ಬುಧವಾರ, ಆಗಸ್ಟ್ 4, 2021
28 °C

ಕೋವಿಡ್ ನಿಯಂತ್ರಣ ನಮ್ಮ ಮುಂದಿನ ಗುರಿ; ನಾಯಕತ್ವ ಬದಲಾವಣೆ ಅಲ್ಲ: ಸುರೇಶ್ ಕುಮಾರ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಾಮರಾಜನಗರ: ನಮ್ಮ ಮುಂದೆ ಕೋವಿಡ್ ನಿಯಂತ್ರಣವೊಂದೆ ಈಗ ಇರುವ ಗುರಿ. ಇದನ್ನು ಬಿಟ್ಟು ನಾಯಕತ್ವ ಬದಲಾವಣೆ ಸೇರಿ ಬೇರೆ ಯಾವುದೇ ಗುರಿಗಳಿಲ್ಲ ಎಂದು ಸಚಿವ ಎಸ್. ಸುರೇಶಕುಮಾರ್ ತಿಳಿಸಿದರು‌.

ನಾಯಕತ್ವ ಬದಲಾವಣೆ ಕುರಿತ ಸುದ್ದಿಗಾರರ ಪ್ರಶ್ನೆಗಳಿಗೆ ಶುಕ್ರವಾರ ಪ್ರತಿಕ್ರಿಯಿಸಿದ ಅವರು, ನಮ್ಮ ಮುಂದೆ ಕೋವಿಡ್ ನಿಯಂತ್ರಣ ಬಿಟ್ಟು ಬೇರೆ ಯಾವುದೇ ಗುರಿ ಇಟ್ಟುಕೊಳ್ಳುವುದು ಸರಿಯಲ್ಲ ಎಂದರು.

ಆಕ್ಸಿಜನ್ ಸೌಲಭ್ಯ ಅಳವಡಿಸಿದ ಉಚಿತ ಬಸ್ ಸೇವೆಗೆ ಚಾಲನೆ 

ಬೆಂಗಳೂರಿನ ಲಯನ್ಸ್ ಕ್ಲಬ್, ಫ್ಯಾಮಿಲಿ ಆಂಡ್ ಫ್ರೆಂಡ್ಸ್ ಆಫ್ ಇಂಡಿಯಾ ಹಾಗೂ ಸಮರ್ಥನಂ ಅಂಗವಿಕಲರ ಸಂಸ್ಥೆ ವತಿಯಿಂದ ಕೊರೊನಾ ಸೋಂಕಿತರಿಗಾಗಿ ನೀಡಲಾಗುತ್ತಿರುವ ಆಕ್ಸಿಜನ್ ಸೌಲಭ್ಯ ಅಳವಡಿಸಿದ ಉಚಿತ ಬಸ್ ಸೇವೆಗೆ ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಅವರಣದಲ್ಲಿ ಸಚಿವ ಎಸ್.ಸುರೇಶ್ ಕುಮಾರ್ ಚಾಲನೆ ನೀಡಿದರು.

ಬಸ್ ನಲ್ಲಿ 8 ಆಕ್ಸಿಜನ್ ಕಾನ್ಸನ್ ಟ್ರೇಟರ್ ಗಳಿದ್ದು ಗುಂಡ್ಲುಪೇಟೆ ತಾಲ್ಲೂಕು ಆಸ್ಪತ್ರೆಯ ಮುಂದೆ ನಿತ್ಯ ಬಸ್ ಇರಲಿದೆ. ಆಕ್ಸಿಜನ್ ಬೆಡ್ ಖಾಲಿ ಇಲ್ಲದೇ ಇರುವಂತಹ ಸಂದರ್ಭದಲ್ಲಿ ರೋಗಿಗಳಿಗೆ ಈ ಬಸ್ ನಲ್ಲಿ ಆಕ್ಸಿಜನ್ ಸೌಲಭ್ಯ ಒದಗಿಸಲಾಗುತ್ತದೆ ಎಂದು ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು