ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಾಮರಾಜನಗರ: 38 ಪ್ರಕರಣಗಳು ದೃಢ, ಸೋಂಕಿತರ ಸಂಖ್ಯೆ 305ಕ್ಕೆ ಇಳಿಕೆ

Last Updated 15 ಏಪ್ರಿಲ್ 2021, 16:41 IST
ಅಕ್ಷರ ಗಾತ್ರ

ಚಾಮರಾಜನಗರ: ಜಿಲ್ಲೆಯಲ್ಲಿ ಗುರುವಾರ 38 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ. 54 ಮಂದಿ ಗುಣಮುಖರಾಗಿದ್ದಾರೆ.

ಸಕ್ರಿಯ ಪ್ರಕರಣಗಳ ಸಂಖ್ಯೆ 305ಕ್ಕೆ ಇಳಿಕೆಯಾಗಿದೆ. ಸೋಂಕಿತರಲ್ಲಿ 216 ಮಂದಿ ಹೋಂ ಐಸೊಲೇಷನ್ನಲ್ಲಿದ್ದಾರೆ. ಐಸಿಯುಗೆ ದಾಖಲಾಗಿರುವವರ ಸಂಖ್ಯೆ ಏರಿಕೆ ಕಂಡಿದ್ದು, 11 ಮಂದಿ ಇಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಜಿಲ್ಲೆಯ ಒಟ್ಟು ಪ್ರಕರಣಗಳ ಸಂಖ್ಯೆ 7,560ಕ್ಕೆ ಏರಿಕೆಯಾಗಿದೆ. ಸೋಂಕು ಮುಕ್ತರಾದವರ ಸಂಖ್ಯೆ 7,120ಕ್ಕೆ ತಲುಪಿದೆ. ಮೂರು ದಿನಗಳಿಂದ ಜಿಲ್ಲೆಯಲ್ಲಿ ಸಾವಿನ ಪ್ರಕರಣ ವರದಿಯಾಗಿಲ್ಲ.

ಗುರುವಾರ 565 ಮಂದಿಯ ಕೋವಿಡ್ ಪರೀಕ್ಷಾ ವರದಿ ಬಂದಿದ್ದು, 530 ವರದಿಗಳು ನೆಗೆಟಿವ್ ಬಂದಿವೆ. 35 ಮಂದಿಗೆ ಸೋಂಕು ತಗುಲಿರುವುದು ಖಚಿತವಾಗಿದೆ.‌ ಜಿಲ್ಲೆಯ ಇಬ್ಬರಿಗೆ ಮೈಸೂರಿನಲ್ಲಿ ಹಾಗೂ ಒಬ್ಬರಿಗೆ ಮಂಡ್ಯದಲ್ಲಿ ಕೋವಿಡ್ ದೃಢಪಟ್ಟಿದೆ.

ಜಿಲ್ಲಾಧಿಕಾರಿ ಕರ್ತವ್ಯಕ್ಕೆ ಹಾಜರು: ಈ ಮಧ್ಯೆ, ಕೋವಿಡ್‌ ದೃಢಪಟ್ಟು, ಮನೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದ ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಅವರು ಸಂಪೂರ್ಣವಾಗಿ ಗುಣಮುಖರಾಗಿದ್ದು, ಗುರುವಾರ ಕರ್ತವ್ಯಕ್ಕೆ ಹಾಜರಾದರು. ಕೋವಿಡ್‌ಗೆ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳ ಸಭೆಯನ್ನೂ ಅವರು ನಡೆಸಿದರು. ಏಪ್ರಿಲ್‌ 4ರಂದು ಅವರಿಗೆ ಸೋಂಕು ತಗುಲಿರುವುದು ದೃಢಪಟ್ಟಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT