ಪ್ರಜಾವಾಣಿ ವಾರ್ತೆ

ಹನೂರು : ಮನುಷ್ಯ ತಾನು ಮಾನಸಿಕವಾಗಿ ದೈಹಿಕವಾಗಿ ಸದೃಢರಾಗಿರಬೇಕೆಂದರೆ ಎಲ್ಲ ರೀತಿಯ ಕ್ರೀಡೆಗಳು ಅತ್ಯಂತ ಅವಶ್ಯಕವಾಗಿದೆ ಎಂದು ಶಾಸಕ ಎಂ. ಆರ್. ಮಂಜುನಾಥ್ ತಿಳಿಸಿದರು.

ಪಟ್ಟಣದ ಶ್ರೀ ಮಲೆ ಮಹದೇಶ್ವರ ಕ್ರೀಡಾಂಗಣದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಹನೂರು ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಆಯೋಜಿಸಿದ್ದ 14 ರಿಂದ 17 ವರ್ಷದೊಳಗಿನ ತಾಲೂಕು ಮಟ್ಟದ ಕ್ರೀಡಾಕೂಟ ಉದ್ಘಾಟಿಸಿ ಅವರು ಮಾತನಾಡಿದರು. ಹನೂರು ತಾಲ್ಲೂಕು ಮಟ್ಟದ ಕ್ರೀಡಾಕೂಟ ಅತ್ಯಂತ ಶಿಸ್ತುಬದ್ಧವಾಗಿ ಆಯೋಜನೆ ಮಾಡಲಾಗಿದೆ. ಶಿಕ್ಷಕರು ಮಕ್ಕಳನ್ನು ಸಜ್ಜುಗೊಳಿಸಬೇಕು. ಭಾಗವಹಿಸಿರುವಂತಹ ಎಲ್ಲಾ ಮಕ್ಕಳು ನಮ್ಮ ಮಕ್ಕಳೇ. ತೀರ್ಪನ್ನು ಸಮನಾಗಿ ನೀಡಬೇಕು ಎಂದು ತಿಳಿಸಿದರು.

ಕ್ಷೇತ್ರ ಶಿಕ್ಷಣಾಧಿಕಾರಿ ಮಹೇಶ್ ಓಟದ ಮೂಲಕವೇ ತೆರಳಿ ಕ್ರೀಡಾ ಜ್ಯೋತಿಯನ್ನು ಬೆಳಗಿಸಿದರು. ಕ್ಷೇತ್ರ ಸಮನ್ವಯಾಧಿಕಾರಿ ವೆಂಕಟೇಶ್, ಪಟ್ಟಣ ಪಂಚಾಯತಿ ಉಪಾಧ್ಯಕ್ಷ ಆನಂದ್ ಕುಮಾರ್, ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕರಾದ ಮಂಜೇಶ್ ಗೌಡ, ನಟರಾಜು ಗೌಡ, ಟಿ.ಪಿ.ಇ.ಒ. ಕೆಂಪರಾಜು, ಕ್ರೀಡಾಪಟುಗಳು ಹಾಗೂ ದೈಹಿಕ ಶಿಕ್ಷಣ ಶಿಕ್ಷಕರು, ಅಧಿಕಾರಿಗಳು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.