ಹನೂರು: ಜಿಲ್ಲಾಧಿಕಾರಿ ಶಿಲ್ಪಾನಾಗ್ ಮಂಗಳವಾರ ಕೊಳ್ಳೇಗಾಲ ಹಾಗೂ ಹನೂರು ತಾಲ್ಲೂಕುಗಳಿಗೆ ಭೇಟಿನೀಡಿ ಹಲವೆಡೆ ನಡೆಯುತ್ತಿರುವ ಅಭಿವೃದ್ದಿ ಕಾಮಗಾರಿಗಳನ್ನು ಪರಿಶೀಲಿಸಿದರು.

ಕೊಳ್ಳೇಗಾಲದ ಮುಡಿಗುಂಡ ಸೇತುವೆಯನ್ನು ₹ 15 ಕೋಟಿ ವೆಚ್ಚದಲ್ಲಿ ನಿರ್ಮಾಣ ಮಾಡಲು ಸಚಿವ ಸಂಪುಟದಲ್ಲಿ ಅನುಮೋದನೆ ದೊರೆತಿದ್ದು ಶೀಘ್ರ ಸರ್ಕಾರದ ಅಂದಾಜು ಪರಿಶೀಲನಾ ಸಮಿತಿಯ ಮುಂದೆ ಪ್ರಸ್ತಾವ ಸಲ್ಲಿಸಲಾಗುವುದು. ಕಾಮಗಾರಿ ಸಂಬಂಧ ಮುಂದಿನ ಪ್ರಕ್ರಿಯೆ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.

ಬಳಿಕ ಹನೂರಿನಲ್ಲಿ ₹ 8.60 ಕೋಟಿ ವೆಚ್ಚದಲ್ಲಿ ಪ್ರಜಾಸೌಧ ನಿರ್ಮಾಣ ಮಾಡಲು ಆಡಳಿತಾತ್ಮಕ ಅನುಮೋದನೆ ದೊರೆತಿರುವ ಹಿನ್ನಲೆಯಲ್ಲಿ ಶಾಸಕ ಎಂ.ಆರ್. ಮಂಜುನಾಥ್ ಅವರೊಂದಿಗೆ ಸ್ಥಳಕ್ಕೆ ಭೇಟಿನೀಡಿ ಪರಿಶೀಲಿಸಿದರು. ಕಾಮಗಾರಿ ಅನುಷ್ಠಾನ ಸಂಬಂಧ ತ್ವರಿತ ಕ್ರಮ ವಹಿಸುವಂತೆ ಸೂಚಿಸಿದರು.

ತಾಲ್ಲೂಕಿನ ಬೈರನತ್ತ, ಬಿ.ಎಂ.ಹಳ್ಳಿ ಮಾರ್ಗ ಮಧ್ಯದ ಸಂಪರ್ಕ ತಟ್ಟೆಹಳ್ಳ ಸೇತುವೆಯನ್ನು 2.94 ಕೋಟಿ ವೆಚ್ಚದಲ್ಲಿ ನಿರ್ಮಾಣ ಮಾಡಲಾಗುತ್ತಿದೆ ಎಂದು ತಿಳಿಸಿದರು.

ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಎಂಜಿನಿಯರ್ ಕಿರಣ್ ಕುಮಾರ್, ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಕಾರ್ಯಪಾಲಕ ಎಂಜಿನಿಯರ್ ರಮೇಶ್ಕುಮಾರ್ ಇನ್ನೀತರ ಅಧಿಕಾರಿಗಳು ಈ ಸಂದರ್ಭದಲ್ಲಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.