ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಾಮರಾಜನಗರ: 37 ಹೊಸ ಪ್ರಕರಣ, 70 ಮಂದಿ ಸೋಂಕು ಮುಕ್ತ

Last Updated 5 ಜುಲೈ 2021, 16:45 IST
ಅಕ್ಷರ ಗಾತ್ರ

ಚಾಮರಾಜನಗರ: ಜಿಲ್ಲೆಯಲ್ಲಿ ಸೋಮವಾರ 37 ಮಂದಿಗೆ ಕೋವಿಡ್‌ ಇರುವುದು ದೃಢಪಟ್ಟಿದೆ. 70 ಮಂದಿ ಗುಣಮುಖರಾಗಿದ್ದಾರೆ. ಒಬ್ಬರು ಮೃತಪಟ್ಟಿದ್ದಾರೆ.

ಜಿಲ್ಲೆಯಲ್ಲಿ ಕೋವಿಡ್ 2ನೇ ಅಲೆ ಅಬ್ಬರಿಸಲು ಆರಂಭಿಸಿದ ನಂತರ ಇದೇ ಮೊದಲ ಬಾರಿಗೆ ಸಕ್ರಿಯ ಪ್ರಕರಣಗಳ ಸಂಖ್ಯೆ 500ಕ್ಕಿಂತ ಕೆಳಗೆ ಇಳಿದಿದೆ. ಸದ್ಯ 469 ಮಂದಿ ಸೋಂಕಿತರಿದ್ದಾರೆ. ಈ ಪೈಕಿ 26 ಮಂದಿ ಐಸಿಯುನಲ್ಲಿ ಹಾಗೂ 24 ಮಂದಿ ಹೋಂ ಐಸೊಲೇಷನ್‌ನಲ್ಲಿದ್ದಾರೆ. ಉಳಿದವರು, ಆಸ್ಪತ್ರೆ ಹಾಗೂ ಕೋವಿಡ್‌ ಕೇರ್ ಕೇಂದ್ರಗಳಲ್ಲಿದ್ದಾರೆ.

ಜಿಲ್ಲೆಯ ಒಟ್ಟು ಪ್ರಕರಣಗಳ ಸಂಖ್ಯೆ 31,071ಕ್ಕೆ ಏರಿದೆ. ಚೇತರಿಕೆ ಕಂಡವರ ಸಂಖ್ಯೆ 30,097ಕ್ಕೆ ಹಿಗ್ಗಿದೆ. ಕೋವಿಡ್‌ ಹಾಗೂ ಕೋವಿಡ್‌ಯೇತರ ಕಾರಣಗಳಿಂದ ಇದುವರೆಗೆ ಜಿಲ್ಲೆಯಲ್ಲಿ 546 ಮಂದಿ ಮೃತಪಟ್ಟಿದ್ದಾರೆ.

ಜಿಲ್ಲೆಯಲ್ಲಿ ಸೋಮವಾರ 1,728 ಮಂದಿಯ ಕೋವಿಡ್‌ ಪರೀಕ್ಷಾ ವರದಿ ಬಂದಿದ್ದು, 1,691 ವರದಿಗಳು ನೆಗೆಟಿವ್‌ ಬಂದು, 37 ಮಂದಿಗೆ ಸೋಂಕು ಇರುವುದು ಖಚಿತವಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT