಜೇಂದ್ರ ಸ್ವಾಮೀಜಿ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.