ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಾಮರಾಜನಗರ: 12 ಮಂದಿ ಗುಣಮುಖ, ಮೂರು ಹೊಸ ಪ್ರಕರಣ

Last Updated 29 ನವೆಂಬರ್ 2020, 15:06 IST
ಅಕ್ಷರ ಗಾತ್ರ

ಚಾಮರಾಜನಗರ: ಜಿಲ್ಲೆಯಲ್ಲಿ ಭಾನುವಾರ 12 ಮಂದಿ ಕೋವಿಡ್‌ನಿಂದ ಗುಣಮುಖರಾಗಿದ್ದು, ಕೇವಲ ಮೂರು ಹೊಸ ಪ್ರಕರಣಗಳು ದೃಡಪಟ್ಟಿವೆ. ಸಾವಿನ ಪ್ರಕರಣ ವರದಿಯಾಗಿಲ್ಲ.

ಹೆಚ್ಚು ಮಂದಿ ಸೋಂಕು ಮುಕ್ತರಾಗಿರುವುದರಿಂದ ಸಕ್ರಿಯ ಪ್ರಕರಣಗಳ ಸಂಖ್ಯೆ ಮತ್ತಷ್ಟು ಕುಸಿದಿದ್ದು, ಸದ್ಯ 81 ಪ್ರಕರಣಗಳಿವೆ. ಈ ಪೈಕಿ 45 ಮಂದಿ ಹೋಂ ಐಸೊಲೇಷನ್‌ನಲ್ಲಿದ್ದಾರೆ. ಒಂಬತ್ತು ಮಂದಿ ಐಸಿಯುನಲ್ಲಿದ್ದಾರೆ.

ಜಿಲ್ಲೆಯಲ್ಲಿ ಈವರೆಗೆ 6,323 ಮಂದಿಗೆ ಸೋಂಕು ದೃಢಪಟ್ಟಿದೆ. 6,114 ಮಂದಿ ಗುಣಮುಖರಾಗಿದ್ದಾರೆ. ಕೋವಿಡ್‌ನಿಂದಾಗಿ 108 ಮಂದಿ, ಕೋವಿಡ್‌ಯೇತರ ಕಾರಣಗಳಿಂದ 20 ಜನರು ಮೃತಪಟ್ಟಿದ್ದಾರೆ.

ಭಾನುವಾರ 901 ಮಂದಿಯ ಗಂಟಲು ದ್ರವ ಮಾದರಿಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದ್ದು, 898 ಮಂದಿಯ ವರದಿ ನೆಗೆಟಿವ್‌ ಬಂದಿವೆ.

ಜಿಲ್ಲೆಯಲ್ಲಿ ಇದುವರೆಗೆ 1,25,515 ಕೋವಿಡ್‌ ಪರೀಕ್ಷೆಗಳನ್ನು ನಡೆಸಲಾಗಿದ್ದು, 1,19,363 ಮಂದಿಯ ವರದಿಗಳು ನೆಗೆಟಿವ್ ಬಂದಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT