ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಾಮರಾಜನಗರ: ಮೂರು ಪ್ರಕರಣ ದೃಢ, ಒಬ್ಬರು ಗುಣಮುಖ

Last Updated 4 ಡಿಸೆಂಬರ್ 2021, 16:19 IST
ಅಕ್ಷರ ಗಾತ್ರ

ಚಾಮರಾಜನಗರ: ಜಿಲ್ಲೆಯಲ್ಲಿ ಶನಿವಾರ 1,725 ಮಂದಿಯ ಕೋವಿಡ್‌ ಪರೀಕ್ಷಾ ವರದಿ ಬಂದಿದ್ದು, ಗುಂಡ್ಲುಪೇಟೆಯ ವಿದ್ಯಾರ್ಥಿಯೊಬ್ಬ ಸೇರಿ ಮೂವರಿಗೆ ಸೋಂಕು ಇರುವುದು ಖಚಿತವಾಗಿದೆ. ಒಬ್ಬರು ಗುಣಮುಖರಾಗಿದ್ದಾರೆ. ಸಾವು ಸಂಭವಿಸಿಲ್ಲ.

ಸೋಂಕಿತರ ಸಂಖ್ಯೆ 41ಕ್ಕೆ ಏರಿದೆ. 11 ಮಂದಿ ಹೋಂ ಐಸೊಲೇಷನ್‌ನಲ್ಲಿದ್ದಾರೆ.

ಜಿಲ್ಲೆಯಲ್ಲಿ ಈವರೆಗೆ ದೃಢಪಟ್ಟ ಪ್ರಕರಣಗಳ ಸಂಖ್ಯೆ 32,649ಕ್ಕೆ ಏರಿದೆ. 32,068 ಮಂದಿ ಗುಣಮುಖರಾಗಿದ್ದಾರೆ.

ಮಾರ್ಗಸೂಚಿ ಪಾಲಿಸಿ:ಕೋವಿಡ್-19ರ ಓಮೈಕ್ರಾನ್ ವೈರಸ್ ಹರಡುವಿಕೆ ತಡೆಗಟ್ಟಲು ಈಗಾಗಲೇ ಹೊರಡಿಸಿರುವ ಆದೇಶದ ಅನ್ವಯ ಮಾರ್ಗಸೂಚಿಗಳನ್ನು ಜಿಲ್ಲೆಯಾದ್ಯಂತ ಜಾರಿಗೊಳಿಸುವ ಸಂಬಂಧ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಆದೇಶ ಹೊರಡಿಸಿದ್ದಾರೆ.

ಡಿ.3ರ ಆದೇಶದಲ್ಲಿ ಹೊರಡಿಸಿರುವ ಮಾರ್ಗಸೂಚಿಗಳನ್ನು ಜಿಲ್ಲೆಯಾದ್ಯಂತ ಜಾರಿಗೊಳಿಸಬೇಕು. ಪರೀಕ್ಷೆ, ಪತ್ತೆ, ಚಿಕಿತ್ಸೆ, ಲಸಿಕಾಕರಣ ಮತ್ತು ಕೋವಿಡ್-19 ತಡೆ ನಿಯಮಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಬೇಕು.

ಸಭೆ, ಸಮಾರಂಭ, ಸಮ್ಮೇಳನ ಇತ್ಯಾದಿಗಳಲ್ಲಿ ಭಾಗವಹಿಸುವವರ ಸಂಖ್ಯೆಯನ್ನು 500 ಜನರಿಗೆ ಸೀಮಿತಗೊಳಿಸಲಾಗಿದೆ. ಇಂತಹ ಸಂದರ್ಭಗಳಲ್ಲಿ ಕೋವಿಡ್-19 ಶಿಷ್ಟಾಚಾರ ಕಟ್ಟುನಿಟ್ಟಾಗಿ ಪಾಲಿಸಬೇಕು. ಇವುಗಳನ್ನು ಜಾರಿಗೊಳಿಸುವುದು, ಸಂಘಟಕರ ಹಾಗೂ ವ್ಯವಸ್ಥಾಪಕರ ಜವಾಬ್ದಾರಿಯಾಗಿರುತ್ತದೆ.

ಶೈಕ್ಷಣಿಕ ಸಂಸ್ಥೆಗಳಲ್ಲಿ ಸಾಂಸ್ಕೃತಿಕ ಚಟುವಟಿಕೆಗಳು, ಹಬ್ಬಗಳು ಮತ್ತು ಸಮಾರಂಭಗಳನ್ನು ಜ.15ರವರೆಗೆ ಮುಂದೂಡಬೇಕು. ಶಾಲಾ ಕಾಲೇಜುಗಳಿಗೆ ತೆರಳುವ 18 ವರ್ಷದೊಳಗಿನ ಮಕ್ಕಳ ಪೋಷಕರು ಕಡ್ಡಾಯವಾಗಿ ಎರಡು ಡೋಸ್ ಕೋವಿಡ್ ಲಸಿಕೆ ಪಡೆಯಬೇಕು ಎಂದು ಚಾರುಲತಾ ಸೋಮಲ್ ಆದೇಶದಲ್ಲಿ ತಿಳಿಸಿದ್ದಾರೆ.

ಕೋವಿಡ್‌ ಕೇರ್‌ ಕೇಂದ್ರ:ತಾಲ್ಲೂಕಿನ ಮಾದಾಪುರ ಗ್ರಾಮದಲ್ಲಿರುವ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿ ವಸತಿ ಗೃಹದ ಕಟ್ಟಡ ಹಾಗೂ ಸಂತೇಮರಹಳ್ಳಿಯ ತಾಯಿ ಮಕ್ಕಳ ಆಸ್ಪತ್ರೆಯನ್ನು ಕೋವಿಡ್ ಕೇರ್ ಕೇಂದ್ರ ಆಗಿ ಪರಿವರ್ತಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT