ಸೋಮವಾರ, ಸೆಪ್ಟೆಂಬರ್ 26, 2022
24 °C

ಚಾಮರಾಜನಗರ: ಹುಟ್ಟುಹಬ್ಬದ ದಿನದಂದೇ ಆತ್ಮಹತ್ಯೆ ಮಾಡಿಕೊಂಡ ಉಪನ್ಯಾಸಕಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಾಮರಾಜನಗರ: ನಗರದ ಜೆಎಸ್‌ಎಸ್‌ ಮಹಿಳಾ ಕಾಲೇಜಿನ ಉಪನ್ಯಾಸಕಿಯೊಬ್ಬರು ಮಂಗಳವಾರ ಕಾಲೇಜಿನ ಹಾಸ್ಟೆಲ್‌ನಲ್ಲಿನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಪದವಿ ಕಾಲೇಜಿನಲ್ಲಿ ಜೀವ ವಿಜ್ಞಾನ ವಿಷಯ ಬೋಧನೆ ಮಾಡುತ್ತಿದ್ದ ಚಂದನಾ (26) ಆತ್ಮಹತ್ಯೆ ಮಾಡಿಕೊಂಡವರು. ಯಳಂದೂರು ತಾಲ್ಲೂಕಿನ ಅಂಬಳೆಯವರಾಗಿದ್ದ ಚಂದನಾ ಅವರ ಹುಟ್ಟುಹಬ್ಬ ಮಂಗಳವಾರವೇ ಇತ್ತು. 

ಜೆಎಸ್‌ಎಸ್‌ ಕಾಲೇಜಿನಲ್ಲೇ ಓದಿದ್ದ ಅವರು, ಅಲ್ಲಿಯೇ ಉಪನ್ಯಾಸಕರಾಗಿ ನೇಮಕಗೊಂಡಿದ್ದರು. ಹಾಸ್ಟೆಲ್‌ನಲ್ಲೇ ಉಳಿದುಕೊಂಡಿದ್ದರು.

ಮಂಗಳವಾರ ಬೆಳಿಗ್ಗೆ 10.30–11 ಗಂಟೆಯ ಅವಧಿಯಲ್ಲಿ ಕೊಠಡಿಯ ಫ್ಯಾನಿಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. 11.30ರ ಹೊತ್ತಿಗೆ ಪ್ರಕರಣ ಬೆಳಕಿಗೆ ಬಂದಿದೆ.  ಆತ್ಮಹತ್ಯೆಗೆ ನಿಖರ ಕಾರಣ ಗೊತ್ತಾಗಿಲ್ಲ.

‘ಸಾಯುವುದಕ್ಕೂ ಮೊದಲೂ ಪತ್ರ ಬರೆದಿದ್ದಾರೆ. ಅದರಲ್ಲಿ, ‘ನನ್ನ ಸಾವಿಗೆ ನಾನೇ ಕಾರಣ. ಒತ್ತಡದಿಂದಾಗಿ ಈ ನಿರ್ಧಾರ ತೆಗೆದುಕೊಳ್ಳುತ್ತಿದ್ದೇನೆ’ ಎಂದು ಬರೆದಿದ್ದಾರೆ’ ಎಂದು ಪಟ್ಟಣ ಠಾಣೆ ಇನ್‌ಸ್ಪೆಕ್ಟರ್‌ ತಿಮ್ಮರಾಜು ‘ಪ್ರಜಾವಾಣಿ’ಗೆ ತಿಳಿಸಿದರು. 

ಚಂದನಾ ತಂದೆ ನೀಡಿರುವ ದೂರಿನ ಆಧಾರದಲ್ಲಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು