ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗುಂಡ್ಲುಪೇಟೆ| ದರ್ಗಾಕ್ಕೆ ಎಲ್‌ಕೆಜಿ ಮಕ್ಕಳ ಭೇಟಿ: ಹಿಂದೂ ಜಾಗರಣೆ ವೇದಿಕೆ ಆಕ್ಷೇಪ

Last Updated 12 ಜುಲೈ 2022, 15:56 IST
ಅಕ್ಷರ ಗಾತ್ರ

ಗುಂಡ್ಲುಪೇಟೆ: ಪಟ್ಟಣದ ಯಂಗ್ ಸ್ಕಾಲರ್ ಶಾಲೆಯು ಕ್ಷೇತ್ರ ಭೇಟಿಯ ಅಂಗವಾಗಿ ಎಲ್‍ಕೆಜಿ ಮಕ್ಕಳನ್ನು ದರ್ಗಾ, ಮಸೀದಿಗೆ ಕರೆದುಕೊಂಡು ಹೋಗಿದ್ದಕ್ಕೆ ಹಿಂದೂ ಜಾಗರಣ ವೇದಿಕೆ ಆಕ್ಷೇಪ ವ್ಯಕ್ತಪಡಿಸಿದೆ.

ಮೈಸೂರು ಜಿಲ್ಲಾ ಗ್ರಾಮಾಂತರ ಬಿಜೆಪಿ ಮಹಿಳಾ ಘಟಕದ ಅಧ್ಯಕ್ಷೆ ಮಂಗಳಾ ಸೋಮಶೇಖರ್ ಮಾಲೀಕತ್ವದಶಾಲೆಯ ಶಿಕ್ಷಕರು ಎಲ್‌ಕೆಜಿ ಮಕ್ಕಳನ್ನು ಕಳೆದ ಶುಕ್ರವಾರ (ಜುಲೈ 8) ತೆರಕಣಾಂಬಿ ಬಳಿ ಇರುವ ದರ್ಗಾ ಹಾಗೂ ಮಸೀದಿಗೆ ಕರೆದುಕೊಂಡು ಹೋಗಿದ್ದರು. ಈ ವಿಚಾರವಾಘಿ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆ ಆರಂಭವಾಗುತ್ತಿದ್ದಂತೆಯೇ ಹಿಂದೂ ಜಾಗರಣ ವೇದಿಕೆಯವರು ಕ್ಷೇತ್ರ ಶಿಕ್ಷಣಾಧಿಕಾರಿ ಎಸ್‌.ಸಿ.ಶಿವಮೂರ್ತಿ ಅವರಿಗೆ ದೂರು ನೀಡಿದ್ದಾರೆ.

ಶಾಲೆಗೆ ಶಿಕ್ಷಣಾಧಿಕಾರಿ ಶಿವಮೂರ್ತಿ ಭೇಟಿ ನೀಡಿ ಶಾಲೆಯ ಆಡಳಿತ ಮಂಡಳಿಗೆ ನೋಟಿಸ್‌ ನೀಡಿದ್ದಾರೆ. ಕ್ಷೇತ್ರ ಭೇಟಿಗೂ ಮುನ್ನ ಇಲಾಖೆಯ ಅನುಮತಿ ಪಡೆಯಬೇಕು ಎಂದು ಸೂಚಿಸಿದ್ದಾರೆ.

ಈ ಬಗ್ಗೆ ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದ ಎಸ್‌.ಸಿ.ಶಿವಮೂರ್ತಿ ಅವರು, ‘ಕ್ಷೇತ್ರ ಭೇಟಿ ಎಂಬ ಹೆಸರಿನಲ್ಲಿ ಹೊಸ ಸ್ಥಳಗಳ ಪರಿಚಯಿಸಲು ಶಿಕ್ಷಕರು ಮಕ್ಕಳನ್ನು ಕರೆದುಕೊಂಡು ಹೋಗಿದ್ದರು. ಈ ವಿಚಾರವಾಗಿ ಸಂಸ್ಥೆಗೆ ನೋಟಿಸ್ ನೀಡಲಾಗಿದ್ದು, ತಪ್ಪಾಗಿದೆ ಎಂದು ಒಪ್ಪಿಕೊಂಡಿದ್ದಾರೆ’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT