ಗುರುವಾರ , ಡಿಸೆಂಬರ್ 3, 2020
18 °C

ಚಾಮರಾಜನಗರ: 32 ಹೊಸ ಪ್ರಕರಣ, 26 ಮಂದಿ ಕೋವಿಡ್‌ನಿಂದ ಗುಣಮುಖ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಾಮರಾಜನಗರ: ಜಿಲ್ಲೆಯಲ್ಲಿ ಶುಕ್ರವಾರ 32 ಹೊಸ ಕೋವಿಡ್‌ ಪ್ರಕರಣಗಳು ವರದಿಯಾಗಿವೆ. 26 ಮಂದಿ ಗುಣಮುಖರಾಗಿದ್ದಾರೆ. ಸಾವಿನ ಪ್ರಕರಣ ವರದಿಯಾಗಿಲ್ಲ.

ಇದುವರೆಗೆ ಜಿಲ್ಲೆಯ 5,942 ಮಂದಿಗೆ ಸೋಂಕು ತಗುಲಿದೆ. 5,585 ಮಂದಿ ಗುಣಮುಖರಾಗಿದ್ದಾರೆ. 104 ಮಂದಿ ಕೋವಿಡ್‌ ಕಾರಣದಿಂದ ಮೃತಪಟ್ಟಿದ್ದಾರೆ. ಕೋವಿಡ್‌ ಯೇತರ ಕಾರಣದಿಂದ 19 ಮಂದಿ ನಿಧನರಾಗಿದ್ದಾರೆ. 

‌234 ಸಕ್ರಿಯ ಪ್ರಕರಣಗಳಿವೆ. ಈ ಪೈಕಿ 117 ಮಂದಿ ಹೋಂ ಐಸೊಲೇಷನ್‌ನಲ್ಲಿದ್ದಾರೆ. 45 ಮಂದಿ ಐಸಿಯುನಲ್ಲಿದ್ದಾರೆ.

ಶುಕ್ರವಾರ 1,227 ಮಂದಿಯ ಗಂಟಲು ದ್ರವದ ಮಾದರಿಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. ಆರ್‌ಟಿಪಿಸಿಆರ್‌ನಲ್ಲಿ 915, ರ‍್ಯಾಪಿಡ್‌ ಆ್ಯಂಟಿಜೆನ್‌ ಕಿಟ್‌ ಮೂಲಕ 312 ಪರೀಕ್ಷೆಗಳನ್ನು ನಡೆಸಲಾಗಿದೆ. 1,199 ಮಂದಿಯ ವರದಿ ನೆಗೆಟಿವ್‌ ಬಂದಿವೆ. 28 ಮಂದಿಗೆ ಸೋಂಕು ಇರುವುದು ಖಚಿತವಾಗಿದೆ. ನಾಲ್ಕು ಪ್ರಕರಣಗಳು ಮೈಸೂರಿನಲ್ಲಿ ದೃಢಪಟ್ಟಿವೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು