ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶೀಘ್ರ ಶಿಕ್ಷಕ ಸ್ನೇಹಿ ವರ್ಗಾವಣೆ ಸೂತ್ರ: ಸುರೇಶ್‌ ಕುಮಾರ್‌

Last Updated 14 ಸೆಪ್ಟೆಂಬರ್ 2019, 20:00 IST
ಅಕ್ಷರ ಗಾತ್ರ

ಚಾಮರಾಜನಗರ: ಶಿಕ್ಷಕ ಸ್ನೇಹಿ ವರ್ಗಾವಣೆ ಸೂತ್ರವನ್ನು ಶೀಘ್ರದಲ್ಲಿ ಜಾರಿ ಮಾಡಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಶನಿವಾರ ಇಲ್ಲಿ ಹೇಳಿದರು.

ಹಿಂದಿ ಭಾಷಾ ಶಿಕ್ಷಕರ ಶೈಕ್ಷಣಿಕ ಸಮ್ಮೇಳನ ಹಾಗೂ ಹಿಂದಿ ದಿವಸ್‌ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಶಿಕ್ಷಕರ ವರ್ಗಾವಣೆ ಬಗ್ಗೆ ಭಾರಿ ಚರ್ಚೆ ನಡೆಯುತ್ತಿದೆ. ವರ್ಗಾವಣೆ ಪ್ರಕ್ರಿಯೆ ಎಲ್ಲೋ ಎಡವಿದೆ ಎಂದು ನನಗೆ ಅನಿಸುತ್ತದೆ‘ ಎಂದರು.

‘ಸರ್ಕಾರದ ಬೇರೆ ಯಾವ ಇಲಾಖೆಗಳಲ್ಲೂ ಇಲ್ಲದ ಕಡ್ಡಾಯ ವರ್ಗಾವಣೆ ಶಿಕ್ಷಕರಿಗೆ ಮಾತ್ರ ಏಕೆ’ ಎಂದು ಪ್ರಶ್ನಿಸಿದರು.

‘ಮಕ್ಕಳ ಸರ್ವತೋಮುಖ ಬೆಳವಣಿಗೆಗಾಗಿ ಪಠ್ಯಪುಸ್ತಕ ನೋಡಿ ಪರೀಕ್ಷೆ ಬರೆಯುವ (ಓಪ‍ನ್‌ ಬುಕ್‌ ಎಕ್ಸಾಂ) ಪರಿಕಲ್ಪನೆಯನ್ನು ಎನ್‌.ಮಹೇಶ್‌ ಅವರು ಶಿಕ್ಷಣ ಸಚಿವರಾಗಿದ್ದಾಗ ಪ್ರಸ್ತಾಪಿಸಿದ್ದರು. ಅದನ್ನು ಜಾರಿ ಮಾಡುವ ಬಗ್ಗೆ ಸಂಬಂಧಿಸಿದವರೊಂದಿಗೆ ಚರ್ಚಿಸಿ, ಕ್ರಮ ತೆಗೆದುಕೊಳ್ಳುತ್ತೇನೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT