ಯಳಂದೂರು: ತಾಲ್ಲೂಕಿನ ಬಿಳಿಗಿರಿರಂಗನಬೆಟ್ಟದಲ್ಲಿ ಸಮಾಜ ಕಲ್ಯಾಣ ಇಲಾಖೆ ಅಧೀನದಲ್ಲಿ ನಡೆಯುವ ಕಿತ್ತೂರು ರಾಣಿ ಚನ್ನಮ್ಮ, ಮೊರಾರ್ಜಿ ವಸತಿ ಶಾಲೆ ಪ್ರಾಂಶುಪಾಲರು, ಶಿಕ್ಷಕರು ಮತ್ತು ನೌಕರರು ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ತೋಳಿಗೆ ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ ನಡೆಸಿದರು.

ವಸತಿ ಶಾಲೆ ನೌಕರರ ಸಂಘದ ಕಾರ್ಯದರ್ಶಿ ಸುನೀಲ್ ಕುಮಾರ್ ಮಾತನಾಡಿ, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆ (ಕ್ರೈಸ್) ಶಿಕ್ಷಕರು ಮತ್ತು ನೌಕರರು ಹಲವು ಸೌಲಭ್ಯಗಳಿಂದ ವಂಚಿತರಾಗಿದ್ದಾರೆ. ಇವರಿಗೆ ತುರ್ತಾಗಿ ನಿರ್ದೇಶನಾಲಯ ರಚಿಸಬೇಕು, ಇಲ್ಲವೇ ಎಸ್ಸಿ–ಎಸ್ಟಿ, ಬಿಸಿ ವಸತಿ ಶಾಲೆಗಳನ್ನು ಸಿಬ್ಬಂದಿಗಳ ಸಮೇತ ಸಂಬಂಧಿಸಿದ ಇಲಾಖೆಗಳ ವಶಕ್ಕೆ ನೀಡಬೇಕು. ಜ್ಯೋತಿ ಸಂಜೀವಿನಿ ಯೋಜನೆ ಅನುಷ್ಠಾನಗೊಳಿಸುವುದು, ಮರಣ ಮತ್ತು ನಿವೃತ್ತಿ ಉಪದಾನ ಸೌಲಭ್ಯ ಕಲ್ಪಿಸುವುದು, ಮನೆ ಬಾಡಿಗೆ ಕಡಿತ ಮತ್ತು ಶೇ 10 ವಿಶೇಷ ಭತ್ಯೆ ಮಂಜೂರಾತಿಗೆ ಅನುಮೋದನೆ ನೀಡಬೇಕು’ ಎಂದು ಒತ್ತಾಯಿಸಿದರು.

ಪ್ರಾಂಶುಪಾಲ ಕುಮಾರಸ್ವಾಮಿ ಮಾತನಾಡಿ, ‘ಬೆಂಗಳೂರಿನಲ್ಲಿ 3 ಸಾವಿರ ನೌಕರರು ಪ್ರತಿಭಟನೆ ನಡೆಸಿದ್ದು, ಆಯಾ ಜಿಲ್ಲಾ ವ್ಯಾಪ್ತಿಯ ಶಾಲೆಯಲ್ಲಿ ಮೊದಲ ದಿನ ಕಪ್ಪು ಪಟ್ಟಿ ಧರಿಸಿ ಕರ್ತವ್ಯ ನಿರ್ವಸಲಾಗಿದೆ. 2ನೇ ದಿನ ತರಗತಿ ಬಹಿಷ್ಕಾರ ಮಾಡಲಾಗಿದೆ, ಕೊನೆಯ ದಿನ ಪಾದಯಾತ್ರೆಯಲ್ಲಿ ತೆರಳಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಗುತ್ತದೆ. ಮುಂದಿನ ಮೂರು ದಿನಗಳಲ್ಲಿ ಬೇಡಿಕೆ ಈಡೇರದಿದ್ದರೆ ಜೂ.2 ರಿಂದ ಧರಣಿ ಸತ್ಯಾಗ್ರಹ ನಡೆಸಲಾಗುವುದು’ ಎಂದರು.

ಸಿಬ್ಬಂದಿ ಬಸವಣ್ಣ, ಜ್ಞಾನೇಂದ್ರ ಸ್ವಾಮಿ, ನಾಗರಾಜು, ತ್ಯಾಗರಾಜು, ನಳಿನ, ಶಶಿಧರ್, ನಂದಿಶ್, ಮಹೇಶ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.