ಬುಧವಾರ, 9 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಗುಂಡ್ಲುಪೇಟೆ | ಹುಲಿ ದಾಳಿಗೆ ಎರಡು ಹಸು ಸಾವು

Published : 10 ಸೆಪ್ಟೆಂಬರ್ 2024, 14:06 IST
Last Updated : 10 ಸೆಪ್ಟೆಂಬರ್ 2024, 14:06 IST
ಫಾಲೋ ಮಾಡಿ
Comments

ಗುಂಡ್ಲುಪೇಟೆ: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಗುಂಡ್ಲುಪೇಟೆ ಬಫರ್ ಜೋನ್ ವಲಯ ವ್ಯಾಪ್ತಿಯ ವಡೆಯನಪುರ ಗ್ರಾಮದಲ್ಲಿ ಹುಲಿ ದಾಳಿಗೆ ಎರಡು ಹಸುಗಳು ಮೃತಪಟ್ಟಿದ್ದು, ಮತ್ತೊಂದು ಹಸುವಿನ ಸ್ಥಿತಿ ಚಿಂತಾಜನಕವಾಗಿದೆ.

ಗ್ರಾಮದ ರವೀಶ್ ಅವರಿಗೆ ಸೇರಿದ ಹಸುಗಳಾಗಿದ್ದು, ಜಮೀನಿನಲ್ಲಿ ಮೇಯಲು ಬಿಟ್ಟಿದ್ದ ವೇಳೆ ರೈತನ ಎದುರೇ ಹುಲಿ ಮೂರು ಹಸುಗಳ ಮೇಲೆ ದಾಳಿ ಮಾಡಿದೆ. ಇವುಗಳಲ್ಲಿ ಎರಡು ಅಸುನೀಗಿದ್ದು, ಒಂದು ಹಸುವಿನ ಸ್ಥಿತಿ ಚಿಂತಾಜನಕವಾಗಿದೆ. ಇದರಿಂದ ಮಾಲೀಕರಿಗೆ ಅಪಾರ ನಷ್ಟವಾಗಿದೆ.

ಕೆಲ ದಿನಗಳ ಹಿಂದೆಯಷ್ಟೇ ವಡೆಯನಪುರದಲ್ಲಿ ಚಿರತೆಯೊಂದು ಬೋನಿಗೆ ಸೆರೆಯಾಗಿತ್ತು. ಇದರಿಂದ ನಿಟ್ಟುಸಿರು ಬಿಟ್ಟಿದ್ದ ರೈತರು, ಇದೀಗ ಹುಲಿ ದಾಳಿಯನ್ನು ಕಂಡು ಬೆಚ್ಚಿ ಬಿದ್ದಿದ್ದಾರೆ. ಗ್ರಾಮದ ಸಮೀಪವೇ ಹುಲಿ ದಾಳಿ ನಡೆದಿರುವುದು ಗ್ರಾಮಸ್ಥರನ್ನು ಚಿಂತೆಗೀಡು ಮಾಡಿದೆ.

ಸ್ಥಳಕ್ಕೆ ಗುಂಡ್ಲುಪೇಟೆ ಬಫರ್ ಜೋನ್ ವಲಯ ಅರಣ್ಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಭೇಟಿ ಪರಿಶೀಲನೆ ನಡೆಸಿದ್ದಾರೆ.

ಸೂಕ್ತ ಪರಿಹಾರಕ್ಕೆ ಒತ್ತಾಯ:

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಗುಂಡ್ಲುಪೇಟೆ ಬಫರ್ ಜೋನ್ ವಲಯ ವ್ಯಾಪ್ತಿಯ ವಡೆಯನಪುರ ಗ್ರಾಮದಲ್ಲಿ ಹುಲಿ ದಾಳಿಗೆ ಎರಡು ಹಸುಗಳು ಮೃತಪಟ್ಟಿದ್ದು, ಮತ್ತೊಂದು ಹಸುವಿನ ಸ್ಥಿತಿ ಚಿಂತಾಜನಕವಾಗಿದೆ.ಹುಲಿ ದಾಳಿಯಿಂದ ಹಸುಗಳು ಸಾವನ್ನಪ್ಪಿದ್ದು, ಮಾಲೀಕನಿಗೆ ಸಾವಿರಾರು ರೂಪಾಯಿ ನಷ್ಟವಾಗಿದೆ. ಸಂಬಂಧಪಟ್ಟ ಅರಣ್ಯಾಧಿಕಾರಿಗಳು ಶೀಘ್ರದಲ್ಲೇ ಸೂಕ್ತ ಪರಿಹಾರ ನೀಡಬೇಕು ಎಂದು ರೈತರು ಒತ್ತಾಯಿಸಿದ್ದಾರೆ.

ಹುಲಿ ದಾಳಿಯಿಂದ ಮೃತಪಟ್ಟಿರುವ ಹಸು
ಹುಲಿ ದಾಳಿಯಿಂದ ಮೃತಪಟ್ಟಿರುವ ಹಸು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT