ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗಾಂಧಿ, ಶಾಸ್ತ್ರಿ ಜಯಂತಿ: ಸ್ವಚ್ಛತಾ ಅಭಿಯಾನ

Last Updated 3 ಅಕ್ಟೋಬರ್ 2021, 3:31 IST
ಅಕ್ಷರ ಗಾತ್ರ

ಚಾಮರಾಜನಗರ: ಸ್ವಾತಂತ್ರ್ಯದ ಅಮೃತಮಹೋತ್ಸವ ವರ್ಷಾಚರಣೆಯ ಅಡಿಯಲ್ಲಿ ಮಹಾತ್ಮ ಗಾಂಧಿ ಹಾಗೂ ಲಾಲ್‌ ಬಹದ್ದೂರ್‌ ಶಾಸ್ತ್ರಿ ಅವರ ಜನ್ಮದಿನದ ಅಂಗವಾಗಿ ಜಿಲ್ಲೆಯಾದ್ಯಂತ ಶನಿವಾರ ಸ್ವಚ್ಛ ಭಾರತ ಅಭಿಯಾನ ಕಾರ್ಯಕ್ರಮ ನಡೆಯಿತು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ನೆಹರು ಯುವ ಕೇಂದ್ರದ ವತಿಯಿಂದ ಅಮಚವಾಡಿ ಗ್ರಾಮದಲ್ಲಿ ಅಭಿಯಾನವನ್ನು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹರ್ಷಲ್‌ ಭೊಯರ್‌ ನಾರಾಯಣರಾವ್‌ ಅವರು ಉದ್ಘಾಟಿಸಿದರು.

ನಂತರ ಮಾತನಾಡಿದ ಅವರು, ‘ಸ್ವಚ್ಛತೆಗಾಗಿ ಸರ್ಕಾರ ನೀಡುತ್ತಿರುವ ಎಲ್ಲ ಸೌಲಭ್ಯಗಳನ್ನು ಸಮರ್ಪಕವಾಗಿ ಬಳಸಿಕೊಂಡು ಸ್ವಚ್ಛಗ್ರಾಮ ಹಾಗೂ ಪ್ಲಾಸ್ಟಿಕ್ ಮುಕ್ತ ರಾಷ್ಟ್ರವನ್ನು ನಿರ್ಮಿಸಬೇಕು’ ಎಂದು ಹೇಳಿದರು.

‘ಸ್ವಚ್ಛ ಗ್ರಾಮವನ್ನಾಗಿಸಲು ಪ್ರತಿಯೊಬ್ಬ ಗ್ರಾಮಸ್ಥರ ಸಹಕಾರ ಅಗತ್ಯ. ಗ್ರಾಮ ಪಂಚಾಯಿತಿ ವತಿಯಿಂದ ಊರಿನ ಸ್ವಚ್ಛತೆ ನೈರ್ಮಲ್ಯ ಕಾರ್ಯಗಳಿಗೆ ನೀಡಲಾಗುವ ಎಲ್ಲ ನೆರವು ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು' ಎಂದು ಅವರು ಕರೆ ನೀಡಿದರು.

ಸ್ವತಃ ಹರ್ಷಲ್ ಬೋಯರ್ ನಾರಾಯಣ್ ರಾವ್ ಅವರು ಸ್ಥಳೀಯರು ಹಾಗೂ ಅಧಿಕಾರಿಗಳೊಂದಿಗೆ ಜೊತೆಗೂಡಿ ಸ್ವಚ್ಛತಾ ಶ್ರಮದಾನದಲ್ಲಿ ಪಾಲ್ಗೊಂಡರು. ರಸ್ತೆ ಬದಿಯಲ್ಲಿ ಸುರಿಯಲಾಗಿದ್ದ ಪ್ಲಾಸ್ಟಿಕ್ ತ್ಯಾಜ್ಯವನ್ನು ಸಂಗ್ರಹಿಸಿ ಗಮನಸೆಳೆದರು.

ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಪ್ರೇಮ್ ಕುಮಾರ್, ನೆಹರು ಯುವ ಕೇಂದ್ರದ ಜಿಲ್ಲಾ ಯುವಜನ ಅಧಿಕಾರಿ ರಾಜೇಶ್ ಕಾರಂತ್, ಅಮಚವಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಮಹೇಂದ್ರ, ಪಂಚಾಯತ್ ಅಭಿವೃದ್ದಿ ಅಧಿಕಾರಿ ವೀಣಾ, ಕಾರ್ಯದರ್ಶಿ ಯದಹರೀಶ್, ನೆಹರು ಯುವ ಕೇಂದ್ರದ ಪ್ರಮೋದ್, ದಾಕ್ಷಾಯಿಣಿ, ಗ್ರಾಮ ಪಂಚಾಯಿತಿ ಸದಸ್ಯರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT