ಮಂಗಳವಾರ, ಅಕ್ಟೋಬರ್ 27, 2020
28 °C

ಚಾಮರಾಜನಗರ: ಮೂರು ಸಾವು, 69 ಹೊಸ ಪ್ರಕರಣ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಾಮರಾಜನಗರ: ಜಿಲ್ಲೆಯಲ್ಲಿ ಮಂಗಳವಾರ ಕೋವಿಡ್‌ನಿಂದಾಗಿ ಮೂವರು ಮೃತಪಟ್ಟಿದ್ದಾರೆ. 69 ಹೊಸ ಕೋವಿಡ್‌ ಪ್ರಕರಣಗಳು ದೃಢಪಟ್ಟಿವೆ. 69 ಮಂದಿ ಗುಣಮುಖರಾಗಿದ್ದಾರೆ.

ಹನೂರಿನ ನಿವಾಸಿ 64 ಪುರುಷ ಸೋಮವಾರ ಕೋವಿಡ್‌ ಆಸ್ಪತ್ರೆಗೆ ದಾಖಲಾಗಿದ್ದರು.  ಸೋಮವಾರ ಮೃತಪಟ್ಟಿದ್ದಾರೆ. ಚಾಮರಾಜನಗರದ ನಿವಾಸಿ 54 ವರ್ಷದ ಪುರುಷ ಅ.9ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆಗೆ ಸ್ಪಂದಿಸದೆ ಸೋಮವಾರ ಮೃತಪಟ್ಟಿದ್ದಾರೆ. ಗುಂಡ್ಲುಪೇಟೆ ತಾಲ್ಲೂಕಿನ ಬಾಚಳ್ಳಿಯ 35 ವರ್ಷದ ಮಹಿಳೆ ಅ.11ರಂದು ಕೋವಿಡ್‌ ಆಸ್ಪತ್ರೆಗೆ ದಾಖಲಾಗಿದ್ದರು. ಸೋಮವಾರ ಮೃತಪಟ್ಟಿದ್ದಾರೆ. 

ಜಿಲ್ಲೆಯಲ್ಲಿ ಈವರೆಗೆ 5,060 ಕೋವಿಡ್‌ ಪ್ರಕರಣಗಳು ದೃಢಪಟ್ಟಿವೆ. 4,213 ಮಂದಿ ಗುಣಮುಖರಾಗಿದ್ದಾರೆ. 739 ಸಕ್ರಿಯ ಪ್ರಕರಣಗಳಿದ್ದು, 206 ಮಂದಿ ಹೋಂ ಐಸೊಲೇಷನ್‌ನಲ್ಲಿದ್ದಾರೆ. 42 ಮಂದಿ ಐಸಿಯುನಲ್ಲಿದ್ದಾರೆ.

ಕೋವಿಡ್‌ನಿಂದಾಗಿ 78 ಮಂದಿ ಮೃತಪಟ್ಟಿದ್ದಾರೆ. ಕೋವಿಡ್‌ಯೇತರ ಕಾರಣದಿಂದ 30 ಜನರು ಕೊನೆಯುಸಿರೆಳೆದಿದ್ದಾರೆ. 

ಮಂಗಳವಾರ ಜಿಲ್ಲೆಯಲ್ಲಿ 1,221 ಮಂದಿಯ ಗಂಟಲು ದ್ರವದ ಮಾದರಿಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. 1,158 ಮಂದಿಯ ವರದಿ ನೆಗೆಟಿವ್‌ ಬಂದಿವೆ. 63 ಮಂದಿಗೆ ಸೋಂಕು ಇರುವುದು ಖಚಿತವಾಗಿದೆ. ಆರು ಪ್ರಕರಣಗಳು ಮೈಸೂರಿನಲ್ಲಿ ದೃಢಪಟ್ಟಿವೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು