ಮಂಗಳವಾರ, ಜನವರಿ 25, 2022
28 °C

ಚಾಮರಾಜನಗರ: 10 ಪೊಲೀಸರಿಗೆ ಕೋವಿಡ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಾಮರಾಜನಗರ: ಜಿಲ್ಲೆಯಲ್ಲಿ 10 ಮಂದಿ ಪೊಲೀಸ್‌ ಸಿಬ್ಬಂದಿಗೆ ಕೋವಿಡ್‌ ಇರುವುದು ದೃಢಪಟ್ಟಿದೆ. 

ಸೋಂಕು ಖಚಿತರಾದವರಲ್ಲಿ ತಲಾ ಇಬ್ಬರು ಇನ್‌ಸ್ಪೆಕ್ಟರ್‌ಗಳು, ಸಬ್‌ ಇನ್‌ಸ್ಪೆಕ್ಟರ್‌ಗಳು,  ಎಎಸ್‌ಐಗಳು ಹಾಗೂ ನಾಲ್ವರು ಕಾನ್‌ಸ್ಟೆಬಲ್‌ಗಳು ಸೇರಿದ್ದಾರೆ. 

ಗುಂಡ್ಲುಪೇಟೆ ತಾಲ್ಲೂಕಿನಲ್ಲಿ ಎಂಟು ಪೊಲೀಸರು ಕೋವಿಡ್‌ನಿಂದ ಬಳಲಿದರೆ, ಚಾಮರಾಜನಗರ ಹಾಗೂ ಕೊಳ್ಳೇಗಾಲದಲ್ಲಿ ತಲಾ ಒಬ್ಬರಿಗೆ ಸೋಂಕು ದೃಢಪಟ್ಟಿದೆ. ಯಾರಲ್ಲೂ ತೀವ್ರವಾದ ರೋಗ ಲಕ್ಷಣ ಕಂಡು ಬಂದಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ. 

’ಜಿಲ್ಲೆಯಾದ್ಯಂತ ರೋಗ ಲಕ್ಷಣ ಕಂಡು ಬಂದ ಸಿಬ್ಬಂದಿಗೆ ಪರೀಕ್ಷೆ ನಡೆಸುತ್ತಿದ್ದೇವೆ. ನಮ್ಮಲ್ಲಿ ಸದ್ಯ 10 ಮಂದಿಗೆ ಸೋಂಕು ದೃಢಪಟ್ಟಿದೆ. ಎಲ್ಲರ ಆರೋಗ್ಯವೂ ಸ್ಥಿರವಾಗಿದೆ. ಗಂಭೀರ ರೋಗ ಲಕ್ಷಣಗಳಿಲ್ಲ‘ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ದಿವ್ಯಾ ಸಾರಾ ಥಾಮಸ್‌ ಅವರು ’ಪ್ರಜಾವಾಣಿ‘ಗೆ ತಿಳಿಸಿದರು. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು