ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

13ರವವರೆಗೆ ಕುಷ್ಠರೋಗ ಜಾಗೃತಿ ಅಭಿಯಾನ

Published 1 ಫೆಬ್ರುವರಿ 2024, 16:30 IST
Last Updated 1 ಫೆಬ್ರುವರಿ 2024, 16:30 IST
ಅಕ್ಷರ ಗಾತ್ರ

ಚಾಮರಾಜನಗರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಜಿಲ್ಲೆಯಲ್ಲಿ ಇದೇ 13ರವರೆಗೆ ಸ್ಪರ್ಶ್ ಕುಷ್ಠರೋಗ ಅಭಿಯಾನ ನಡೆಯಲಿದ್ದು, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆನಂದ್‌ ಪ್ರಕಾಶ್‌ ಮೀನಾ ಇತ್ತೀಚೆಗೆ ಚಾಲನೆ ನೀಡಿದರು. 

ನಂತರ ಮಾತನಾಡಿದ ಅವರು, ‘ಜ.30ರಂದು ಕುಷ್ಠರೋಗ ನಿರ್ಮೂಲನಾ ದಿನವನ್ನಾಗಿ ಆಚರಿಸಲಾಗುತ್ತಿದೆ. ‘ಕುಷ್ಠರೋಗದ ವಿರುದ್ದ ಹೋರಾಡಿ ಇದರ ಕಳಂಕವನ್ನು ಕೊನೆಗೊಳಿಸಿ, ಘನತೆ ಎತ್ತಿ ಹಿಡಿಯಿರಿ’ ಎಂಬುದು ಈ ಸಾಲಿನ ಘೋಷವಾಕ್ಯ. ಕುಷ್ಠರೋಗ ನಿರ್ಮೂಲನೆ ನಿಟ್ಟಿನಲ್ಲಿ ಜನರಲ್ಲಿ ಜಾಗೃತಿ ಮೂಡಿಸುವ ಉದ್ದೇಶದ ಅಭಿಯಾನ ಯಶಸ್ವಿಗೊಳಿಸಬೇಕು’ ಎಂದರು.

‘ಕುಷ್ಠರೋಗದ ಲಕ್ಷಣಗಳು ಕಂಡುಬಂದಲ್ಲಿ ತಕ್ಷಣವೇ ಸಮೀಪದ ಸರ್ಕಾರಿ ಆಸ್ಪತ್ರೆಗಳಲ್ಲಿ ಪರೀಕ್ಷಿಸಿಕೊಳ್ಳಲು ಸಲಹೆ ನೀಡಬೇಕು. ಎಲ್ಲ ಆಸ್ಪತ್ರೆಗಳಲ್ಲಿ ಪರೀಕ್ಷೆ ಮತ್ತು ಚಿಕಿತ್ಸೆ ಉಚಿತವಾಗಿ ಲಭ್ಯವಿದ್ದು, ಈ ಬಗ್ಗೆ ಜನರಿಗೆ ಮನವರಿಕೆ ಮಾಡಿಕೊಡಬೇಕು. ವಿಶೇಷವಾಗಿ ಗ್ರಾಮೀಣ ಭಾಗಗಳಲ್ಲಿ ಹೆಚ್ಚು ಅರಿವು ಮೂಡಿಸಬೇಕು’ ಎಂದು ಮೀನಾ ಹೇಳಿದರು. 

‘ಕುಷ್ಠರೋಗ ಬಗ್ಗೆ ಜನರಲ್ಲಿರುವ ತಪ್ಪು ಕಲ್ಪನೆಗಳನ್ನು ಹೋಗಲಾಡಿಸಬೇಕಿದೆ. ಈ ಕಾಯಿಲೆಯನ್ನು ಸಂಪೂರ್ಣವಾಗಿ ಗುಣಪಡಿಸಬಹುದಾಗಿದ್ದು ಆರಂಭದಲ್ಲಿಯೇ ರೋಗ ಪತ್ತೆಹಚ್ಚಿ ಚಿಕಿತ್ಸೆ ನೀಡುವುದರಿಂದ ಮುಂದೆ ಆಗಬಹುದಾದ ತೊಂದರೆಗಳನ್ನು ತಪ್ಪಿಸಬಹುದು. ಅಭಿಯಾನದ ವೇಳೆ ಇಂತಹ ಮಹತ್ವದ ಮಾಹಿತಿಗಳನ್ನು ನೀಡಬೇಕು’ ಎಂದು ಸಿಇಒ ತಿಳಿಸಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಸ್. ಚಿದಂಬರ, ಕುಷ್ಠರೋಗ ನಿರ್ಮೂಲನಾಧಿಕಾರಿ ಡಾ. ಚಂದ್ರಶೇಖರ್, ಆರ್.ಸಿ.ಎಚ್ ಅಧಿಕಾರಿ ಡಾ. ಮಂಜುನಾಥ್, ಜಿಲ್ಲಾ ಕ್ಷಯ ರೋಗ ನಿರ್ಮೂಲನಾಧಿಕಾರಿ ಡಾ. ರವಿಕುಮಾರ್, ತಾಲ್ಲೂಕು ಆರೋಗ್ಯ ಅಧಿಕಾರಿಗಳು, ಆರೋಗ್ಯ ಇಲಾಖೆಯ ಇತರೆ ಅಧಿಕಾರಿಗಳು ಇದ್ದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT