ಚಾಮರಾಜನಗರ: ‘ಈ ಲೋಕಸಭಾ ಚುನಾವಣೆಯಲ್ಲಿ ಪ್ರತಿಯೊಬ್ಬರೂ ನೈತಿಕ ಮತದಾನ ಮಾಡಿ. ‘ನಮ್ಮ ಮತದಿಂದ ಏನಾಗುತ್ತದೆ’ ಎಂಬ ಉಡಾಫೆ ಮಾತುಗಳಿಗೆ ಕಿವಿಗೊಡದೆ, ಯೋಚಿಸಿ ಹಕ್ಕು ಚಲಾಯಿಸಿ’ ಎಂದು ನಟ, ನಿರ್ದೇಶಕ, ಜಿಲ್ಲಾ ಸ್ವೀಪ್ ರಾಯಭಾರಿ ನಾಗಭೂಷಣ ಮಂಗಳವಾರ ಮನವಿ ಮಾಡಿದರು.

ಜಿಲ್ಲಾಡಳಿತ ಮತ್ತು ಜಿಲ್ಲಾ ಸ್ವೀಪ್ ಸಮಿತಿ ಹಮ್ಮಿಕೊಂಡಿದ್ದ ಮತದಾನ ಜಾಗೃತಿ ಕಾರ್ಯಕ್ರಮ ಮತ್ತು ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಇಲ್ಲಿ ತುಂಬಾ ಮಹಿಳೆಯರಿದ್ದೀರಿ. ಪುರುಷರಿಗೆ ಆಮಿಷವೊಡ್ಡಿ ಮತಗಳನ್ನು ಸೆಳೆಯಬಹುದು. ಆದರೆ, ಮಹಿಳೆಯರಿಗೆ ಆಮಿಷ ಒಡ್ಡುವುದು ಸುಲಭವಲ್ಲ. ನೀವೆಲ್ಲರೂ ಯಾವುದೇ ಒತ್ತಡಕ್ಕೆ, ಆಮಿಷಗಳಿಗೆ ಮಣಿಯದೆ, ಚೆನ್ನಾಗಿ ಯೋಚನೆ ಮಾಡಿ, ಯಾರು ಆಯ್ಕೆಯಾದರೆ ಒಳ್ಳೆಯದು ಎಂದು ತೀರ್ಮಾನಿಸಿ ಮತದಾನ ಮಾಡಿ’ ಎಂದು ಕರೆ ನೀಡಿದರು.

ಮತ್ತೊಬ್ಬ ರಾಯಭಾರಿ, ಲಿಂಗತ್ವ ಅಲ್ಪಸಂಖ್ಯಾತ ಸಮುದಾಯದ ದೀಪಾ ಬುದ್ಧೆ ಮಾತನಾಡಿ, ‘ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಯೊಬ್ಬರ ಮತವೂ ಮೌಲ್ಯಯುತವಾದುದು. ಲಿಂಗತ್ವ ಅಲ್ಪಸಂಖ್ಯಾತ ಸಮುದಾಯದವರು ಕೂಡ ಹಕ್ಕು ಚಲಾಯಿಸಬೇಕು ಎಂಬ ಉದ್ದೇಶದಿಂದ, ಅವರಲ್ಲಿ ಜಾಗೃತಿ ಮೂಡಿಸುವ ಜವಾಬ್ದಾರಿಯನ್ನು ನನಗೆ ವಹಿಸಿದ್ದಾರೆ. ಇದು ಸಣ್ಣ ಹೊಣೆಗಾರಿಕೆಯಲ್ಲ. ದೇಶವನ್ನೇ ಕಟ್ಟುವ ಜವಾಬ್ದಾರಿ’ ಎಂದರು.

‘ಪ್ರತಿಯೊಬ್ಬರೂ ಮತದಾನ ಮಾಡಬೇಕು. ಆ ಜವಾಬ್ದಾರಿ ಎಲ್ಲರ ಮೇಲಿದೆ. ನಮ್ಮನ್ನು ಆಳುವವರನ್ನು ನಾವೇ ಆಯ್ಕೆ ಮಾಡಬೇಕು. ಅದಕ್ಕಾಗಿ ನಾವೆಲ್ಲರೂ ಮತದಾನ ಮಾಡಬೇಕು. ಡಾ.ಬಿ.ಆರ್.ಅಂಬೇಡ್ಕರ್ ಅವರು ಸಂವಿಧಾನದ ಮೂಲಕ ಎಲ್ಲರಗೂ ಮತದಾನದ ಅವಕಾಶ ಕೊಟ್ಟಿದ್ದಾರೆ. ನಮ್ಮ ಹಕ್ಕುಗಳನ್ನು ನಾವು ಕೇಳುತ್ತೇವೆ. ಆದರೆ, ಅದನ್ನು ನಾವು ಕೇಳಬೇಕಾದರೆ ಚುನಾವಣೆಯಲ್ಲಿ ಮತದಾನ ಮಾಡುವ ನಮ್ಮ ಕರ್ತವ್ಯವನ್ನು ಪಾಲಿಸಬೇಕು’ ಎಂದರು.

ಬಿಗ್ಬಾಸ್ ವಿಜೇತ ನಟ ಕಾರ್ತಿಕ್ ಮಹೇಶ್ ಮಾತನಾಡಿ, ‘ನಮ್ಮ ಜಿಲ್ಲೆಯಲ್ಲಿ ಈ ಬಾರಿ ಶೇ 100ರಷ್ಟು ಮತದಾನವಾಗಬೇಕು. ಆ ನಿಟ್ಟಿನಲ್ಲಿ ನಾವೆಲ್ಲರೂ ಮತದಾನ ಮಾಡಬೇಕು. ಅತ್ಯುತ್ತಮ ನಾಯಕನ್ನು ಆಯ್ಕೆ ಮಾಡುವ ಜವಾಬ್ದಾರಿ ನಮ್ಮ ಮೇಲಿದೆ’ ಎಂದು ಹೇಳಿದರು.

ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಮಾತನಾಡಿ, ‘ಜಿಲ್ಲೆಯಲ್ಲಿ ಸ್ವೀಪ್ ಚಟುವಟಿಕೆಗಳನ್ನು ಆಯೋಜಿಸಿ ಮತದಾನ ಪ್ರಮಾಣವನ್ನು ಹೆಚ್ಚಿಸುವ ಸಲುವಾಗಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಜಾನಪದ ಕಲೆಗಳ ತವರೂರು ಚಾಮರಾಜನಗರ ಜಿಲ್ಲೆಯಲ್ಲಿ ಪೌರಕಾರ್ಮಿಕರಿಂದ ಹಿಡಿದು ಉನ್ನತ ಅಧಿಕಾರಿಗಳವರೆಗೂ ಚುನಾವಣಾ ಕೆಲಸಗಳನ್ನು ಪಾರದರ್ಶಕವಾಗಿ ನಡೆಸಿ ಶೇ 90ಕ್ಕಿಂತ ಹೆಚ್ಚು ಮತದಾನವಾಗುವಂತೆ ನೋಡಿಕೊಂಡು ಜಿಲ್ಲೆಯನ್ನು ಮುಂಚೂಣಿಗೆ ತರಬೇಕಾಗಿದೆ’ ಎಂದರು.

ಕಾರ್ತಿಕ್ ಮಹೇಶ್, ನಾಗಭೂಷಣ, ದೀಪಾ ಬುದ್ದೆ ಹಾಗೂ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಮಹಿಳೆಯರನ್ನು ಸನ್ಮಾನಿಸಲಾಯಿತು. ಕ್ರೀಡಾಕೂಟದಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.

ಜಾಗೃತಿ ಜಾಥಾ: ವೇದಿಕೆ ಕಾರ್ಯಕ್ರಮಕ್ಕೂ ಮೊದಲು ನಗರದ ಚಾಮರಾಜೇಶ್ವರ ಸ್ವಾಮಿ ದೇವಾಲಯದ ಮುಂಭಾಗದಲ್ಲಿ ಮತದಾನ ಜಾಗೃತಿ ಜಾಥಾಗೆ ಜಿಲ್ಲಾಧಿಕಾರಿ ಶಿಲ್ಪಾನಾಗ್, ಜಿಲ್ಲಾ ಪಂಚಾಯಿತಿ ಸಿಇಒ ಆನಂದ್ ಪ್ರಕಾಶ್ ಮೀನಾ, ಬಿಆರ್ಟಿ ಡಿಸಿಎಫ್ ದೀಪ್ ಜೆ.ಕಾಂಟ್ರ್ಯಾಕ್ಟರ್, ಎಡಿಸಿ ಗೀತಾ ಹುಡೇದ, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಲಕ್ಷ್ಮಿ ಅವರು ಹಸಿರು ನಿಶಾನೆ ತೋರಿದರು.

ಭುವನೇಶ್ವರ ವೃತ್ತ, ಬಿ.ರಾಚಯ್ಯ ಜೋಡಿರಸ್ತೆಯ ಮೂಲಕ ಜಿಲ್ಲಾಡಳಿತ ಭವನದವರೆಗೂ ಸಾಗಿದ ಜಾಗೃತಿ ಜಾಥಾದಲ್ಲಿ ಜಾನಪದ ಮಹಿಳಾ ಕಲಾತಂಡಗಳೊಂದಿಗೆ ವಿವಿಧ ಇಲಾಖೆ ಅಧಿಕಾರಿಗಳು, ನಾಗರಿಕರು, ಜಿಲ್ಲೆಯ ವಿವಿಧ ಭಾಗಗಳಿಂದ ಆಗಮಿಸಿದ್ದ ಮಹಿಳಾ ಸ್ವಸಹಾಯ ಗುಂಪುಗಳ ಸದಸ್ಯರು ಪಾಲ್ಗೊಂಡಿದ್ದರು. ರಸ್ತೆಯುದ್ದಕ್ಕೂ ಚುನಾವಣಾ ಪರ್ವ-ದೇಶದ ಗರ್ವ ಘೋಷವಾಕ್ಯಗಳನ್ನು ಮೊಳಗಿಸಿ ಮತದಾನದ ಜಾಗೃತಿ ಮೂಡಿಸಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪನಿರ್ದೇಶಕ ಮಂಜುನಾಥ್, ತಾಲ್ಲೂಕು ಪಂಚಾಯಿತಿ ಕಾರ್ಯನಿವಾಹಕ ಅಧಿಕಾರಿ ಕೃಷ್ಣಪ್ಪ, ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು.

ಮತದಾನಕ್ಕಾಗಿ ಮಮತೆಯ ಕರೆಯೋಲೆ!

ಏಪ್ರಿಲ್ 26ರಂದು ನಡೆಯಲಿರುವ ಮತದಾನದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಜಿಲ್ಲಾಡಳಿತ ಸ್ವೀಪ್ ಸಮಿತಿಯು ಶುಭ ಸಮಾರಂಭಗಳ ಕಾರ್ಯಕ್ರಮಗಳ ಆಹ್ವಾನ ಪತ್ರಿಕೆಯ ಮಾದರಿಯಲ್ಲಿ ಮತದಾನ ಕರೆಯೋಲೆಯನ್ನು ಮುದ್ರಿಸಿದೆ. ‘ಮತದಾನದ ಮಮತೆಯ ಕರೆಯೋಲೆ’ಯನ್ನು ಫ್ಲೆಕ್ಸ್ ರೂಪದಲ್ಲಿ ಮುದ್ರಿಸಿ ನಗರ ಸೇರಿದಂತೆ ಜಿಲ್ಲೆಯ ವಿವಿಧ ಕಡೆಗಳಲ್ಲಿ ಪ್ರಮುಖ ರಸ್ತೆ ಸಿನಿಮಾ ಮಂದಿರ ಪ್ರವಾಸಿ ಸ್ಥಳಗಳಲ್ಲಿ ಪ್ರದರ್ಶಿಸಲಿದೆ. ಮೊದಲ ಆಹ್ವಾನ ಪತ್ರಿಕೆಯನ್ನು ಬಿ.ರಾಚಯ್ಯ ಜೋಡಿ ರಸ್ತೆಯಲ್ಲಿರುವ ಜಿಲ್ಲಾಡಳಿತ ಭವನದ ಗೇಟ್ ಮುಂದೆ ಅಳವಡಿಸಲಾಗಿದೆ. ಜಿಲ್ಲಾಧಿಕಾರಿ ಶಿಲ್ಪಾನಾಗ್ ಅವರು ಕರೆಯೋಲೆಯನ್ನು ಸಾಂಕೇತಿಕವಾಗಿ ಲೋಕಾರ್ಪಣೆ ಮಾಡಿದರು. ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷ ಆನಂದ್ ಪ್ರಕಾಶ್ ಮೀನಾ ಡಿಸಿಎಫ್ ದೀಪ್ ಜೆ.ಕಾಂಟ್ರ್ಯಾಕ್ಟರ್ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.