ಬುಧವಾರ, 17 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಾಮರಾಜನಗರ | ಮಗುಚಿದ ಬಸ್‌; 38 ಜನರಿಗೆ ಗಾಯ

Published 2 ಮಾರ್ಚ್ 2024, 5:23 IST
Last Updated 2 ಮಾರ್ಚ್ 2024, 5:23 IST
ಅಕ್ಷರ ಗಾತ್ರ

ಚಾಮರಾಜನಗರ: ನಗರದ ಹೊರವಲಯದ ಕೆಲ್ಲಂಬಳ್ಳಿ ಬದನಗುಪ್ಪೆ ಕೈಗಾರಿಕಾ ಪ್ರದೇಶದಲ್ಲಿ ಕಲರ್‌ ಟೋನ್‌ ಕಾರ್ಖಾನೆಯ ನೌಕರರನ್ನು ಕರೆದೊಯ್ಯುತ್ತಿದ್ದ ಬಸ್‌ ಶುಕ್ರವಾರ ಮಧ್ಯಾಹ್ನ ಮಗುಚಿ ಬಿದ್ದುದರಿಂದ 38 ಮಂದಿ ಗಾಯಗೊಂಡಿದ್ದಾರೆ. ಅದೃಷ್ಟವಶಾತ್‌ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ವಿಷಯ ತಿಳಿಯುತ್ತಿದ್ದಂತೆಯೇ ಚಾಮರಾಜನಗರ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.  

‘ಕೈಗಾರಿಕಾ ಪ್ರದೇಶದ ತಿರುವಿನ ಬಳಿ ಚಾಲಕನ ನಿಯಂತ್ರಣ ತಪ್ಪಿ ಬಸ್‌ ಮಗುಚಿದೆ. ಬಸ್‌ನಲ್ಲಿ ನೌಕರರು ಇದ್ದರು. 38 ಜನರ ಪೈಕಿ ನಾಲ್ವರಿಗೆ ತೀವ್ರ ಏಟಾಗಿದೆ.  ಉಳಿದವರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಮರಿಯಲಾದ ಬಸವರಾಜೇಂದ್ರ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದ್ದು, ಯಾರ ಪ್ರಾಣಕ್ಕೂ ಅಪಾಯವಿಲ್ಲ’ ಎಂದು ಚಾಮರಾಜನಗರ ಗ್ರಾಮಾಂತರ ಠಾಣೆ ಇನ್‌ಸ್ಪೆಕ್ಟರ್‌ ರವಿಶಂಕರ್‌ ಬಿ.ಎಸ್‌. ‘ಪ್ರಜಾವಾಣಿ’ಗೆ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT