ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮತ ಜಾಗೃತಿ: ಹೊಗೇನಕಲ್‌ನಲ್ಲಿ ತಪ್ಪೋತ್ಸವ

Published 20 ಏಪ್ರಿಲ್ 2024, 5:04 IST
Last Updated 20 ಏಪ್ರಿಲ್ 2024, 5:04 IST
ಅಕ್ಷರ ಗಾತ್ರ

ಚಾಮರಾಜನಗರ: ಲೋಕಸಭಾ ಚುನಾವಣೆ ಸಂಬಂಧ ಜಿಲ್ಲೆಯ ಗಡಿ ಹಾಗೂ ಕೊನೆಯ ಗ್ರಾಮ ಪಂಚಾಯತಿ ಗೋಪಿನಾಥಂ ಗ್ರಾಮದ ಬಳಿಯಿರುವ ಹೊಗೇನಕಲ್ ಜಲಪಾತ ಪ್ರದೇಶದ ಕಾವೇರಿ ನದಿಯಲ್ಲಿ ತೆಪ್ಪೋತ್ಸವ ನಡೆಸಿ ಮತದಾನ ಜಾಗೃತಿ ನಡೆಸಲಾಯಿತು. 

ರಾಜ್ಯ ಸ್ವೀಪ್ ನೋಡೆಲ್ ಅಧಿಕಾರಿ ಪಿ.ಎಸ್.ವಸ್ತ್ರದ್ ಅವರು ಜಾಗೃತಿ ಕಾರ್ಯಕ್ರಮದಲ್ಲಿ ಭಾಗಿಯಾದರು. 

ಕಾರ್ಯಕ್ರಮಕ್ಕೂ ಮೊದಲು ಗೋಪಿನಾಥಂ ಗ್ರಾಮದ ಮಹಿಳೆಯರು ಗ್ರಾಮದಿಂದ ಹೊಗೇನಕಲ್ ಜಲಪಾತದ ದ್ವಾರದ ಮುಂಭಾಗದ ಕಾವೇರಿ ದಡದವರೆಗೆ ಪೂರ್ಣ ಕುಂಭ ಹಿಡಿದು ಪಿ.ಎಸ್.ವಸ್ತ್ರದ್ ಅವರನ್ನು ಸ್ವಾಗತಿಸಿದರು.

ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದ ವಸ್ತ್ರದ್, ‘ಎಲ್ಲರೂ 26ರಂದು ನಡೆಯಲಿರುವ ಚುನಾವಣೆಯಲ್ಲಿ ಮತದಾನ ಮಾಡಬೇಕು. ನಿಮ್ಮ ಹೆಸರು ಮತದಾನ ಪಟ್ಟಿಯಲ್ಲಿ ಇರುವ ಬಗ್ಗೆ ಹೆಲ್ಪ್ ಲೈನ್ ಆ್ಯಪ್ ಮುಖಾಂತರ ಖಚಿತಪಡಿಸಿಕೊಳ್ಳಿ. ಚುನಾವಣಾ ಸಂಬಂಧ ಯಾವುದೇ ಅಕ್ರಮ ಚಟುವಟಿಕೆಗಳು ಕಂಡು ಬಂದರೆ ಸಿ –ವಿಜಿಲ್ ಆ್ಯಪ್‌ನಲ್ಲಿ ದೂರು ಸಲ್ಲಿಸಬಹುದು. ಎಲ್ಲರೂ ನ್ಯಾಯ ಸಮ್ಮತ ಮತದಾನ ಮಾಡಿ ಹಾಗೂ ನೈತಿಕ ಮತದಾನ ಬೆಂಬಲಿಸಿ’ ಎಂದರು.

ನಂತರ ಮಾರಿಕೊಟ್ಟಾಯಿ ಮತಗಟ್ಟೆ ಸಂಖ್ಯೆ 141 ರಲ್ಲಿ ಮತದಾನದ ಧ್ವಜಾರೋಹಣ ನೆರವೇರಿಸಿ ಬಳಿಕ ಮತಗಟ್ಟೆ ವೀಕ್ಷಣೆ ಮಾಡಿ ಮೂಲ ಸೌಕರ್ಯಗಳ ಬಗ್ಗೆ ಪರಿಶೀಲನೆ ನಡೆಸಿದರು.

ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷ ಹಾಗೂ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆನಂದ್ ಪ್ರಕಾಶ್ ಮೀನಾ ಮಾತನಾಡಿ, ‘ಹಣ, ಹೆಂಡ ಇತರೆ ಯಾವುದೇ ಆಮಿಷಗಳಿಗೆ ಒಳಗಾಗದೆ ನಿಷ್ಪಕ್ಷಪಾತವಾಗಿ ಮತ ಚಲಾಯಿಸಬೇಕು. ಮತದಾನ ನಿಮ್ಮ ಮುಂದಿನ ಪೀಳಿಗೆಗೆ ಭವಿಷ್ಯ ರೂಪಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ’ ಎಂದು ಹೇಳಿದರು.

ಜಿಲ್ಲಾ ಸ್ವೀಪ್ ಸಮಿತಿ ನೋಡೆಲ್ ಅಧಿಕಾರಿ ಹಾಗೂ ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಪಿ.ಲಕ್ಷ್ಮಿ ಮತದಾನದ ಪ್ರತಿಜ್ಞಾ ವಿಧಿ ಬೋಧಿಸಿದರು.

ಹನೂರು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಉಮೇಶ್, ಸಹಾಯಕ ನಿರ್ದೇಶಕರಾದ ರವೀಂದ್ರ, ತಾಲ್ಲೂಕು ಪಂಚಾಯತಿ ಹಾಗೂ ಎಲ್ಲಾ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು, ನರೇಗಾ ಸಹಾಯಕ ಎಂಜಿನಿಯರ್ ಇತರರು ಭಾಗವಹಿಸಿದ್ದರು.

ಗಡಿ ಗ್ರಾಮ ಗೋಪಿನಾಥಂ ದೀಪನಡಿಗೆ

ಹನೂರು: ಇದೇ 26ರಂದು ನಡೆಯಲಿರುವ ಮತದಾನದಲ್ಲಿ ಎಲ್ಲರೂ ಸಕ್ರಿಯರಾಗಿ ಭಾಗವಹಿಸಬೇಕು ಎಂದು ಜನರಲ್ಲಿ ಜಾಗೃತಿ ಮೂಡಿಸಲು ತಾಲ್ಲೂಕು ಸ್ವೀಪ್‌ ಸಮಿತಿಯಿಂದ ಗಡಿ ಗ್ರಾಮ ಗೋಪಿನಾಥಂನಲ್ಲಿ ಗುರುವಾರ ರಾತ್ರಿ ದೀಪನಡಿಗೆ ಕಾರ್ಯಕ್ರಮ ನಡೆಯಿತು.  ಶಕ್ತಿ ಮಾರಿಯಮ್ಮನ ಪ್ರವೇಶದ್ವಾರದ ಭಾಗದಲ್ಲಿ ಭಾರತದ ನಕ್ಷೆಯ ಸುತ್ತಲೂ  ದೀಪಗಳನ್ನು ಹಚ್ಚುವ ಮೂಲಕ ಜಿಲ್ಲಾ ನೋಡೆಲ್ ಅಧಿಕಾರಿ ಹಾಗೂ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಲಕ್ಷ್ಮಿ ಅವರು ತಮಟೆ ನಗಾರಿ ಬಾರಿಸುವ  ಮೂಲಕ ಚಾಲನೆ ನೀಡಿದರು. ದೀಪದ ಮೆರವಣಿಗೆಯಲ್ಲಿ ಚುನಾವಣಾ ಘೋಷವಾಕ್ಯಗಳಾದ ಚುನಾವಣಾ ಪರ್ವ-ದೇಶದ ಗರ್ವ ಮತದಾನ ನಮ್ಮ ಹಕ್ಕು ಎಲ್ಲರೂ ನೈತಿಕ ಮತದಾನ ಬೆಂಬಲಿಸಿ ಕಡ್ಡಾಯವಾಗಿ ಮತದಾನ ಮಾಡಿ ಸೇರಿದಂತೆ ಇನ್ನಿತರೆ ಮೈನವಿರೇಳಿಸುವ ಜಾಗೃತಿ ಘೋಷವಾಕ್ಯಗಳನ್ನು ಮೊಳಗಿಸಿದರು. ಲಕ್ಷ್ಮಿ ಇಒ ಉಮೇಶ ಮಾತನಾಡಿದರು. ತಾಲ್ಲೂಕಿನ ಎಲ್ಲ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ನರೇಗಾ ತಾಂತ್ರಿಕ ಸಹಾಯಕ ಎಂಜಿನಿಯರ್ ಬಿ.ಎಫ್.ಟಿ ಮತ್ತು ಎನ್.ಆರ್.ಎಲ್.ಎಂ ಸಿಬ್ಬಂದಿ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT