ಶುಕ್ರವಾರ, ಅಕ್ಟೋಬರ್ 23, 2020
28 °C
ಕಂಡು ಕಾಣದಂತೆ ಇದ್ದ ಅಧಿಕಾರಿಗಳು: ಆರೋಪ

ರಸ್ತೆ ಗುಂಡಿ ಮುಚ್ಚಿದ ಗ್ರಾಮಸ್ಥರು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹನೂರು: ಗ್ರಾಮದ ಮುಖ್ಯರಸ್ತೆಯಲ್ಲಿ ಬಿದ್ದಿದ್ದ ಗುಂಡಿಗಳಿಗೆ ಮಾರ್ಟಳ್ಳಿ ಗ್ರಾಮಸ್ಥರು ತಾವೇ ಮಣ್ಣು ಹಾಕಿ ಮುಚ್ಚುವ ಮೂಲಕ ರಸ್ತೆಯನ್ನು ಸರಿಪಡಿಸಿದ್ದಾರೆ.

ಗ್ರಾಮದ ಮುಖ್ಯ ರಸ್ತೆಯಲ್ಲಿ ಬಿದ್ದ ಗುಂಡಿಗಳಿಂದಾಗಿ ಮಕ್ಕಳು ವೃದ್ಧರು ಓಡಾಡುವುದೇ ದುಸ್ತರವಾಗಿತ್ತು. ಮಳೆ ಬಂದಾಗಲಂತೂ ರಸ್ತೆಯಲ್ಲೇ ನಿಲ್ಲುತ್ತಿದ್ದ ನೀರಿನಿಂದಾಗಿ ವಾಹನ ಸವಾರರು ಗುಂಡಿ ಆಳ ತಿಳಿಯದೇ ಸಾಕಷ್ಟು ಬಾರಿ ಬಿದ್ದು ಗಾಯಗೊಂಡಿದ್ದರು. ಈ ಬಗ್ಗೆ ಲೋಕೋಪಯೋಗಿ ಇಲಾಖೆ ಹಾಗೂ ಇಲ್ಲಿನ ಗ್ರಾಮ ಪಂಚಾಯಿತಿ ಅಧಿಕಾರಿಗಳಿಗೆ ತಿಳಿಸಿದ್ದರೂ ಯಾವುದೇ ಪ್ರಯೋಜವಾಗಿರಲಿಲ್ಲ ಆದ್ದರಿಂದ ಗ್ರಾಮಸ್ಥರೇ ಮುಂದಾಗಿ ಗುಂಡಿ ಮುಚ್ಚಿದರು.

‘ಇದೇ 24ರಿಂದ ಸುಳ್ವಾಡಿ ಕಿಚ್ಚುಗುತ್ತಿ ಮಾರಮ್ಮ ದೇವಾಲಯ ತೆರೆಯುತ್ತಿದೆ. ದೇವಸ್ಥಾನಕ್ಕೆ ಬರುವವರ ಈ ರಸ್ತೆಯಲ್ಲೇ ಸಂಚರಿಸುತ್ತಾರೆ. ಮುಂದಾದರೂ ಅಧಿಕಾರಿಗಳು ಶಾಶ್ವತವಾಗಿ ಗುಂಡಿಗಳನ್ನು ಮುಚ್ಚಿ ರಸ್ತೆ ದುರಸ್ತಿಪಡಿಸಿ ಮುಂದಾಗುವ ಅನಾಹುತಗಳನ್ನು ತಡೆಗಟ್ಟಬೇಕು’ ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

‘ಮನವಿ ಸಲ್ಲಿಸಿ ಬೇಸತ್ತು ಕೊನೆಗೆ ನಾವೇ ಅಂಗಡಿ ಮಾಲೀಕರು ಹಾಗೂ ಗ್ರಾಮಸ್ಥರಿಂದ ಹಣ ಸಂಗ್ರಹಿಸಿ ಟ್ರಾಕ್ಟರ್ ಮೂಲಕ ಮಣ್ಣು ತಂದು ಗುಂಡಿಗಳನ್ನು ಮುಚ್ಚುವ ಕಾರ್ಯ ಮಾಡಿದ್ದೇವೆ. ಈ ಕೆಲಸವನ್ನು ನಾವೇ ಮಾಡಿಸಿದ್ದೇವೆಂದು ಕ್ರಿಯಾ ಯೋಜನೆ ರೂಪಿಸಿ ಗ್ರಾಮ ಪಂಚಾಯಿತಿ ಅಧಿಕಾರಿಗಳು ಇದಕ್ಕೂ ಹಣ ಬಿಡುಗಡೆ ಮಾಡಿಕೊಳ್ಳುವ ಸಾಧ್ಯತೆಯಿದೆ. ಈ ಬಗ್ಗೆ ಹಿರಿಯ ಅಧಿಕಾರಿಗಳು ಗಮನಹರಿಸಬೇಕು’ ಎಂದು ಗ್ರಾಮದ ಕರ್ನಲ್ ಮನವಿ ಮಾಡಿದ್ದಾರೆ.

 

 

 

 

 

 

 

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.