ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸ್ವಚ್ಛ ಭಾರತ ಅಭಿಯಾನ ಮೂಲಕ ಜನಜಾಗೃತಿ

Last Updated 13 ಅಕ್ಟೋಬರ್ 2021, 16:43 IST
ಅಕ್ಷರ ಗಾತ್ರ

ಚಾಮರಾಜನಗರ: ಆರೋಗ್ಯ, ನೈರ್ಮಲ್ಯ ಮತ್ತು ಸಾಮಾಜಿಕ ಸ್ವಾಸ್ಥ್ಯ ನಡುವಿರುವ ಸಂಬಂಧದ ಬಗ್ಗೆ ಜನಜಾಗೃತಿಯನ್ನು ಮೂಡಿಸುವ ಸಲುವಾಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ನೆಹರು ಯುವ ಕೇಂದ್ರ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಯೋಗದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಸ್ವಚ್ಛ ಭಾರತ ಅಭಿಯಾನ ಕಾರ್ಯಕ್ರಮ ಏರ್ಪಡಿಸಲಾಗಿತ್ತು.

‘ಮಹಾತ್ಮ ಗಾಂಧೀಜಿಯವರ 150ನೇ ಜನ್ಮದಿನಾಚರಣೆ ಅಂಗವಾಗಿ ಅಕ್ಟೋಬರ್ 2ರಿಂದ ನಡೆಸಲಾಗುತ್ತಿದೆ.ನಮ್ಮ ಆರೋಗ್ಯದ ದೃಷ್ಟಿಯಿಂದ ನಾವು ವಾಸಿಸುವ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು. ಪ್ರತಿಯೊಬ್ಬರೂ ಸ್ವಯಂಪ್ರೇರಿತರಾಗಿ ಸ್ವಚ್ಛತೆ ಕಾರ್ಯದಲ್ಲಿ ತೊಡಗಿಸಿಕೊಳ್ಳಬೇಕು’ ಎಂದುಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಪ್ರಭಾರ ಸಹಾಯಕ ನಿರ್ದೇಶಕ ಎಚ್.ಎಸ್.ಗಂಗಾಧರ್ ಅವರು ಹೇಳಿದರು.

ಕರ್ನಾಟಕ ಜಾನಪದ ಅಕಾಡೆಮಿ ಸದಸ್ಯ ಸಿ.ಎಂ.ನರಸಿಂಹಮೂರ್ತಿ ಅವರು ಮಾತನಾಡಿ, ‘ಶಾಲಾ ಕಾಲೇಜುಗಳಲ್ಲಿ ಸ್ವಚ್ಛತೆ ಮತ್ತು ನೈರ್ಮಲ್ಯದ ಮೇಲೆ ವಿಶೇಷವಾಗಿ ಗಾಂಧೀಜಿಯವರ ಬೋಧನೆಗಳಿಗೆ ಸಂಬಂಧಿಸಿದಂತೆ ಚರ್ಚೆಗಳನ್ನು ಏರ್ಪಡಿಸುವುದರ ಮೂಲಕ ಗಾಂಧೀಜಿಯವರ ಸ್ವಚ್ಛ ಭಾರತದ ಕನಸು ಈಡೇರಿಸಬೇಕು ಇದರಲ್ಲಿ ಶಿಕ್ಷಕರು, ವಿದ್ಯಾರ್ಥಿಗಳು, ಪೋಷಕರು ಹಾಗೂ ಸಮುದಾಯದ ಪಾಲ್ಗೊಳ್ಳುವಿಕೆ ಬಹಳ ಮುಖ್ಯ’ ಎಂದರು.

ರೆಡ್ ಕ್ರಾಸ್ ಸಂಸ್ಥೆಯ ಎಲ್.ಸುರೇಶ್, ಕ್ರೀಡಾಪಟು ವಿ ಶ್ರೀನಿವಾಸ ಪ್ರಸಾದ್, ಕೃಷ್ಣಸ್ವಾಮಿ, ನೆಹರು ಯುವ ಕೇಂದ್ರದ ದಾಕ್ಷಾಯಣಿ, ಪ್ರಮೋದ್ ಹಾಗೂ ಯುವ ಸ್ಪಂದನದ ಮಾದಲಾಂಬಿಕೆ, ರವಿಕುಮಾರ್, ದೊರೆಸ್ವಾಮಿ, ಮಧು, ಕ್ರೀಡಾಪಟುಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT