ಶನಿವಾರ, 15 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗುಂಡ್ಲುಪೇಟೆ | ಉಪಟಳ ನೀಡುತ್ತಿದ್ದ ಚಿರತೆ ಸೆರೆ

Published 10 ಜೂನ್ 2024, 15:27 IST
Last Updated 10 ಜೂನ್ 2024, 15:27 IST
ಅಕ್ಷರ ಗಾತ್ರ

ಗುಂಡ್ಲುಪೇಟೆ: ರೈತರಿಗೆ ಉಪಟಳ ನೀಡುತ್ತಿದ್ದ ಚಿರತೆ ಬೋನ್‌ನಲ್ಲಿ ಸೆರೆಯಾಗಿರುವ ಘಟನೆ ತಾಲ್ಲೂಕಿನ ವಡೆಯನಪುರ ಗ್ರಾಮದ ಹೊರ ವಲಯದ ಜಮೀನಿನಲ್ಲಿ ನಡೆದಿದೆ.

ವಡೆಯನಪುರ, ಬೊಮ್ಮಲಾಪುರ, ಕೊಡಸೋಗೆ ಸುತ್ತಮುತ್ತಲ ಗ್ರಾಮಗಳ ಜಮೀನಿನಲ್ಲಿ ಕಳೆದ ಕೆಲವು ತಿಂಗಳುಗಳಿಂದ ಉಪಟಳ ನೀಡಿ, ಜಾನುವಾರುಗಳ ಮೇಲೆ ದಾಳಿ ನಡೆಸಿ ಕೊಂದು ಹೊತ್ತೊಯ್ಯುತ್ತಿತ್ತು. ಇದರಿಂದ ಭಯಭೀತರಾಗಿದ್ದ ರೈತರು ಚಿರತೆ ಸೆರೆಗೆ ಬೋನ್‌ ಇಡುವಂತೆ ಒತ್ತಾಯಿಸಿದ್ದರು. ರೈತರ ಆಕ್ರೋಶದ ಹಿನ್ನೆಲೆಯಲ್ಲಿ ಹೆಜ್ಜೆ ಗುರುತು ಹಾಗೂ ಚಲನವಲನಗಳ ಆಧಾರ ಮೇಲೆ ವಡೆಯನಪುರ ಗ್ರಾಮದ ಗಿರೀಶ್ ಎಂಬುವರ ಜಮೀನಿನಲ್ಲಿ ಬೋನ್ ಇರಿಸಲಾಗಿತ್ತು. 

ಸೋಮವಾರ ಬೆಳಗ್ಗೆ 10 ಗಂಟೆ ಸುಮಾರಿನಲ್ಲಿ ಜಮೀನಿಗೆ ಹೋಗುತ್ತಿದ್ದ ರೈತರೊಬ್ಬರು ಬೋನ್ ಬಾಗಿಲು ಮುಚ್ಚಿದ್ದ ಕಾರಣ ಹತ್ತಿರ ಹೋಗಿ ನೋಡಿದಾಗ ಚಿರತೆ ಸೆರೆಯಾಗಿರುವ ವಿಷಯ ತಿಳಿದು ಬಂದಿದೆ. ನಂತರ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ ಮೇರೆಗೆ ಆಗಮಿಸಿದ ಅರಣ್ಯಾಧಿಕಾರಿಗಳು ಚಿರತೆಯಿಂದ ಜಮೀನಿನಿಂದ ಸ್ಥಳಾಂತರಿಸಿದ್ದಾರೆ.

ಬೋನಿಗೆ ಬಿದ್ದ ಚಿರತೆಯನ್ನು ಅರಣ್ಯ ಸಂರಕ್ಷಣಾಧಿಕಾರಿ ಆದೇಶ ಮೇರೆಗೆ ಬಂಡೀಪುರ ಅಭಯಾರಣ್ಯದ ಮೂಲೆಹೊಳೆ ಕಾಡಿನಲ್ಲಿ ಬಿಡಲಾಗಿದೆ ಎಂದು ಅರಣ್ಯಾಧಿಕಾರಿಗಳು ಮಾಹಿತಿ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT