ಬುಧವಾರ, ಅಕ್ಟೋಬರ್ 20, 2021
29 °C

ಇಳಿದ ಪರೀಕ್ಷೆ ಸಂಖ್ಯೆ, ಮೂವರಿಗೆ ಸೋಂಕು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಾಮರಾಜನಗರ: ಜಿಲ್ಲೆಯಲ್ಲಿ ಮಂಗಳವಾರ 1098 ಮಂದಿಯ ಕೋವಿಡ್‌ ಪರೀಕ್ಷಾ ವರದಿ ಬಂದಿದ್ದು, ಮೂವರಿಗೆ ಸೋಂಕು ಖಚಿತವಾಗಿದೆ. ಎಂಟು ಮಂದಿ ಗುಣಮುಖರಾಗಿದ್ದಾರೆ. ಸಾವು ಸಂಭವಿಸಿಲ್ಲ.   

ಕೋವಿಡ್‌ ದೃಢಪಟ್ಟವರಲ್ಲಿ ಇಬ್ಬರು ‌ಗುಂಡ್ಲುಪೇಟೆ ತಾಲ್ಲೂಕಿನವರು. ಇನ್ನೊಬ್ಬರು ಹನೂರು ತಾಲ್ಲೂಕಿನವರು.

ಸೋಂಕು ಮುಕ್ತರ ಸಂಖ್ಯೆ ಹೆಚ್ಚಿರುವುದರಿಂದ ಸೋಂಕಿತರ ಸಂಖ್ಯೆ 44ಕ್ಕೆ ಇಳಿದಿದೆ. ಇಬ್ಬರು ಐಸಿಯುನಲ್ಲಿ, 17 ಮಂದಿ ಹೋಂ ಐಸೊಲೇಷನ್‌ನಲ್ಲಿದ್ದಾರೆ.

ಜಿಲ್ಲೆಯಲ್ಲಿ ಇದುವರೆಗೆ 32,447 ಪ್ರಕರಣ ದೃಢಪಟ್ಟಿವೆ. 31,865 ಮಂದಿ ಗುಣಮುಖರಾಗಿದ್ದಾರೆ. ಕೋವಿಡ್‌ ಹಾಗೂ ಕೋವಿಡ್‌ಯೇತರ ಕಾರಣಗಳಿಂದ 579 ಮಂದಿ ಮೃತಪಟ್ಟಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.