ಬುಧವಾರ, ಜನವರಿ 27, 2021
18 °C
3,552 ನಾಮಪತ್ರಗಳು ಕ್ರಮಬದ್ಧ

ಮೊದಲ ಹಂತದ ಗ್ರಾ.ಪಂ. ಚುನಾವಣೆ: 32 ನಾಮಪತ್ರ ತಿರಸ್ಕೃತ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಾಮರಾಜನಗರ: ಗುಂಡ್ಲುಪೇಟೆ ಹಾಗೂ ಚಾಮರಾಜನಗರ ತಾಲ್ಲೂಕುಗಳಲ್ಲಿ ನಡೆಯಲಿರುವ ಮೊದಲ ಹಂತದ ಗ್ರಾಮ ಪಂಚಾಯತಿಗಳ ಚುನಾವಣೆಗಾಗಿ ಸಲ್ಲಿಕೆಯಾಗಿರುವ 3,705 ನಾಮಪತ್ರಗಳ ಪೈಕಿ 32 ನಾಮಪತ್ರಗಳು ತಿರಸ್ಕೃತವಾಗಿದೆ. 

ಶನಿವಾರ ನಾಮಪತ್ರಗಳ ಪರಿಶೀಲನೆ ಕಾರ್ಯ ನಡೆದಿದ್ದು, 3,552 ಅಭ್ಯರ್ಥಿಗಳ ನಾಮಪತ್ರಗಳು ಕ್ರಮಬದ್ಧವಾಗಿವೆ.

ಚಾಮರಾಜನಗರ ತಾಲ್ಲೂಕಿನಲ್ಲಿ 43 ಗ್ರಾಮ ಪಂಚಾಯಿತಿಗಳಿದ್ದು, 2,267 ನಾಮಪತ್ರಗಳು ಸಲ್ಲಿಕೆಯಾಗಿದ್ದವು. ಈ ಪೈಕಿ 18 ನಾಮಪತ್ರಗಳು ತಿರಸ್ಕೃತಗೊಂಡಿವೆ.

34 ಗ್ರಾಮ ಪಂಚಾಯತಿಗಳಿರುವ ಗುಂಡ್ಲುಪೇಟೆ ತಾಲ್ಲೂಕಿನಲ್ಲಿ 1,438 ನಾಮಪತ್ರಗಳು ಸಲ್ಲಿಕೆಯಾಗಿದ್ದವು. ಇವುಗಳಲ್ಲಿ 14 ನಾಮಪತ್ರಗಳು ತಿರಸ್ಕೃತವಾಗಿದ್ದು, 1409 ಅಭ್ಯರ್ಥಿಗಳ ನಾಮಪತ್ರಗಳು ಸಿಂಧುವಾಗಿವೆ ಎಂದು ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

ಸೋಮವಾರ ಕಡೇ ದಿನ: ಮೊದಲ ಹಂತದ ಚುನಾವಣೆ ವೇಳಾಪಟ್ಟಿ ಪ್ರಕಾರ ನಾಮಪತ್ರ ಸಲ್ಲಿಸಲು ಸೋಮವಾರ (ಡಿ.14) ಕೊನೆಯ ದಿನವಾಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು