ಸೋಮವಾರ, ಅಕ್ಟೋಬರ್ 21, 2019
25 °C

ಹುಲಿ ದಾಳಿಗೆ ರೈತ ಬಲಿ

Published:
Updated:

ಗುಂಡ್ಲುಪೇಟೆ: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಹುಲಿ ದಾಳಿಗೆ ರೈತನೊಬ್ಬ ಪ್ರಾಣ ಕಳೆದುಕೊಂಡು ತಿಂಗಳು ಕಳೆಯುವುದರೊಳಗೆ ಮತ್ತೊಬ್ಬ ರೈತನನ್ನು ಹುಲಿಯೊಂದು ಕೊಂದಿದೆ. 

ಗೋಪಾಲ ಸ್ವಾಮಿ ಬೆಟ್ಟ ವಲಯದ ಚೌಡಹಳ್ಳಿ ಗ್ರಾಮದ ಬಳಿ ಜಮೀನಿನಲ್ಲಿ ಹಸುಗಳನ್ನು ಮೇಯುಸುತ್ತಿದ್ದಾಗ ಶಿವಲಿಂಗಪ್ಪ (60) ಎಂಬುವರ ಮೇಲೆ ಹುಲಿ ದಾಳಿ ಮಾಡಿದೆ. 

ವಿಷಯ ತಿಳಿದು ಗ್ರಾಮಸ್ಥರು ಸ್ಥಳಕ್ಕೆ ಧಾವಿಸಿದ್ದಾರೆ. ಸ್ಥಳದಲ್ಲೇ ಅಡಗಿದ್ದ ಹುಲಿ, ಜನರ ಗದ್ದಲ ಹೆಚ್ಚಾಗುತ್ತಿದ್ದಾಂತೆ ಜನರ ಮಧ್ಯೆ ಘರ್ಜಿಸುತ್ತ ಓಡಿತು. ಹುಲಿ ಕಾಣಿಸಿಕೊಂಡದ್ದರಿಂದ ಜನರು ಭಯಭೀತರಾಗಿ ಓಡಿದರು. 

ಸ್ಥಳಕ್ಕೆ ಅರಣ್ಯಾಧಿಕಾರಿ, ಹಾಗೂ ಸಿಬ್ಬಂದಿ ಬೇಟಿ ನೀಡಿದ್ದರಿಂದ ಗ್ರಾಮಸ್ಥರು ಪ್ರತಿಭಟಸಿದರು.

ಅಧಿಕಾರಿಗಳು ಕಾಟಾಚಾರಕ್ಕೆ ಶೋಧ ಕಾರ್ಯಾಚರಣೆ ಮಾಡುತ್ತಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಚುನಾವಣಾ ಫಲಿತಾಂಶ 2019 | ಹರಿಯಾಣ ಮತ್ತು ಮಹಾರಾಷ್ಟ್ರ ವಿಧಾನಸಭೆ 2019 ಚುನಾವಣೆಗೆ ಸಂಬಂಧಿಸಿದ ಸಮಗ್ರ ಸುದ್ದಿ, ಮಾಹಿತಿ, ವಿಶ್ಲೇಷಣೆ ಇಲ್ಲಿ ಲಭ್ಯ.

ಮಹಾರಾಷ್ಟ್ರ ವಿಧಾನಸಭೆಯ ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ

ಹರಿಯಾಣ ವಿಧಾನಸಭೆಯ ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ

Post Comments (+)