ಬುಧವಾರ, ಜನವರಿ 20, 2021
27 °C

ಮುಖ್ಯ ಶಿಕ್ಷಕಿಗೆ ನಿಂದನೆ: ಶಿಕ್ಷಕ ಅಮಾನತು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಾಮರಾಜನಗರ: ಸಾರ್ವಜನಿಕವಾಗಿ ಶಾಲೆಯ ಮುಖ್ಯ ಶಿಕ್ಷಕಿಯನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದ ಯಳಂದೂರು ತಾಲ್ಲೂಕಿನ ಚಮಲಾಪುರ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕ ಲೋಕೇಶ್‌ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಸ್‌.ಟಿ.ಜವರೇಗೌಡ ಅವರು ಸೋಮವಾರ ಆದೇಶ ಹೊರಡಿಸಿದ್ದಾರೆ. 

ದೈಹಿಕ ದೃಢತೆ ಪ್ರಮಾಣ ಪತ್ರ ನೀಡುವಂತೆ ಶಾಲೆಯ ಪ್ರಭಾರ ಮುಖ್ಯ ಶಿಕ್ಷಕಿ ದಾಕ್ಷಾಯಣಿ ಅವರು ಹೇಳಿದ್ದಕ್ಕೆ ಕೋಪಗೊಂಡ ಲೋಕೇಶ್‌ ಅವರು ಶಾಲೆಯಲ್ಲಿ ರಂಪಾಟ ಮಾಡಿದ್ದರು. ಇದರಿಂದ ಭಯಗೊಂಡಿದ್ದ ದಾಕ್ಷಾಯಿಣಿ ಅವರು ಶಾಲೆಯಿಂದ ಹೊರ ಬಂದು ರಸ್ತೆಯಲ್ಲಿ ನಿಂತಿದ್ದರು. ಲೋಕೇಶ್‌ ಅವರು ಗೇಟಿನ ಬಳಿ ಬಂದು ಮುಖ್ಯ ಶಿಕ್ಷಕಿಗೆ ಅಶ್ಲೀಲ ಪದಗಳಿಂದ ನಿಂದಿಸಿದ್ದರು.

ಜನವರಿ 7ರಂದು ನಡೆದಿದ್ದ ಘಟನೆಯನ್ನು ಸ್ಥಳೀಯರೊಬ್ಬರು ಮೊಬೈಲ್‌ನಲ್ಲಿ ಚಿತ್ರೀಕರಿಸಿದ್ದರು. ಈ ವಿಡಿಯೊ ‌ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿತ್ತು. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು